
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಕ್ಕಳ ಸಂತಸ ಕಲಿಕೆಗೆ ನಲಿ ಕಲಿ ಶಾಲೆ ಸಹಕಾರಿ. ಶಿಕ್ಷಕರು ಮಕ್ಕಳ ಮನಸ್ಸಿನೊಂದಿಗೆ ಮಕ್ಕಳಲ್ಲಿ ಬೆರೆತು ಆಟದ ಮೂಲಕ ಪಾಠ ಹೇಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಗೌಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ನಲಿ ಕಲಿ ಶಾಲೆ ಉದ್ಘಾಟಿಸಿ ಮಾತನಾಡಿ, ಕೋವಿಡ್ ಮಕ್ಕಳ ಸಹಜ ಕಲಿಕೆಗೆ ಪೆಟ್ಟು ಕೊಟ್ಟಿದೆ. ಆದರೂ ಅವನ್ನು ಕಲಿಕೆಯಿಂದ ದೂರ ಉಳಿಯದಂತೆ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಜಾರಿತೆ ತಂದಿದೆ. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಹಾಯ ಮಾಡುವಾಗ ಜಾತಿ,ಪಕ್ಷ ಮುಖ್ಯವಲ್ಲ ಮಾನವತ್ವ ಇರಬೇಕು ಎಂಬ ಭಾವನೆಯಿಂದ ನಾನು,ಶ್ರೀನಿವಾಸಗೌಡರು ಕೆಲಸ ಮಾಡಲು ಬಂದವರು, ನಮಗೆ ಗಿಲಿಟ್ ರಾಜಕಾರಣ ಗೊತ್ತಿಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು.ಶುಕ್ರವಾರ ತಾಲ್ಲೂಕಿನ ಹೋಳೂರು ಸೊಸೈಟಿ ಆವರಣದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ 1.5 ಕೋಟಿ ರೂ ಕೆಸಿಸಿ ಸಾಲ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ನಾನು ನಂಬಿರುವ ಬಾಬಾರ ಮೇಲೆ ಆಣೆ ಮಾಡಿ ಹೇಳುತ್ತೇನೆ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಲಸಿಕೆ ಪಡೆಯುವ ಮೂಲಕ ಧನುರ್ವಾಯು ಹಾಗೂ ಗಂಟಲು ಮಾರಿ ರೋಗಗಳಿಂದ ರಕ್ಷಣೆ ಪಡೆಯುವಂತೆ ಸಮುದಾಯ ಆರೋಗ್ಯಾಧಿಕಾರಿ ಡಾ.ಕೆ.ಜ್ಯೋತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಆರೋಗ್ಯ ಉಪಕೇಂದ್ರದಲ್ಲಿ ಸುತ್ತಮುತ್ತಲ ಗ್ರಾಮಗಳ ಶಾಲಾ ಮಕ್ಕಳಿಗೆ ಧನುರ್ವಾಯು ಹಾಗೂ ಗಂಟಲು ಮಾರಿ ತಡೆ ಲಸಿಕೆ ನೀಡಿ ಅವರು ಮಾತನಾಡುತ್ತಿದ್ದರು.ಕೋವಿಡ್ ಹೆಮ್ಮಾರಿಯಿಂದಾಗಿ ಇಂದು ಶಾಲೆಗಳಿಗೆ ಮಕ್ಕಳು ಬರುವಂತಿಲ್ಲ ಆದ್ದರಿಂದ ಶಿಕ್ಷಕರ ಸಹಕಾರ ಪಡೆದು ಗ್ರಾಮಗಳಲ್ಲೇ ಲಸಿಕೆ ಅಭಿಯಾನ ನಡೆಸುತ್ತಿರುವುದಾಗಿ ತಿಳಿಸಿದರು.ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನತೆಗೆ ಮಾರ್ಗದರ್ಶನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.5: ಕೋವಿಡ್ ಮೂರನೇ ಆಲೆ ಪ್ರಾರಂಭವಾಗಲಿದ್ದು ಸಾರ್ವಜನಿಕರು ಕೋವಿಡ್ ನಿಯಂತ್ರಣಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತಾಗ ಬೇಕು. ಸಾರ್ವಜನಿಕರು ಅರೋಗ್ಯ ಸಂರಕ್ಷಣೆಯ ಕ್ರಮಗಳನ್ನು ಪಾಲಿಸುವ ಮೂಲಕ ಸಹಕಾರ ನೀಡಿದಾಗ ಮಾತ್ರ ಕೋವಿಡ್ ಮೂರನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಮೈಸೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ಶಾಸ್ತ್ರದ ಮುಖ್ಯಸ್ಥ ಹಾಗೂ ಸಲಹೆಗಾರರಾದ ಡಾ.