
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.27: ಜಾತಿ ಮತ್ತು ಧರ್ಮಾತೀತವಾಗಿ ಪ್ರತಿಯೊಬ್ಬರು ಸಹ ನಡೆದುಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾದ ನಾಡ ಪ್ರಭು ಕೆಂಪೇಗೌಡರ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಸಿಎಂಆರ್ ಮಂಡಿ ಮಾಲೀಕ ಸಿಎಂಆರ್ ಶ್ರೀನಾಥ್ ಹೇಳಿದರು.ನಗರದ ಹೊರವಲಯದ ಎಪಿಎಂಸಿ ಸಭಾಂಗಣದಲ್ಲಿ ಕೆಂಪೇಗೌಡರ ಬಳಗದಿಂದ ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೊಳಿಸಿ ಮಾತನಾಡಿ, ಸರ್ವಧರ್ಮ ಸಮನ್ವಯಕಾರ ಕೆಂಪೇಗೌಡರು 500 ವರ್ಷಗಳ ಹಿಂದೆಯೇ ಜಾತಿಗೊಂದು ಪೇಟೆಯನ್ನು ತೆರೆಯುವ ಮೂಲಕ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಪತ್ರಿಕಾ ವೃತ್ತಿ ಅತ್ಯಂತ ಪವಿತ್ರವಾಗಿದ್ದು , ಜನತೆಗೆ ಸತ್ಯ ಸಂಗತಿ ತಿಳಿಸುವಾಗ ನಾವು ನಿಷ್ಟೂರತೆಯಿಂದ ಇರಬೇಕು , ಸಮಾಜಕ್ಕಾಗಿ ನಾವು ಎಂಬ ಭಾವನೆ ಇರಬೇಕು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ತಿಳಿಸಿದರು . ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಕೋವಿಡ್ ಹಿನ್ನೆಲೆ ಸರಳವಾಗಿ ಆಚರಿಸಲಾದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು . […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಅನ್ನ ನೀಡುತ್ತಿರುವ ಬ್ಯಾಂಕಿನ ಕೆಲಸ ಬದ್ದತೆಯಿಂದ ಮಾಡಿ ಇಲ್ಲವಾದರೆ ಬೀದಿಗೆ ಬೀಳುತ್ತೀರಿ, ಠೇವಣಿ ಸಂಗ್ರಹಕ್ಕೆ ನಿಮಗೆ ನೀಡಿರುವ ಗುರಿ ಸಾಧನೆ ಮಾಡಿ ನಿಮ್ಮ ಕರ್ತವ್ಯ ನಿಷ್ಟೆ ಸಾಕ್ಷೀಕರಿಸಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಿಬ್ಬಂದಿಗೆ ತಾಕೀತು ಮಾಡಿದರು.ಭಾನುವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಏಳೂವರೆ ವರ್ಷಗಳ ಹಿಂದೆ ಬ್ಯಾಂಕಿನ ಸ್ಥಿತಿ ನೆನಪು ಮಾಡಿಕೊಳ್ಳಿ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಸರ್ಕಾರಿ ಕೆಲಸ ದೇವರ ಕೆಲಸ ಎಂಬ ಭಾವನೆಯೊಂದಿಗೆ ನಾನು ಕಳೆದ 31 ವರ್ಷಗಳ ಕಾಲ ನಿರ್ವಹಿಸಿದ್ದೇನೆ. ನನಗೆ ಕೆಲಸ ಸಮಯದಲ್ಲಿ ಸಹಕರಿಸಿದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಹಾಗು ಸಹುದ್ಯೋಗಿ ಮಿತ್ರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕೃಷ್ಣಮೂರ್ತಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ರಾಯಲ್ಪಾಡಿನ ಪೋಸ್ಟ್ ಆಫೀಸ್ನ ಕೃಷ್ಣಮೂರ್ತಿಯವರು ಎಬಿಪಿಎಂ ಆಗಿ 31ವರ್ಷ ಕಾರ್ಯನಿರ್ವಹಿಸಿರುವ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಲಾಖೆವತಿಯಿಂದ ಹಾಗು ಗ್ರಾಮದ ಮುಖಂಡರು ಸನ್ಮಾನಿಸಿದರು.ಅಧೀಕ್ಷಕರಾದ ಅವದೇಶ್ಸಿಂಗ್,ಮೆಲ್ವರಿಸಿಗಳಾದ ರಘುನಾಥ್,ಕೃಷ್ಣಪ್ಪ ಹಾಗು ಪೋಸ್ಟ್ಮಾಸ್ಟರ್ ಎಂ.ಕರುಣಾಕರ ಹಾಗು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಕೊರೋನಾ ಮಾಹಮಾರಿ ವೈರಸ್ ಹರಡದಂತೆ ನಿತ್ಯ ಜನಸಾಮಾನ್ಯರಿಗೆ ಅರಿವು ಮೂಡಿಸಿ , ಜನರ ಆರೋಗ್ಯ ರಕ್ಷಣೆಗೆ ಪಣ ತೊಟ್ಟಿರುವ ಕೊರೋನಾ ವಾರಿಯರ್ಸ್ಗಳು ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆಂದು ಎಂದು ಮುಖಂಡ ವೈ.ಆರ್. ರಾಮಾಜನೇಯ ತಿಳಿಸಿದರು.ಅಡ್ಡಗಲ್ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಆಶಾ ಕಾರ್ಯಕರ್ತೆಯರಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ನೀಡಲಾದ ದಿನಸಿಕಿಟ್ ಹಾಗು ಸೀರೆಗಳನ್ನು ವಿತರಿಸಿ ಮಾತನಾಡಿದರು.ಡಿಸಿಸಿ ಬ್ಯಾಂಕ್ವತಿಯಿಂದ ನೀಡಲಾದ ದಿನಸಿಕಿಟ್ ಹಾಗು ಸೀರೆಗಳನ್ನು ಶಾಸಕ ಕೆ.ಆರ್.ರಮೇಶ್ಕುಮಾರ್ರವರ ಮಾರ್ಗದರ್ಶನದಲ್ಲಿ ಹೋಬಳಿಯ ಎಲ್ಲಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಕಠಾರಿಪಾಳ್ಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕೊವಿಡ್-19 ಲಸಿಕಾ ಅಭಿಯಾನಕ್ಕೆ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ರವರು ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ವಿಶ್ವೇಶ್ವರಯ್ಯ ಇಂಟರ್ ನಾಷನಲ್ ಶಾಲೆಯ ಕಾರ್ಯದರ್ಶಿ ಶಬರೀಶ್ ಯಾದವ್, ಮುಖಂಡರಾದ ಟಿಲ್ಲಿ ಮಂಜುನಾಥ್, ಮು.ರಾಘವೇಂದ್ರ, ಮಹೇಂದ್ರ ಗಾಣಿಗ, ಹರೀಶ್, ಅಂಚೆ ವಿಜಿ, ಆರೋಗ್ಯ ಇಲಾಖೆಯ ಶುಶ್ರೂಷಕಿ ಮಂಜುಳ, ಪುಷ್ಪ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಜೂ.25 : ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅನಿವಾರ್ಯತೆ ಇದ್ದು, ಬಡ ಕುಟುಂಬದ ಪ್ರತಿಯೊಬ್ಬ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿನ 44 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲಾಗಿದ್ದು, ಈ ಮೂಲಕ ಒಂದನೇ ತರಗತಿಗೆ ದಾಖಲಾತಿ ಆರಂಭವಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್ ತಿಳಿಸಿದರು.ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಏರ್ಪಡಿಸಿದ್ದ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಆರಂಭ ಕಾರ್ಯಕ್ರಮಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿನ ಆತಂಕದಲ್ಲೂ ನ್ಯಾಯ ವಿಲೇವಾರಿ ವಿಳಂಬವಾಗದಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಕಾರಗೃಹದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರಾಗೃಹ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಖೈದಿಗಳಿಗಾಗಿ ಹಮ್ಮಿಕೊಂಡಿದ್ದ ಕೋವಿಡ್ ಮಾರ್ಗಸೂಚಿಗಳಡಿ ಪಾಲಿಸಬೇಕಾದ ನಿಯಮಗಳ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲರೂ ಕೋವಿಡ್ ವಿರುದ್ಧ ಸಲಿಕೆ ಹಾಕಿಸಿಕೊಳ್ಳಬೇಕು. ವಿಶೇಷವಾಗಿ ಶಿಕ್ಷಕ ಸಮುದಾಯ ಕೋವಿಡ್ ಸೋಂಕು ಹರಡದಂತೆ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಹೊರವಲಯದ ವಿಐಪಿ ಶಾಲೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ತಾಲ್ಲೂಕಿನ ಅನುದಾನ ರಹಿತ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಸಕಾಲಿಕ ಕ್ರಮಗಳಿಂದಾಗಿ ಕೊರೊನಾ ನಿಯಂತ್ರಣದಲ್ಲಿದೆ. ಕೊರೊನಾ ಕಾಲದಲ್ಲಿ […]