
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಜಿಲ್ಲಾ ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧ್ಯಕ್ಷ ತಂಬಳ್ಳಿ ಮುನಿಯಪ್ಪ ಹೇಳಿದರು.ಕುವೆಂಪು ನಗರದಲ್ಲಿರುವ ಕುರುಬರ ಸಂಘದ ಹಾಸ್ಟೆಲ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷ 300ಕ್ಕೂ ಹೆಚ್ಚು ಪಿಯುಸಿ ಮತ್ತು ಎಸೆಸ್ಸೆಲ್ಸಿ ಪ್ರತಿಭೆಗಳಿಗೆ ಪುರಸ್ಕಾರ ಮಾಡಲಾಗಿದ್ದು ಈ ವರ್ಷ ಎಲ್ಲಾ ತಾಲೂಕುಗಳ ಸಮುದಾಯದ ತಾಲೂಕು ಅಧ್ಯಕ್ಷರು ಸಭೆಗಳನ್ನು ನಡೆಸಿ ಅರ್ಜಿಗಳನ್ನು ಕ್ರೋಡೀಕರಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ. […]

ವರದಿ : ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಹಾಗೂ ವಿವಿಧ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪೌಷ್ಟಿಕಾಆಹಾರ ಸಪ್ತಾಹ ಕಾರ್ಯಕ್ರಮವನ್ನು ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಿ. ಬಾಲಕೃಷ್ಣ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ ಹಾಗೂ ಪೌಷ್ಟಿಕ ಆಹಾರದ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಗನವಾಡಿ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಅಪ್ರಾಪ್ತ ವಯಸ್ಸಿನ ಮಕ್ಕಳ ಬಾಲ್ಯ ವಿವಾಹವನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ವಕೀಲರ ಸಂಘ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ , ಮಕ್ಕಳ ಕಲ್ಯಾಣ ಸಮಿತಿ , ಕಲೆಕ್ಟಿವ್ ಆ್ಯಕ್ಷನ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಇತ್ತೀಚಿನ ದಿನಗಳಲ್ಲಿ ಗೋಡಂಬಿ ಬೆಳೆಯ ವಿಸ್ತೀರ್ಣ ಮೈದಾನದ ಒಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದರಿಂದ ಕೃಷಿ ವಿಜ್ಞಾನ ಕೇಂದ್ರ ಕೋಲಾರವು “ಗೋಡಂಬಿ (ಗೇರು) ಬೆಳೆಯ ಆಧುನಿಕ ಬೇಸಾಯ ಕ್ರಮಗಳು” ಎಂಬ ಅಂತರ್ಜಾಲ ಕಾರ್ಯಾಗಾರವನ್ನು ದಿನಾಮಕ: 25.09.2020 ರಂದು ಹಮ್ಮಿಕೊಂಡಿತ್ತು.ಡಾ. ಗುರುಪ್ರಸಾದ, ನಿವೃತ್ತ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು ಮಾತನಾಡಿ ಬೆಳೆ ಅವಶ್ಯಕತೆ ಮತ್ತು ಉತ್ಪಾದನಾ ತಾಂತ್ರಿಕತೆಗಳ ಬಗ್ಗೆ ತಿಳಿಸಿಕೊಟ್ಟರು. ಪ್ರಸ್ತುತ ಭಾರತದಲ್ಲಿ 7 ಲಕ್ಷ ಟನ್ ಉತ್ಪಾದನೆ ಇದ್ದು, ಇನ್ನೂ 10 […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಸೆ.24 ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ಮೆಕ್ಕೆ ವೃತ್ತದಲ್ಲಿ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ನೂತನ ಭೂಸುಧಾರಣಾ ಕಾಯಿದೆಯು ರೈತ ವಿರೋಧಿಯಾಗಿರುವುದು ಅಕ್ಷರಶಹಃ ಸತ್ಯ ಎನ್ನುವ ಬಗ್ಗೆ ದೇಶದ ಮೂಲೆ ಮೂಲೆಯಲ್ಲಿಯೂ ವಿಚಾರಗಳು ಕೇಳಿಬರುತ್ತಿವೆ. ಯಾವುದೇ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :ಸೆ.25, ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ರೋಜರ್‍ನಹಳ್ಳಿ ಗೇಟ್‍ನ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಿಸಿದ್ದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ ರಾಜ್ಯಾಂದ್ಯಂತ ವಿರೋದ ವ್ಯಕ್ತವಾಗುತ್ತಿದ್ದರೂ ಯಾವುದನ್ನೂ ಲೆಕ್ಕಿಸದೇ ರೈತ ವಿರೋದಿ ಕಾಯ್ದೆಗಳನ್ನು ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಕಾಯಿದೆಗಳನ್ನು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ಧರಣಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಧರಣಿ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಮತ್ತು ದಲಿತರಿಗೆ ಸಂಬಂಧಿಸಿದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ತಲಾ ರೂ.7.5 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಪೌರ ಕಾರ್ಮಿಕರಿಗೆ ಉಚಿತ ನಿವೇಶನ ನೀಡಲು ಅಗತ್ಯವಾದ ಜಮೀನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ ಎಂದು ಹೇಳಿದರು. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್.ಅರುಣ್ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು. ಕಡತಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರಿಗಳು ಟೆಂಡರ್ ಕರೆಯದೆ ಕಾಮಗಾರಿ ನಿರ್ವಹಿಸುವುದರ ಮೂಲಕ ಕೆಪಿಟಿಪಿ ಕಾಯ್ದೆ ಉಲಂಘಿಸಿದ್ದಾರೆ. ಕಾಮಗಾರಿ ಗುತ್ತಿಗೆ ನೀಡುವ ಮುನ್ನ ವಾರ್ತಾ ಪ್ರಚಾರ ಇಲಾಖೆ ಮೂಲಕ ಪತ್ರಿಕೆಗಳಲ್ಲಿ ಟೆಂಡರ್ ಕರೆದು, ಕಡಿಮೆ ಹಣಕ್ಕೆ ಕಾಮಗಾರಿ ನಿರ್ವಹಿಸುವ ವ್ಯಕ್ತಿಗಳಿಗೆ ಕಾಮಗಾರಿ […]