ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಚೆಕ್ ಪಡೆದುಕೊಂಡಿರುವ ಹಾಲು ಉತ್ಪಾದಕರು ಮತ್ತೆ ಕಡ್ಡಾಯವಾಗಿ ರಾಸುಗಳನ್ನು ಖರೀದಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರಿಗೆ ಮೃತ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಬೇರೆ ಬೇರೆ ಕಾರಣಗಳಿಂದ ಹಸು ಕಳೆದುಕೊಂಡ 14 ಹಾಲು ಉತ್ಪಾದಕರಿಗೆ ರೂ.7.90 ಲಕ್ಷ ವಿಮಾ ಪರಿಹಾರ ನೀಡಲಾಗಿದೆ. ಕರ್ನಾಟಕ ಹಾಲು ಮಹಾ ಮಂಡಳಿ ವತಿಯಿಂದ ಕಟ್ಟಡ ನಿರ್ಮಾಣ ಅನುದಾನವಾಗಿ ಶೀಗಲಪಾಳ್ಯ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರು ತಮ್ಮ ವೃತ್ತಿ ಘನತೆ ಕಾಪಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪತ್ರಕರ್ತರೆಂದು ಹೇಳಿಕೊಳ್ಳಲು ಅಂಜಿಕೆ ಪಡುವ ಪರಿಸ್ಥಿತಿ ನಿರ್ಮಾಣವಾದೀತು, ದಂಧೆ ಮಾಡುವಂತಿದ್ದರೆ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಎಚ್ಚರಿಸಿದರು.ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾದಿನಾಚರಣೆ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೋವಿಡ್‍ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಸಂಘದಿಂದ 10 ಸಾವಿರ ರೂ ಚೆಕ್ ವಿತರಿಸಿ ಮಾತನಾಡಿದ ಅವರು, ಕಾಡಿಸಿ,ಪೀಡಿಸುವ ಮತ್ತು ದಂಧೆ ನಡೆಸುವವರು ಈ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.15:ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 21ನೇ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಜುಲೈ 16 ರಂದು ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 9-30 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ವಿ.ಮುನಿರಾಜು ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್‍ಕುಮಾರ್ ತಿಳಿಸಿದ್ದಾರೆ.ಸಂಘದ ವತಿಯಿಂದ ನೀಡಲಾಗುವ ಪ್ರಶಸ್ತಿಗಳು:ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ: ಟೇಕಲ್‍ನ ಕೋಲಾರ ಪತ್ರಿಕೆ ಹೋಬಳಿ ವರದಿಗಾರ ಲಕ್ಷ್ಮೀಶ, ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ: ಶ್ರೀನಿವಾಸಪುರದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಜ್ಯದ ಕೈಗಾರಿಕೆಗಳಲ್ಲಿ 10 ಸಾವಿರ ಕೋಟಿ ರೂಪಾಯಿಗಳ ಸಿಎಸ್‍ಆರ್ ನಿಧಿ ಲಭ್ಯವಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಸಮುದಾಯ ಸೇವೆ ಮಾಡಲು ರೋಟರಿ ಪದಾಧಿಕಾರಿಗಳು ಮುಂದಾಗಬೇಕೆಂದು ರೋಟರಿ ನಿಯೋಜಿತ ರಾಜ್ಯಪಾಲ ಉದಯಕುಮಾರ್ ಕೆ.ಭಾಸ್ಕರ್ ಹೇಳಿದರು.ನಗರದ ಅಂತರಗಂಗೆ ಬೆಟ್ಟದ ರೆಸಾರ್ಟ್ ಸಭಾಂಗಣದಲ್ಲಿ ಗುರುವಾರ ಸಂಜೆ ಕೋಲಾರ ರೋಟರಿ ಸೆಂಟ್ರಲ್‍ನ ನೂತನ ಅಧ್ಯಕ್ಷರಾಗಿ ಸಿಎಂಆರ್ ಶ್ರೀನಾಥ್ ಪದಗ್ರಹಣ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.ಕೈಗಾರಿಕೆಗಳ ಸಿಎಸ್‍ಆರ್ ನಿಧಿಯನ್ನು ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪ್ರತಿ ರೋಟರಿ ಘಟಕವು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಜಿಲ್ಲಾದ್ಯಂತ ಧಾರಾಕಾರ ಮಳೆ: ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ, ಕುಂಟೆಗಳು, ಹಳ್ಳಗಳಲ್ಲಿ ನೀರು ಹರಿಯುತ್ತಿದೆ. ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು, ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ.2021ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು . ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು . ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :- ಇಡೀ ಜಿಲ್ಲೆಗೆ ವಿದ್ಯುತ್ ಪೂರೈಸುವ ಕೆಪಿಟಿಸಿಎಲ್‌ನ ೨೨೦ ಕೆಎ.ಸ್ಟೇಷನ್‌ನ ೧೧೦ ಎಂ.ವಿ.ಎ ಪವರ್ ಸ್ವೀಕರಣಾ ಟ್ರಾನ್ಸ್‌ಫಾರ ಆಕಸ್ಮಿಕವಾಗಿ ಆಗ್ನಿಗೆ ಆಹುತಿಯಾಗಿ ಸುಮಾರು ೫ ಕೋಟಿಗೂ ನಷ್ಟ ಸಂಭವಿಸಿದೆ ಮತ್ತು ದಟ್ಟ ಹೊಗೆ ಆಕಾಶದೆತ್ತರಕ್ಕೆ ಆವರಿಸಿದ್ದು , ಜಿಲ್ಲಾದ್ಯಂತ ಕರೆಂಟ್ ಕಟ್ ಆಗಿದೆ . ನಗರದ ಹಾರೋಹಳ್ಳಿ ಸಮೀಪ ಇರುವ ಕೆಪಿಟಿಸಿಎಲ್‌ನ ೨೨೦ ಕೆವಿ ಸ್ಟೇಷನ್‌ನಲ್ಲಿ ಈ ದುರಂತ ಸಂಭವಿಸಿದ್ದು , ೬೬ ಕೆವಿ ಬುಸ್ಟಿಂಗ್ ಪ್ಲಾಷ್‌ನಿಂದಾಗಿ ಆಕಸ್ಮಿಕವಾಗಿ ಬೆಂಕಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು.ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ, ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಜು.10 ರಿಂದ ಮರುಬಳಕೆ ಸಾಧ್ಯವಿಲ್ಲದ ಪ್ಲಾಸ್ಟಿಕ್ ಪದಾರ್ಥಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ಈ ವಿಷಯದಲ್ಲಿ ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.ಪುರಸಭೆ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಮಾತನಾಡಿ, ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟದಿಂದ ಜನ, ಜಾನುವಾರು ತೊಂದರೆ ಅನುಭವಿಸುವಂತಾಗಿದೆ. ಆಕಸ್ಮಿಕವಾಗಿ ಪ್ಲಾಸ್ಟಿಕ್ ಸೇವಿಸಿದ ಜಾನುವಾರುಗಳು ಸಾವನ್ನಪ್ಪುತ್ತಿವೆ. […]