
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷಕ್ಕೆ ಬರುವವರನ್ನುಸ್ವಾಗತಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ಹೊಗಳಗೆರೆ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾಂಗ್ರೆಸ್ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿ, ಈ ಹಿಂದೆ ಕಾರಣಾಂತದಿಂದ ಪಕ್ಷದಿಂದ ದೂರವಾಗಿದ್ದ ಕುಟುಂಬಗಳು ಮತ್ತೆ ಹಿಂದಿರುಗಿವೆ. ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಇನ್ನು ಕೆಲವೇ ತಿಂಗಳುಗಳಲ್ಲಿ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುವುದು. ಅದರಿಂದ ರೈತರ ಬದುಕು […]

JANANUDI.COM NETWORK ಲಯನ್ಸ್ ಕ್ಲಬ್, ಕುಂದಾಪುರ, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ವಿನಾಯಕ ಕ್ಲಿನಿಕ್, ಕುಂದಾಪುರ ಇವರ ಸಹಯೋಗದಲ್ಲಿ ಉಚಿತ ಮಧುಮೇಹ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರಾದ ಲಯನ್ ಶ್ರೀ ಚಂದ್ರಶೇಖರ ಕಲ್ಪತರು, ಘಟಕದ ಕಾರ್ಯದರ್ಶಿಯವರಾದ ಪ್ರೊ. ರಾಜೇಂದ್ರ, ಲಯನ್ಸ್ ಕ್ಲಬ್ ನ ಡಿಸ್ಟ್ರಿಕ್ಟ್ ಕ್ಯಾಬಿನೇಟ್ ಮೆಂಬರ್ ಲಯನ್ ರಾಜೀವ ಕೋಟ್ಯಾನ್, ರೀಜನಲ್ ಸೆಕ್ರೆಟರಿ ಲಯನ್ ಶ್ರೀ ವೇಣುಗೋಪಾಲ್ ಶೆಟ್ಟಿ, ಉದ್ಯಮಿ ಶ್ರೀ ರಾಧಾಕೃಷ್ಣ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ್ ಶೆಟ್ಟಿ ಮತ್ತು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ವಿನಾಯಕ ಕ್ಲಿನಿಕಲ್ ಲ್ಯಾಬ್ ನ ಸಿಬ್ಬಂದಿ ಶ್ರೀಮತಿ ಬೇಬಿ ಮಧುಮೇಹ ಪರೀಕ್ಷೆಯನ್ನು ನಡೆಸಿದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್ಪೇಟೆಯಲ್ಲಿ ಗುರುವಾರ ಗೋದ್ರೇಜ್ ವೃತ್ತಿ ಸಂಸ್ಥೆ ಹಾಗೂ ಕೌಶಲ್ಯ ದರ್ಪಣ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬ್ಯುಟಿಷಿಯನ್ ಮಹಿಳೆಯರಿಗೆ ಮೌಲ್ಯ ವರ್ಧಿತ ಕಾರ್ಯಕ್ರಮದಲ್ಲಿ ಮೊದಲ ಹಂತ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ಮತ್ತು ಸ್ವಚ್ಛತಾ ಕಿಟ್ಗಳನ್ನು ಹಾಗೂ ಕೊರೊನಾ ಕವಚ ವಿಮಾ ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ತೋಟಗಾರಿಕೆ ಇಲಾಖೆ, ಕೋಲಾರ, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಹಾಗೂ ಅಂತರರಾಷ್ಟ್ರೀಯ ಆಲೂಗಡ್ಡೆ ಕೇಂದ್ರ, ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರಿಗೆ “ಆಲೂಗಡ್ಡೆ ಅಂಗಾಂಶ ಗಿಡದ ಕಡ್ಡಿಗಳಿಂದ ಸಸ್ಯಾಭಿವೃದ್ಧಿ ಹಾಗೂ ಬೀಜೋತ್ಪಾದನೆ” (ಂಖಅ) ಎಂಬ ಹೊಸ ತಂತ್ರಜ್ಞಾನ ಪರಿಚಯಿಸಲು ತರಬೇತಿ ಕಾರ್ಯಕ್ರಮವನ್ನು ದಿನಾಂಕ: 12.11.2020 ರಂದು ಬೆಳಿಗ್ಗೆ 11.00 ಗಂಟೆಗೆ ವಿಚಾರ ಸಂಕಿರಣ ಕೊಠಡಿ, ತೋಟಗಾರಿಕೆ ಮಹಾವಿದ್ಯಾಲಯ, ಟಮಕ, ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗಡ್ಡೆಗಳನ್ನು ದುಬಾರಿ ಬೆಲೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನತಾಲ್ಲೂಕು ಕಚೇರಿ ಎದುರು ಬುಧವಾರ ಜಿಲ್ಲಾ ಮಾಜಿ ಯೋಧರ ಟ್ರಸ್ಟ್ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಧರಣಿ ನಡೆಸಿದರು. ಟ್ರಸ್ಟ್ನ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ್ ಧರಣಿ ನಿರತ ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕಾಗಿ ಜೀವದ ಮೇಲಿನ ಹಂಗು ತೊರೆದು ಹೋರಾಡಿ ನಿವೃತ್ತರಾದ ಯೋಧರ ಪರಿಸ್ಥಿತಿ ತೃಪ್ತಿಕರವಾಗಿಲ್ಲ. ಸರ್ಕಾರ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಳ್ಳುತ್ತಿಲ್ಲ. ಇದು ದುರದೃಷ್ಟಕರ ಎಂದು ಹೇಳಿದರು. ದೇಶಕ್ಕಾಗಿ ಶ್ರಮಿಸಿದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ದೇಶದ ಆರ್ಥಿಕ ಅಭಿವೃದ್ಧಿಗೆ ಎಲ್ಐಸಿ ಕೊಡುಗೆ ಅಪಾರ. ಗಳಿಸಿದ ಲಾಭಾಂಶದ ಬಹು ದೊಡ್ಡ ಮೊತ್ತವನ್ನು ದೇಶದ ಜನರ ಕ್ಷೇಮಾಭಿವೃದ್ಧಿಗಾಗಿ ಕೊಡುಗೆಯಾಗಿ ನೀಡಿದೆ ಎಂದು ಎಲ್ಐಸಿ ವಿಭಾಗೀಯ ಹಿರಿಯ ವ್ಯವಸ್ಥಾಪಕ ಆಸೀಸ್ ಕುಮಾರ್ ಹೇಳಿದರು.ಪಟ್ಟಣದ ಎಲ್ಐಸಿ ಉಪ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಎಲ್ಐಸಿ ಪ್ರತಿನಿಧಿಗಳ ಸಭೆಯಲ್ಲಿ ಗಣನೀಯ ಸಾಧನೆ ಮಾಡಿದ ಪ್ರತಿನಿಧಿಗಳನ್ನು ಸನ್ಮಾನಿಸಿ ಮಾತನಾಡಿ, ಸಂಸ್ಥೆ ಕಳೆದ ಆರ್ಥಿಕ ವರ್ಷದಲ್ಲಿ ರೂ.53 ಸಾವಿರ ಕೋಟಿ ಲಾಭ ಗಳಿಸಿದೆ. ಆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಾಲೆಗಳಿಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಗುರುತಿಸಿ, ಪಟ್ಟಿ ತಯಾರಿಸಿ ಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ತಾಂತ್ರಿಕ ಉಪ ವಿಭಾಗದ ಎಂಜಿನಿಯರ್ ಅಪ್ಪಿರೆಡ್ಡಿ ಹೇಳಿದರು. ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿ ಏರ್ಪಡಿಸಿದ್ದ ಜಲ ಜೀವನ್ ಮಿಷನ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ, ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸಲು ಯೋಜನೆ ರೂಪಿಸಿದೆ. ಪ್ರತಿ ಶಾಲೆಗೂ ಕುಡಿಯವ ನೀರು, ಶೌಚಾಲಯ, ಕಾಂಪೌಂಡ್, ಗೋಡೆ ಬರಹದಂಥ ಸೌಲಭ್ಯ ನೀಡಲಾಗುತ್ತಿದೆ. ಈಗ ಅಗತ್ಯ ಇರುವ ಸೌಲಭ್ಯಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ನ ಎಂ.ಎನ್.ಲಲಿತಾ ಶ್ರೀನಿವಾಸ್ ಹಾಗೂ ಆಯಿಷಾ ನಯಾಜ್ ಕ್ರಮವಾಗಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಯಾಗಿ ಚುನಾಯಿತರಾದರು. ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾಗಿತ್ತು. ಚುನಾವಣೆಯಲ್ಲಿ ಪುರಸಭೆಯ ಒಟ್ಟು 23 ಸ್ಥಾನಗಳ ಪೈಕಿ ಜೆಡಿಎಸ್ 11, ಕಾಂಗ್ರೆಸ್ 8 ಹಾಗೂ ಪಕ್ಷೇತರರು 4 ಮಂದಿ ಚುನಾಯಿತರಾಗಿದ್ದರು. ಪಕ್ಷೇತರರಲ್ಲಿ ಕಾಂಗ್ರೆಸ್ನ 3 […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು , ಈ ಕಾನೂನು ಪಾಲಿಸದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಸೂಚಿಸಿದರು . ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ […]