ಕೋಲಾರ : ಜಿಲ್ಲಾ ಔಷಧಿ ನಿಯಂತ್ರಕರಿಗೆ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಡ್ರಗ್ಸ್ ಮಾರಾಟ ಬಗ್ಗೆ ವರದಿ ಮಾಡುವಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಿ ಯೋಜನೆಗಳನ್ನು ನೀಡಲು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಕಾರ್ಯಕ್ರಮ ಹಾಗೂ ತೀವ್ರತರ ಅತೀಸಾರ ಭೇದಿ ತಡೆಗಟ್ಟುವ ಅಭಿಯಾನ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಕಾರ್ಯಪಡೆ ಸಮಿತಿಯ ಸಭೆಯನ್ನು ಉದ್ದೇಶಿಸಿ […]
ಕೋಲಾರ: ಸ್ವಯಂ ಉದ್ಯೋಗಕ್ಕೆ ಆಸಕ್ತಿ ಇರುವ ಯುವಕರು ಹಾಗೂ ಮಹಿಳೆಯರಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊನ್ನೇನಹಳ್ಳಿ, ಕೋಲಾರದಲ್ಲಿ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. 1992ರಲ್ಲಿ ಆರಂಭವಾದ ಈ ಸಂಸ್ಥೆ ಈಗಾಗಲೇ 33 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 37 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಿದೆ.ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕೆನರಾ ಬ್ಯಾಂಕ್ ಶತಮಾನೋತ್ಸವ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಅಣಬೆ […]
ಶ್ರೀನಿವಾಸಪುರ : ಪಂಚೇಂದ್ರಯಗಳಲ್ಲಿ ಯಾವುದೇ ಅಂಗವು ಸ್ವಾದೀನ ಕಳೆದುಕೊಂಡರು ಸಹ ಸಮಾಜವು ಅವರನ್ನ ಬೇರೆ ರೀತಿಯಲ್ಲಿಯೇ ಕಾಣುತ್ತದೆ . ಅದನ್ನ ತಪ್ಪಿಸುವ ಸಲುವಾಗಿ ಇಲಾಖೆ ಸಹಯೋಗದಲ್ಲಿ ಉಚಿತವಾಗಿ ಶ್ರವಣ ಸಾಧನಾ ಸಲಕರಣೆಗಳ ವಿತರಿಸಲಾಗುತ್ತಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ತಿಳಿಸಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಉಚಿತವಾಗಿ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಈ ಹಿಂದೆ ವಿವಿಧ 21 ಶ್ರವಣ ನ್ಯೂನ್ಯತೆವುಳ್ಳ ವಿಧ್ಯಾರ್ಥಿಗಳಿಗೆ ಬೆಂಗಳೂರಿನ ಅಲಿಮಾಕೊ […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯ ಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ […]
ಶ್ರೀನಿವಾಸಪುರ : ತಾಲೂಕಿನ ದಳಸನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದ ನಿವೇಶನ ರಹಿತರು ಸರಕಾರಿ ಜಾಗದಲ್ಲಿ ತಾವೇ ನಿರ್ಮಿಸಿಕೊಂಡಿರುವ ಮನೆಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಒತ್ತಾಯಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಾ.ಪಂ ವ್ಯವಸ್ಥಾಪಕ ಮಂಜುನಾಥ್ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು 2016 ರಲ್ಲಿ ಗ್ರಾಮದ ಎಲ್ಲಾ ಜನ ವಿಭಾಗದವರು ಸೇರಿ ನಿರ್ಗತಿಕರಿಗೆ ನಿವೇಶನಗಳನ್ನು […]
ಕೋಲಾರ : ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಗುರಿ ಸಾಧನೆಯ ಹಿತದೃಷ್ಟಿಯಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಕೋಲಾರ ಜಿಲ್ಲಾ ಘಟಕದ ಸಾಮಾನ್ಯ ಸಭೆ ಭಾನುವಾರ ನಗರದ ಅಲ್ಲಮೀನ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಹಾಗೂ ನಿಗಮ/ನಿಯಮಿತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮುಸ್ಲಿಂ ಸಮುದಾಯದ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸಿದ್ದರು. ಸಮುದಾಯದ ಶಿಕ್ಷಣ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸಬಲಿಕರಣಕ್ಕಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಿ, ಈ […]
ರಾಯಚೂರು : ರಾಯಚೂರಿನ ಸಹಾರ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಣ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ, ರಾಯಚೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ಶಿಕ್ಷಣ ಸ್ಥಾಪಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದು ಅಭಿಪ್ರಾಯಪಟ್ಟರು. ಅವರು ಮುಂದುವರೆದು, ಮುಸ್ಲಿಮರು ತಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು. ದೇಶದ ಮೊದಲ […]
ಶ್ರೀನಿವಾಸಪುರ: ತಾಲೂಕಿನ ಕಶೆಟ್ಟಿಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕಿ ವರಲಕ್ಷ್ಮಿಮ್ಮ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಪೋಷಕರು ಶುಕ್ರವಾರ ಎರಡನೇ ದಿನವೂ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬೆಳಿಗ್ಗೆಯಿಂದಲೇ ಶಾಲೆಗೆ ಬೀಗ ಜಡಿದು ಶಿಕ್ಷಕಿ ವರಲಕ್ಷ್ಮಿಯನ್ನು ಹಿಂತಿರುಗಿಸಲು ಆಗ್ರಹಿಸಿದರು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಶ್ರಮಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದ ಶಿಕ್ಷಕಿ ವರಲಕ್ಷ್ಮಿಯವರನ್ನು ಇದೇ ಶಾಲೆಯಲ್ಲಿ ಮುಂದುವರೆಸಬೇಕು ಎಂಬ ಒಕ್ಕೊರಲಿನ ಬೇಡಿಕೆಯನ್ನು ಪೋಷಕರು ಮುಂದಿರಿಸಿದರು. ಸ್ಥಳಕ್ಕೆ ಆಗಮಿಸಿದ ಬಿಇಒ ಬಿ.ಸಿ. ಮುನಿಲಕ್ಷ್ಮಯ್ಯ ಪೋಷಕರ ಬೇಡಿಕೆಯನ್ನು ಆಲಿಸಿ, […]
ಬೆಂಗಳೂರು : ರಾಜ್ಯದಲ್ಲಿ ಉರ್ದು ಭಾಷೆಯ ಪ್ರಚಾರ ಹಾಗೂ ಉರ್ದು ಮಾಧ್ಯಮ ಶಾಲೆಗಳ ಉಳಿವಿನ ಹೋರಾಟಕ್ಕೆ ಬಲ ತುಂಬುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರದ ಉರ್ದು ಹೈ ಸ್ಕೂಲ್ ಟೀಚರ್ಸ್ ಫೋರಂ ರಾಜ್ಯಮಟ್ಟದಲ್ಲಿ ಅಧಿಕೃತವಾಗಿ ಸ್ಥಾಪನೆಯಾಗಿದೆ. ಈ ವೇದಿಕೆ ಕರ್ನಾಟಕ ಸ್ಟೇಟ್ ಗವರ್ಣ್ಮೆಂಟ್ ಮುಸ್ಲಿಂ ಎಂಪ್ಲಾಯೀಸ್ ವೆಲ್ಫೇರ್ ಅಸೋಸಿಯೇಷನ್ (MEWA) ಆಶ್ರಯದಲ್ಲಿ ಬೆಳಕಿಗೆ ಬಂದಿದ್ದು, ಗುರುವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮೆವಾ ಅಧ್ಯಕ್ಷ ಸಲೀಂ ಚಿಶ್ಮನಿ ಹಾಗೂ ಪ್ರಧಾನ ಕಾರ್ಯದರ್ಶಿ ಆಡಂ ಅಲಿ ಪೀರ್‌ಜಾದೆ ಅವರು ನೂತನ […]

