
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಕರ ಶಿಕ್ಷಕರ ಸಮಸ್ಯೆಗಳಿಗೆ ಸ್ಪಮದಿಸಿ ಕಾರ್ಯನಿರ್ವಹಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ವಿ.ರವಿಕುಮಾರ್ ಹೇಳಿದರು.ತಾಲ್ಲೂಕಿನ ಮರಸನಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ನಿವಾರಣೆಗಾಗಿ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗೆ ಶಿಕ್ಷಕ ಮಿತ್ರರೊಬ್ಬರನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಅಂಥ ನೌಕರರು ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬೇರೆಡೆಗೆ ವರ್ಗವಾದ ಉಪ ತಹಶೀಲ್ದಾರ್ ಮಲ್ಲೇಶ್, ಶಿರಸ್ತೇದಾರ್ ಜಿ.ಆರ್.ಭಾಸ್ಕರ್ ಅವರನ್ನು ಸನ್ಮಾನಿಸಿ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂದು ಮಾಡಿದಾಗ ಮಾತ್ರ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದು ಹೇಳಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೋಲಾರದ ರೋಟರಿ ಸಂಸ್ಥೆ ಹಾಗೂ ಪಬ್ಲಿಕ್ ಟಿವಿ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ಶಾಲೆಗಳಿಗೆ ಟಿವಿ ವಿತರಿಸಿ ಮಾತನಾಡಿ, ಪೋಷಕರು ಖಾಸಗಿ ಶಾಲೆಗಳ ಮೋಹ ತೊರೆದು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಶಾಲೆಗಳಿಗೂ ಮೂಲ ಸೌಕರ್ಯ ಕಲ್ಪಿಸಲಾಗುವುದು. ಕ್ಷೇತ್ರದ ಎಲ್ಲ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡಲಾಗುವುದು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಸದಸ್ಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗಳು, ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸು ವಿಮೆ ಮಾಡಿಸುವಂತೆ ಪ್ರೇರೇಪಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಮೂಚಿಮುಲ್ ಉಪ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ವಿವಿಧ ಯೋಜನೆಗಳ ಅನುದಾನದ ಚೆಕ್ ವಿತರಿಸಿ ಮಾತನಾಡಿ, ಖಾಸಗಿ ಡೇರಿಗಳಿಗೆ ಹಾಲು ಹಾಕುತ್ತಿರುವ ರೈತರು ರಾಸು ವಿಮೆಯಿಂದ ವಂಚಿತರಾಗಿದ್ದಾರೆ. ಅಂಥ ರೈತರು ತಾವು ಉತ್ಪಾದಿಸಿದ ಹಾಲನ್ನು ಕೋಚಿಮುಲ್ ವ್ಯಾಪ್ತಿಗೆ ಬರುವ ಡೇರಿಗಳಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನವರಿ 6 ರಂದು ಮುಳಬಾಗಿಲು ತಾಲ್ಲೂಕಿನ ಎನ್ , ವಡ್ಡಹಳ್ಳಿ ಗ್ರಾಮದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರೊಂದಿಗೆ ‘ ರೈತರೊಂದಿಗೊಂದು ದಿನ ‘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಕಾರ್ಯಕ್ರಮದಲ್ಲಿ ಕೃಷಿ ಸಚಿವರು ಮತ್ತು ನಾನು ದೈನಂದಿನ ಕೃಷಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕೃಷಿ ಕ್ಷೇತ್ರವನ್ನು ಪ್ರಮುಖ ಉದ್ಯಮವೆಂದು ಘೋಷಣೆ ಮಾಡುವ ಜೊತೆಗೆ ದೆಹಲಿ ಚಲೋ ಹೊರಟಿರುವ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ವಿಶೇಷ ಸಂಸತ್ ಅಧಿವೇಶನ ಕರೆಯಬೇಕೆಂದು ಆಗ್ರಹಿಸಿ ರೈತಸಂಘದಿಂದ ಹೊಸ ವರ್ಷದ ಪ್ರಯುಕ್ತ ತಾಲೂಕು ಕಚೇರಿಯ ಅಧಿಕಾರಿಗಳಿಗೆ ತರಕಾರಿ ವಿತರಿಸಿ, ಶಿರಸ್ತೇದಾರ್ ಕೊಂಡಪ್ಪ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ತರಕಾರಿ ವಿತರಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜನಾಭಿಪ್ರಾಯವಿಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದರಿಂದಾಗಿ ದಿನೇದಿನೇ ಕೃಷಿ ಕ್ಷೇತ್ರದಿಂದ ರೈತರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿಯನ್ನು ಬುಧವಾರ ಮತ ಎಣಿಕೆ ಕೇಂದ್ರದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೆಂಕಟರವಣಪ್ಪ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಮಶೇಖರ್ ತಲಾ ೪೯೯ ಮತಗಳನ್ನು ಪಡೆದರು. ಆಗ ಮತ ಎಣಿಕೆ ಸಿಬ್ಬಂದಿ ಲಾಟರಿ ಎತ್ತಿದಾಗ ವೆಂಕಟರವಣಪ್ಪ ಗೆಲುವು ಸಾಧಿಸಿದರು. ಶ್ರೀನಿವಾಸಪುರದಲ್ಲಿ ಬುಧವಾರ ಗೆಲುವು ಸಾಧಿಸಿದ ಕತ್ತಿಬೀಸನಹಳ್ಳಿ, ಮಜರಾ ಶೆಟ್ಟಿಹಳ್ಳಿ ಗ್ರಾಮದ ಅಭ್ಯರ್ಥಿಗಳಾದ ಅನಂತರೆಡ್ಡಿ ಹಾಗೂ ವೆಂಕಟಲಕ್ಷö್ಮಮ್ಮ ಬೆಂಬಲಿಗರೊAದಿಗೆ ವಿಜಯೋತ್ಸವ ಆಚರಿಸಿದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಗುರುವಾರ ನಡೆದ ಚುನಾವಣೆಯಲ್ಲಿ ವಕೀಲ ಕೆ.ಶಿವಪ್ಪ (ಅಧ್ಯಕ್ಷ) ಕೆ.ವಿ.ರೂಪಾವತಿ (ಕಾರ್ಯದರ್ಶಿ) ಚುನಾಯಿತರಾಗಿದ್ದಾರೆ.ಕೆ.ಗಂಗಿರೆಡ್ಡಿ (ಉಪಾಧ್ಯಕ್ಷ), ಟಿ.ವಿ.ನಾರಾಯಣಸ್ವಾಮಿ (ಖಜಾಂಚಿ) ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೆ.ಶಂಕರಪ್ಪ ನಾಯಕ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.ವಕೀಲರ ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ನ್ಯಾಯಾಲಯದ ವಕೀಲರು ಅಭಿನಂದಿಸಿದರು. ಸ್ಥಳೀಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ವಕೀಲರಾದ ಅರ್ಜುನ್, ಶ್ರೀನಿವಾಸಗೌಡ, ಬಿ.ಜಿ.ಮುರಳಿ, ರಾಧಾಕೃಷ್ಣ ಇದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನ ಎರಡು ಮತ ಎಣಿಕೆ ಕೇಂದ್ರಗಳಲ್ಲಿ ಬುಧವಾರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಸಾಂಗವಾಗಿ ನಡೆಯಿತು. ಜಿಲ್ಲಾಧಿಕಾರಿ ಸಿ.ಸತ್ಯಭಾಮ, ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ,ವ್ಯವಸ್ಥೆಯನ್ನು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿದರು. ಮತ ಎಣಿಕೆ ಪ್ರಾರಂಭವಾಗುತ್ತಿದ್ದಂತೆ, ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ಆಗಮಿಸಿದ್ದ ಅಭ್ಯರ್ಥಿಗಳ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಮುಂದೆ ಜಮಾಯಿಸಿದರು. ಆದರೆ ಪಾಸ್ ಹೊಂದಿದ್ದ ವ್ಯಕ್ತಿಗಳಿಗೆ ಮಾತ್ರ ಮತ […]