
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶನಿವಾರ ತಾಲ್ಲೂಕು ದಲಿತ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಕೋವಿಡ್ ಪರಿಹಾರಕ್ಕಾಗಿ ಪತ್ರ ಚಳುವಳಿ ಆರಂಭಿಸಲಾಯಿತು. ಮುಖಂಡರಾದ ವೆಂಕಟೇಶ್, ಮಂಜುನಾಥ್, ಮಂಜುಳ, ಆಂಜಿಲಪ್ಪ ಇದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವಿನ ವಹಿವಾಟು ಮಾಡುವ ವರ್ತಕರು ಹಾಗೂ ಮಂಡಿ ಮಾಲೀಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ಪಟ್ಟಣದ ಎಪಿಎಂಸಿ ಮಾರುಟ್ಟೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾವು ವರ್ತಕರ ಸಭೆಯಲ್ಲಿ ಮಾತನಾಡಿದ ಅವರು, ವರ್ತಕರು ಕಡ್ಡಾಯವಾಗಿ ಪರವಾನಗಿ ನವೀಕರಿಸಿಕೊಳ್ಳಬೇಕು. ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡಬೇಕು. ವರ್ತಕರು ಹಾಗೂ ಮಂಡಿ ಕಾರ್ಮಿಕರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.ಸದೃಢ ಕೂಲಿಕಾರರನ್ನು ಮಾತ್ರ ಮಾವಿನ ಮಂಡಿಗಳಲ್ಲಿ ನೇಮಿಸಿಕೊಳ್ಳಬೇಕು. 18 ವರ್ಷಕ್ಕಿಂತ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎನ್.ವಿಜಯಕುಮಾರ್ ಆದಾಯಕ್ಕಿಂತಲೂ 343 ಪಟ್ಟು ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಇವರನ್ನು ಸೇವೆಯಿಂದ ಅಮಾನತ್ತುಗೊಳಿಸಿದೆ.ಡಾ.ವಿಜಯಕುಮಾರ್ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದ ಆಕ್ರಮ ಆಸ್ತಿಯನ್ನು ಹೊಂದಿದ್ದಾರೆಂಬ ಬಗ್ಗೆ ಭ್ರಷ್ಟಾಚಾರ ನಿಗ್ರಹದಳದಲ್ಲಿ, ದೂರು ದಾಖಲಾಗಿತ್ತು. ತನಿಖೆಯಲ್ಲಿ ವೈದ್ಯಾ„ಕಾರಿಯು 1.79 ಕೋಟಿ ಆದಾಯವನ್ನು ಹೊಂದಿದ್ದು, 1.26 ಕೋಟಿ ಖರ್ಚನ್ನು ತೋರಿಸಿದ್ದರು. ಆದರೆ, ಒಟ್ಟು ಆಸ್ತಿಯಮೌಲ್ಯ 6.69 ಕೋಟಿ ರೂಗಳಾಗಿತ್ತು. ಇದು ಆದಾಯಕ್ಕಿಂತಲೂ ಶೇ.343 ರಷ್ಟು ಹೆಚ್ಚಿನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಡೆಂಗ್ಯೂ ಜ್ವರ ಒಂದು ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಬೇಕು. ವಿಶೇಷವಾಗಿ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ವೃದ್ದರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು. ಸೊಳ್ಳೆಗಳು ಕಚ್ಚದಂತೆ ಮೈತುಂಬಾ ಬಟ್ಟೆ ಧರಿಸಿ, ಸೊಳ್ಳೆ ಬತ್ತಿ, ಮುಲಾಮು ದ್ರಾವಣ ಇವುಗಳನ್ನು ಉಪಯೋಗಿಸಿ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ|| ಕಮಲ.ಎಂ ಅವರು ತಿಳಿಸಿದ್ದಾರೆ.ಮೇ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮೇ.15: ಕೋಲಾರದಲ್ಲಿ ಸಾರ್ವಜನಿಕರು ಹಾಗೂ ಸರಕಾರದ ಸಹಭಾಗಿತ್ವದಲ್ಲಿ ಸುಮಾರು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದ್ದು, ಸಹಕಾರ ನೀಡಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಇಂಚರ ಗೋವಿಂದರಾಜು, ಕೋವಿಡ್-19 2ನೇ ಅಲೆಯಲ್ಲಿ ಸಾರ್ವಜನಿಕರು ಆರೋಗ್ಯ, ಸೌಲಭ್ಯಕ್ಕೆ ಪರಿತಪಿಸಿದ ರೀತಿಯುಎಂತಹವರ ಮನಸ್ಸನ್ನೂ ಸಹ ಕಲಕುವಂತಾಗಿದ್ದು, ನಾನೊಬ್ಬ ಸರಕಾರದ ಪ್ರತಿನಿಧಿಯಾಗಿ ಒಬ್ಬ ಕೊರೊನಾ ಸೋಂಕಿತನಿಗೂ ಕನಿಷ್ಟಪಕ್ಷ ಒಂದು ಆಕ್ಸಿಜನ್ ಬೆಡ್,ವೆಂಟಿಲೇಟರ್ಅನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಮೇ.15; ಇಲ್ಲಿನ ಪುರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಸವ ಜಯಂತಿ ಆಚರಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಆರೋಗ್ಯ ನಿರೀಕ್ಷಕ ಪೃಥ್ವಿರಾಜ್, ಸಿಇಒ ರಾಜೇಶ್ವರಿ, ಕಂದಾಯ ನಿರೀಕ್ಷಕ ಶಂಕರ್, ನಾಗೇಶ್, ಸುರೇಶ್, ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಯಕದಲ್ಲಿ ಕೈಲಾಸ, ಧರ್ಮದಲ್ಲಿ ದಯೆ ಕಂಡುಕೊಂಡ ಬಸವಣ್ಣನವರು ಮಾನವ ಕುಲಕ್ಕೆ ದೊಡ್ಡ ಆದರ್ಶವಾಗಿ ಉಳಿದಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಬಸವಣ್ಣ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ. ವಚನಕಾರರ ವಚನಗಳಿಂದ ಕನ್ನಡ ಸಾರಸ್ವತ ಲೋಕ ಶ್ರೀಮಂತವಾಗಿದೆ ಎಂದು ಹೇಳಿದು.ಶಿರಸ್ತೇದಾರ್ ಮನೋಹರ ಮಾನೆ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ಲಾಕ್ಡೌನ್ನಿಂದ ಒಂದೊತ್ತಿನ ಊಟಕ್ಕೂ ಪರದಾಟ,ಸೋಂಕು, ಸಾವಿನ ಆತಂಕದಲ್ಲಿ ಜೀವನ ನಡೆಸುತ್ತಿರುವ ನಮ್ಮ ಸಾಲದ ಕಂತು ಪಾವತಿ ಮೂರು ತಿಂಗಳು ಮುಂದೂಡಲು ಅಧಿಕಾರದಲ್ಲಿರುವವರಿಗೆ ತಿಳಿಸಿ, ಇಲ್ಲವಾದರೆ ನೋವಿನಿಂದಿರುವ ನಮ್ಮ ಶಾಪ ಸರ್ಕಾರಕ್ಕೆ ತಟ್ಟುತ್ತದೆ ಎಂದು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ತಾಯಂದಿರು ಎಚ್ಚರಿಸಿದರು.ಸಾಲದ ಕಂತು ಮರುಪಾವತಿಗೆ ಕರೆ ಹೋದ ಹಿನ್ನಲೆಯಲ್ಲಿ ಬ್ಯಾಂಕಿನತ್ತ ದೌಡಾಯಿಸಿದ ನಗರದ ವಿವಿಧ ವಾರ್ಡುಗಳ ಸ್ತ್ರೀಶಕ್ತಿ ಮಹಿಳಾ ಸಂಘಗಳ ಮಹಿಳೆಯರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಮನವಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ 2ನೇ ಅಲೆಯ ಭೀತಿಯ ನಡುವೆ ಎಸ್ಸೆಸ್ಸೆಲ್ಸಿ ಮಕ್ಕಳ ಗೊಂದಲ ನಿವಾರಣೆಗೆ ಶಿಕ್ಷಣ ಇಲಾಖೆ ನಡೆಸಿದ ಈ ಸಾಲಿನ 2ನೇ ಫೋನ್ ಇನ್ ಕಾರ್ಯಕ್ರಮದಲ್ಲಿ 850 ಕರೆಗಳು ಮಾಡಿದ ವಿದ್ಯಾರ್ಥಿ,ಪೋಷಕರು 1100ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಸಮರ್ಪಕ ಉತ್ತರ ನೀಡಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲಿರುವ ಮಕ್ಕಳಲ್ಲಿನ ಗೊಂದಲ ನಿವಾರಣೆಗಾಗಿ ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆಸಿದ 2ನೇ […]