ಕೋಲಾರ : ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ ತೋರಿಸಬೇಕು. ನಿಗಧಿತ ಅವಧಿಯಲ್ಲಿ ಕೊಟ್ಟಿರುವ ಗುರಿ ಸಾಧಿಸಬೇಕು. ಸಾರ್ವಜನಿಕರ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫೂಟ್ಟ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು. ಇಂದು ಜಿಲ್ಲಾಳಿತ […]
ಷ್ರೀನಿವಾಸಪುರ : 06-12-2024 ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ರವರ 68 ನೇ ಪುಣ್ಯ ತಿಥಿ ಸಂಬಂಧ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುಲಾಗುವುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಬುಧವಾರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.6-12-2024 ರಂದು ಬೆಳಗ್ಗೆ 9.00 ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ರವರ 68 ನೇ ಪುಣ್ಯ ತಿಥಿ ಸಂಬಂಧತಾಲ್ಲೂಕು ಕಛೇರಿಯ ಆವರಣದಲ್ಲಿರುವ ಡಾ|ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮಕ್ಕೆ ಶ್ರೀನಿವಾಸಪುರ ತಾಲ್ಲೂಕಿನ […]
ಶ್ರೀನಿವಾಸಪುರ : ಮಹತ್ವಾಕಾಂಕ್ಷಿ ಮಹಿಳೆಯರಿಗೆ ವಿಶೇಷವಾದ ಅವಕಾಶ ಇದಾಗಿದ್ದು, ಮಹಿಳೆಯರು ಪೂರ್ಣ ಸಮಯ ಅಥವಾ ಅರೆಕಾಲಿಕ ಏಜೆಂಟರಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಬೆಂಗಳೂರು-೨ ವಿಭಾಗದ ಕಾನೂನು ವ್ಯವಸ್ಥಾಪಕ ನರೇಂದ್ರಬಾಬು ತಿಳಿಸಿದರು.ಪಟ್ಟಣದ ಎಲ್ಐಸಿ ಉಪಶಾಖೆಯಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಯೋಜನೆಯಾದ ಬಿಮಾ ಸಖಿ-ಮಹಿಳಾ ಕೆರಿಯರ್ ಏಜೆಂಟ್ ಬಗ್ಗೆ ಮಾಹಿತಿ ನೀಡಿ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಹತೆಯ ಕನಿಷ್ಟ ಪಕ್ಷ ೧೦ ನೇ ತರಗತಿ ತೇರ್ಗಡೆಯಾಗುಬೇಕಾಗಿದ್ದು, ಮಹಿಳೆಯರು ನಿಮ್ಮ ಮನೆಯಲ್ಲಿಯೇ ಇದ್ದುಕೊಂಡು ಕೆಲಸ ಮಾಡುತ್ತಾ ಅನಿಯಮಿತ ಆದಾಯ ಹೊಂದುವ ಸುವರ್ಣಾವಕಾಶ. ಈ ಯೋಜನೆಗೆ […]
ಕೋಲಾರ:- ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಇತ್ತೀಚೆಗೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯ ಸಾಧಿಸಿರುವ ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿಯವರ ಗೆಲುವಿನಿಂದ ಕಾಂಗ್ರೆಸ್ ಪಕ್ಷದ ಶಕ್ತಿ ಇಮ್ಮಡಿಯಾಗಿದೆ, ರಾಹುಲ್ ಗಾಂಧಿಯವರೊಂದಿಗೆ ಪ್ರಿಯಾಂಕ ಗಾಂಧಿಯವರೂ ಲೋಕಸಭೆ ಪ್ರವೇಶಿಸಿರುವುದರಿಂದ ಕೇಂದ್ರ ಸರ್ಕಾರದ ಜನವಿರೋಧಿ ನಿಲುವುಗಳ ವಿರುದ್ದ ಹೋರಾಟ ನಡೆಸಲು ಬಲ ಬಂದಿದೆ ಎಂದು ಅಭಿಪ್ರಾಯಪಟ್ಟರು.ಮುಂದಿನ […]
