
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆಯಿಂದ ಕೃಷಿ ಅಭಿಯಾನ ಕಾರ್ಯಕ್ರಮದಡಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೈತರಿಗೆ ತೊಗರಿ ಕಿರು ಚೀಲ ವಿತರಿಸಿ ಮಾತನಾಡಿzರು.ಬೇರೆ ಬೇರೆ ಕಾರಣಗಳಿಂದ ಇಂದು ಕೃಷಿ ನಷ್ಟದ ಕಸುಬಾಗಿ ಪರಿಣಮಿಸಿದೆ. ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನಗಳಿಗೆ ಬೆಲೆ ಕುಸಿತ ಸಾಮಾನ್ಯವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಸೋಲ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೇವೆ ತಲುಪಿಸುವ ಸಂಕಲ್ಪದೊಂದಿಗೆ ಡಿಜಟಲೀಕರಣದ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮುನ್ನುಡಿ ಬರೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನಿಂದ ಮಂಜೂರಾಗಿರುವ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿ, ವಾಣಿಜ್ಯ ಬ್ಯಾಂಕುಗಳಿಗಿಂತ ಅತ್ಯುತ್ತಮ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವ ಧ್ಯೇಯ ನಮ್ಮದಾಗಿದ್ದು, ಗ್ರಾಹಕರು ಠೇವಣಿ ಇಡುವ ಮೂಲಕ ಬ್ಯಾಂಕಿಗೆ ಶಕ್ತಿ ತುಂಬಬೇಕು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನ ಪ್ರತಿನಿಧಿಗಳು ನಾಗರಿಕರ ಮನವೊಲಿಸಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಜನರು ಕೊರೊನಾ ಲಸಿಕೆ ಕುರಿತು ಕೆಲವರು ಮಾಡುತ್ತಿರುವ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಲಸಿಕೆ ಬಗ್ಗೆ ಆತಂಕ ಬೇಡ. ಮೂಢ ನಂಬಿಕೆ ಹಾಗೂ ಅಪಪ್ರಚಾರವನ್ನು ನೆಚ್ಚಿಕೊಂಡಲ್ಲಿ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.ಕಿಸಾನ್ ರೈಲು ಸೇವೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ . ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋವಿಡ್ ಮಾರಿಯನ್ನು ತಡೆಯಲು ನಾಗರಿಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ ಹೇಳಿದರು.ಪಟ್ಟಣದ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಸೊಮವಾರ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕೊರೊನಾ ಲಸಿಕೆ ಮೇಳ ಉದ್ಘಾಟಿಸಿ ಮಾತನಾಡಿ, ಕೆಲವರು ಮೂಢನಂಬಿಕೆ ಹಾಗೂ ಅಪಪ್ರಚಾರದಿಂದಾಗಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಅದು ಸರಿಯಲ್ಲ. ಲಸಿಕೆಯಿಂದ ಯಾವುದೇ ಪ್ರತಿ ಪರಿಣಾಮ ಉಂಟಾಗುವುದಿಲ್ಲ. ಬದಲಿಗೆ ದೇಹದಲ್ಲಿ ರೋಗ ತಡೆಯುವ ಶಕ್ತಿ ವೃದ್ಧಿಯಾಗುತ್ತದೆ ಎಂದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಾವು,ನೋವು,ಸಂಕಟದ ಸಮಯದಲ್ಲಿ ರಾಜಕಾರಣ ಮಾಡಿಕೊಂಡಿದ್ದರೆ ನಾವು ಮೃಗಗಳಿಗಿಂತ ಕಡೆಯಾಗುತ್ತೇವೆ, ಇಂದು ಜಾತಿ,ಪಕ್ಷ ಮರೆತು ಸಮಾಜವನ್ನು ಉಳಿಸುವ ಕೆಲಸಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ತಾಲ್ಲೂಕಿನ ಸುಗಟೂರು ಸಬರಮತಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋವಿಡ್ ಸೇನಾನಿಗಳಿಗೆ ತಿಂಗಳಿಗಾಗುವಷ್ಟು ದಿನಸಿ, ಸೀರೆ, ಹರಿಸಿನ,ಕುಂಕುಮದೊಂದಿಗೆ ಮಡಿಲು ತುಂಬಿ ಅವರು ಮಾತನಾಡುತ್ತಿದ್ದರು.ಕೋವಿಡ್ 2ನೇ ಅಲೆಯಲ್ಲಿ ಅನುಭವಿಸಿದ ನೋವು ಮರೆಯಲಾಗದು, ಅನೇಕರನ್ನು ಕಳೆದುಕೊಂಡಿದ್ದೇವೆ, ನಾನೊಬ್ಬ ಎಂಎಲ್‍ಎ ಎನಿಸಿಕೊಳ್ಳಲು ಅಸಹ್ಯಪಡುವ ಪರಿಸ್ಥಿತಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಶಾಮಿ ಹೇಳಿದರು . ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ . ಬೇಡಿಕೆಗೆ ಅನುಗುಣವಾಗಿ ರೈತರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಮಾಲೂರು:- ಜೆಡಿಎಸ್ ಮುಖಂಡ ಜಿ.ಇ.ರಾಮೇಗೌಡ ಏರ್ಪಡಿಸಿದ್ದ 2000 ಸಾವಿರ ಕೊರೋನಾ ವಾರಿಯರ್ಸ್ ಗಳಿಗೆ ದಿನಸಿ ಕಿಟ್ ವಿತರಣೆ ಹಾಗೂ ಕರೋನಾ ದಿಂದ ಮೃತಪಟ್ಟ ಕುಟುಂಬಕ್ಕೆ 10 ಸಾವಿರ ರೂ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿ ಮಾತನಾಡಿದರು ನನ್ನ ಪಕ್ಷವನ್ನ ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ ನಾನು. ಜೆಡಿಎಸ್ ಪಕ್ಷವನ್ನ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷ ನಮ್ಮದು. ಮಾತನಾಡುವಾಗ ನಾಲಿಗೆ ಬಿಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೋವಿಡ್-19ಕ್ಕೆ ಸಿಲುಕಿ ಜೀವ ತೆತ್ತ ರೈತರು ಡಿಸಿಸಿ ಬ್ಯಾಂಕ್ ಮತ್ತು ಬ್ಯಾಂಕ್ ವ್ಯಾಪ್ತಿಯ ಸಹಕಾರ ಸಂಘಗಳಲ್ಲಿ ಬೆಳೆಸಾಲ ಮಾಡಿದ್ದರೆ ಅಂತಹ ಕುಟುಂಬಗಳಿಗೆ ಪರಿಹಾರ ಒದಗಿಸಲು ರಾಜ್ಯ ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ನಿರ್ದೇಶಕರೂ ಹಾಗೂ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದ್ದಾರೆ.ಶನಿವಾರ ಮೃತ ರೈತರ ಮಾಹಿತಿ ಸಂಗ್ರಹಿಸುವ ಸಂಬಂಧ ಕೋಲಾರ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬ್ಯಾಂಕ್ ಅಧಿಕಾರಿಗಳ […]