ಸತ್ಯನಾರಾಯಣ ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯ ಕೋವಿಡ್ ಮತ್ತು ಪೋಸ್ಟ್ ಕೋವಿಡ್ ನಿರ್ವಹಣೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿ ಏರ್ಪಡಿಸಿದ್ದ ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆ ಪಟ್ಟಣದಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ತಯಾರಿಸಲು ಅನುಮೋದನೆ ನೀಡಿತು.ಸಭೆ ಪ್ರಾರಂಭವಾಗುತ್ತಿದ್ದಂತೆ 15ನೇ ಹಣಕಾಸು ಯೋಜನೆಯ ಎರಡು ವಿಭಾಗಗಳಲ್ಲಿ ಕ್ರಮವಾಗಿ ರೂ.141 ಲಕ್ಷ ಹಾಗೂ ರೂ.110 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ತಯಾರಿಸಲು ಸಭೆಯ ಸಮ್ಮತಿ ಕೇಳಲಾಯಿತು. ಈ ಬಗ್ಗೆ ಕೆಲವು ಸದಸ್ಯರು ಎತ್ತಿದ ಆಕ್ಷೇಪಣೆಗೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಉತ್ತರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 4 : ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿನಿತ್ಯ ಸೇವಿಸಬೇಕು. ಮಕ್ಕಳು ನಾಲಿಗೆಗೆ ರುಚಿ ನೀಡುವ ಅಪೌಷ್ಠಿಕ ಆಹಾರಕ್ಕೆ ಮಾರು ಹೋಗಿದ್ದಾರೆ. ಮನೆಯಲ್ಲಿ ಮಾಡುವ ಮುದ್ದೆ, ಚಪಾತಿ ಊಟ, ಸೊಪ್ಪು, ತರಕಾರಿ ಸಾರು ಸೇವನೆಯನ್ನು ಕಡಿಮೆ ಮಾಡಿದ್ದಾರೆ. ಮಕ್ಕಳ ಮನಸ್ಸನ್ನು ಅರಿತ ಎಂ.ಟಿ.ಆರ್ ರವರು ಮಕ್ಕಳಿಗಾಗಿ ಪೌಷ್ಠಿಕಾಂಶಯುಕ್ತ ಉಪ್ಪಿಟ್ಟು ಮತ್ತು ದಾಲ್ ಓಟ್ಸ್ಗಳನ್ನು ನೀಡುತ್ತಿರುವುದು ಸಂತೋಷದ ವಿಷಯ ಎಂದು ಮುದುವತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರ ಕುಮಾರ್ ಅಭಿಪ್ರಾಯಪಟ್ಟರು.ಕೋಲಾರ ತಾಲ್ಲೂಕು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಇಂದಿರಾ ನಗರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ‘ನಾನು ಶಾಸಕನಾಗಿದ್ದಾಗ ಬಡವರನ್ನು ಗುರುತಿಸಿ ಮನೆ ನಿವೇಶನ ವಿತರಣೆ ಮಾಡಿದ್ದೆ. ಹಕ್ಕು ಪತ್ರಗಳಲ್ಲಿ ಸಣ್ಣ ಪುಟ್ಟ ತಪ್ಪುಗಳಿದ್ದಲ್ಲಿ ಸಂಬಂಧಪಟ್ಟ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಬಂಗಾರಪೇಟೆ, ಆ-3, ಗೋಮಾಳ ಹಾಗೂ ಅರಣ್ಯ ಭೂಮಿ ಮದ್ಯೆ ಇರುವ ಸಮಸ್ಯೆ ಬಗೆ ಹರಿಸಲು ಸರ್ವೆ ಮಾಡಿಸಿ ಗಡಿ ಗುರ್ತಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಆಗುತ್ತಿರುವ ಸಮಸ್ಯೆಗೆ ಅಂತ್ಯ ಹೇಳಬೇಕೆಂದು ರೈತ ಸಂಘದಿಂದ ವಲಯ ಅರಣ್ಯ ಅಧಿಕಾರಿಗಳ ಕಛೇರಿ ಮುಂದೆ ಹೋರಾಟ ಮಾಡಿ ಅರಣ್ಯ ಅಧಿಕಾರಿ ಮಂಜುನಾಥ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಒಂದು ವಾರದೊಳಗೆ ಗಡಿ ಭಾಗಗಳಾದ ಕಾಮಸಮುದ್ರ, ಬೂದಿಕೋಟೆ ವ್ಯಾಪ್ತಿಯ ಗೋಮಾಳ, ಅರಣ್ಯ ಭೂಮಿ ಸಮಸ್ಯೆ ಸರ್ವೆ ಮಾಡಿಸಿ ಇತ್ಯರ್ಥಿ […]