ಶ್ರೀನಿವಾಸಪುರ : ತಾಲೂಕಿನ ಯಲ್ಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ ಹಾಗೂ ಚರಂಡಿ ಸ್ವಚ್ಛತೆ ಇವುಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ಒದಗಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ. ಪಿ. ಶ್ರೀನಿವಾಸರೆಡ್ಡಿ ತಿಳಿಸಿದರು. ಶ್ರೀನಿವಾಸಪುರ ತಾಲೂಕಿನ ಯಲ್ಡೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡುತ್ತಾ, ಇಂದಿನ ಸಭೆಯಲ್ಲಿ 2024-25ನೇ ಸಾಲಿನ ಎಮ್ ಎನ್ ಆರ್ ಇ ಜಿ ಎಯ ಅಂದಾಜು ಕ್ರಿಯಾಯೋಜನೆಗೆ ಹಾಗೂ ಗ್ರಾಮನೀರು […]
ಶ್ರೀನಿವಾಸಪುರ : ತಾಲ್ಲೂಕಿನ ಪುಲಗೂರಕೋಟೆ ಗ್ರಾಮ ಪಂಚಾಯತಿಯಲ್ಲಿ ಒಟ್ಟು 18 ಸದಸ್ಯರಿದ್ದು, ಅದರಲ್ಲಿ ಜೆಡಿಎಸ್ ಬೆಂಬಲಿತ 09 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 09 ಸದಸ್ಯರಿದ್ದು, ಉಪಾಧ್ಯಕ್ಷರ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷರ ಸ್ಥಾನಕ್ಕೆ ರೂಪಶ್ರೀನಿವಾಸ್ ರವರು ಒಬ್ಬರೇ ಇದಿದ್ದರಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದರಿಂದಾಗಿ ಅವಿರೋಧವಾಗಿ ರೂಪಶ್ರೀನಿವಾಸ್ ರವರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಜೇಶ್ ತಿಳಿಸಿದರು .ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಕೆ. ಮಂಜುನಾಥ ಮಾತನಾಡಿ ನೂತನವಾಗಿ ಉಪಾಧ್ಯಕ್ಷರಾಗಿರುವ […]
ಶ್ರೀನಿವಾಸಪುರ : ಜಾಗತಿಕವಾಗಿ ಆಹಾರ ಭದ್ರತೆಯ ಮೂಲ ಪರಿಕಲ್ಪನೆಯು ಎಲ್ಲಾ ಜನರು , ಎಲ್ಲಾ ಸಮಯದಲ್ಲೂ ತಮ್ಮ ಸಕ್ರಿಯ ಮತ್ತು ಆರೋಗ್ಯಕರ ಜೀವನಕ್ಕಾಗಿ ಬೇಕಾಗಿರುವ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಕೆ.ಸಿ.ಮಂಜುನಾಥ್ ತಿಳಿಸಿದರು.ತಾಲೂಕಿನ ರಾಯಲ್ಪಾಡು ಗ್ರಾಮಪಂಚಾಯಿತಿ ವ್ಯಾಪ್ತಿಯ ಮಂಡ್ಯಾಲ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಶನಿವಾರ 2024-25 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ. ಸುಧಾರಿತ ಕೃಷಿ ವಿಸ್ತರಣಾ […]
ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ನೇಮಕಾತಿ ಕುರಿತಂತೆ ಆಕ್ಷೇಪಣಾ ಅರ್ಜಿಗಳನ್ನು ಪರಿಶೀಲಿಸಿ , ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ಸಂಬಂಧ ಜಿಲ್ಲಾ ಆಯ್ಕೆ ಸಮಿತಿ ಸಭೆಯನ್ನು ನಡೆಸಿದ್ದ ಜಿಲ್ಲಾಧಿಕಾರಿ ಅಕ್ರಂ ಪಾಷ.
ಕೋಲಾರ,ಡಿ.02 ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾಟ್ರ್ವಾಸ, ಪ್ರವಾಸ,ಮೋಜು,ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ರಚಾರ ರಹಿತ ಚುನಾವಣೆ ನಡೆಸಬೇಕಾದ […]