
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮಾವಿನ ತೋಟಗಳಲ್ಲಿ ಹಣ್ಣಿನ ನೊಣ ಅಥವಾ ಇತರೆ ಕಾರಣಗಳಿಂದ ಕೊಳೆತು ಬಿದ್ದಿರುವ ಮಾವಿನ ಹಣ್ಣುಗಳು ಮತ್ತು ಅವುಗಳ ಅವಶೇಷಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಮುಚ್ಚಬೇಕು . ಈ ಕ್ರಮದಿಂದ ಹಣ್ಣಿನ ನೊಣಗಳ ಸಂತತಿಯೂ ಕಡಿಮೆಯಾಗುತ್ತದೆ . ಅಲ್ಲದೇ ತೋಟದ ನೈಮರ್ಲ್ಯವನ್ನು ಕಾಪಾಡುವಲ್ಲಿಯೂ ಸಹಕಾರಿಯಾಗುತ್ತದೆ . ಮಾವಿನ ತೋಟದ ಭೂಮಿಯನ್ನು ಚೆನ್ನಾಗಿ ಉಳುಮೆ ಮಾಡಿಸಿ ಕಸ ಕಡ್ಡಿ ಹುಲ್ಲುಗಳನ್ನು ತೆಗೆದು ಸ್ವಚ್ಛವಾಗಿಡಬೇಕು . ಮಾವಿನ ಮರಗಳಿಗೆ ಅವುಗಳ ವಯಸ್ಸಿಗೆ ಅನುಗುಣವಾಗಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ,ಜು.21: 40 ನೇ ರೈತ ಹುತಾತ್ಮ ದಿನಾಚರಣೆಯ ಪ್ರಯುಕ್ತ ತಹಶೀಲ್ದಾರ್ ಕಚೇರಿ ಮುಂದೆ ಉಚಿತ ತರಕಾರಿ ಹಂಚುವ ಮುಖಾಂತರ ರೈತ ಸಂಘದಿಂದ ಈ ದಿನವನ್ನು ಹೋರಾಟದ ದಿನವಾಗಿ ಆಚರಣೆ ಮಾಡಿ ರೈತ ವಿರೋದಿ ಕಾಯ್ದೆಗಳನ್ನು ಕೈಬಿಡಬೇಕೆಂದು ಕಂದಾಯ ಮಂತ್ರಿಗಳಿಗೆ ತಹಶೀಲ್ದಾರ್ರವರ ಮುಖಾಂತರ ಮನವಿ ನೀಡಿ ಅಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ದೇಶಕ್ಕೆ ಸ್ವಾತಂತ್ಯ ಬಂದು 7 ದಶಕಗಳು ಕಳೆದರೂ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೊರೋನಾ ಸಂಕಷ್ಟದಲ್ಲಿ ನಲುಗಿರುವ ಬಡವರ ನೆರವಿಗೆ ಬರಲು ಉಳ್ಳವರ ಮನಃಪರಿವರ್ತನೆಯಾಗಬೇಕು ಸಹಾಯ ಮಾಡುವ ಹೃದಯವಂತಿಕೆ ಬರಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು. ಸೋಮವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಗೋಕುಲ ಮಿತ್ರಬಳಗದಿಂದ ಚಲನಚಿತ್ರಮಂದಿರ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ ಮಾಡಿ ಅವರು ಮಾತನಾಡುತ್ತಿದ್ದರು. ಬಡವರು ಸ್ವಾಭಿಮಾನಿಗಳು, ಅವರೆಂದು ಸಹಾಯಕ್ಕಾಗಿ ಕೈಚಾಚೋದಿಲ್ಲ ದುಡಿದು ತಿನ್ನುವ ಅವರ ಆಶಯಕ್ಕೆ ಧಕ್ಕೆ ಬಂದಿದೆ, ಕೆಲಸವಿಲ್ಲದೇ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಜೀವನವೆಂದ ಮೇಲೆ ಸುಖ, ಕಷ್ಟ, ಸ್ವಾಸ್ಥ್ಯ , ರೋಗರುಜಿನಗಳು ಇದ್ದೇ ಇರುತ್ತವೆ . ರೋಗಗಳು ಬಾಧಿಸಲು ಆರಂಭಿಸಿದಾಗ ಔಷಧವನ್ನು ಪರಮಶತ್ರುವಿನಂತೆ ಕಾಣುವ ಅದೆಷ್ಟೋ ಜನರಿರುತ್ತಾರೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಕೆಲವರು ಆಸ್ಪತ್ರೆಯನ್ನು ಸಹ ಪರಮಶತ್ರುವಿನಂತೆ ಕಾಣುವಂತವರು ಇದ್ದಾರೆ. ಗ್ರಾಮೀಣ ಭಾಗದ ನಾಗರೀಕರಲ್ಲಿ ಆಸ್ಪತ್ರೆ ಎಂದರೆ ಇಂಜಕ್ಷನ್ ಕೊಡುವಂತಹ, ಆಪರೇಷನ್ ಮಾಡುವಂತಹ ಸ್ಥಳ ಎಂಬ ಭಯದ ವಾತವರಣ ಹಾಗು ಆಸ್ಪತ್ರೆಗೆ ಹೋದರೆ ಇಲ್ಲಸಲ್ಲದ ಪರೀಕ್ಷೆಗಳನ್ನು ಮಾಡಿ ಮಾನಸಿಕವಾಗಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜು.17 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನವರಾದ ವಿಜಯಕುಮಾರ್ ರವರನ್ನು ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವೀಧರ ಅಂಗನವಾಡಿ ಕಾರ್ಯಕರ್ತೆಯರ ಕ್ಷೇಮಾಭಿವೃದ್ಧಿ ಸಮಿತಿಯ ರಾಜ್ಯ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ. ಶಿವಣ್ಣ, ರಾಜ್ಯಾಧ್ಯಕ್ಷರಾದ ಮದ್ದೂರು ಬಿ.ಎನ್. ತಜುಜ ಹಾಗೂ ರಾಜ್ಯ ಪ್ರಧಾನ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲನ್ನು ಶೀಥಲೀಕರಿಸಿ ಒಕ್ಕೂಟಕ್ಕೆ ಸರಬರಾಜು ಮಾಡುವ ಉದ್ದೇಶಕ್ಕೆ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಲು ಸಹಾಯ ಧನ ನೀಡಲಾಗುತ್ತಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ಪಟ್ಟಣದ ಕೋಚಿಮುಲ್ ಶಿಬರ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬಿಎಂಸಿ ಘಟಕ ಅಳವಡಿಸಲು ಸಿವಿಲ್ ಕಾಮಗಾರಿ ಕೈಗೊಳ್ಳಲು ಹಾಗೂ ವಿವಿಧ ಕಾರಣಗಳಿಂದ ಮರಣ ಹೊಂದಿದ ಹಸುಗಳ ಮಾಲೀಕರಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿ ಮಾತನಾಡಿ, ಚೌಡನಹಳ್ಳಿ, ಕೂಳುಗುರ್ಕಿ, ನಾರವಮಾಕಲಹಳ್ಳಿ, ದೊಡ್ಡ ಬಂದಾರ್ಲಹಳ್ಳಿ ಹಾಗೂ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೆಳಗಿನ ಜಾವ ಪ್ರಾಮಾಣಿಕತೆಯಿಂದ ಚಳಿ, ಗಾಳಿ ಲೆಕ್ಕವಿಲ್ಲದೆ ಮನೆ ಮನೆಗೂ ಪತ್ರಿಕೆಗಳನ್ನು ಹಂಚುವ ಹುಡುಗರನ್ನು ಶ್ರೀನಿವಾಸಪುರರೋಟರಿ ಸಂಸ್ಥೆ ಗುರ್ತಿಸಿ ಆಹಾರ ಕಿಟ್ ಅನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪ್ರಭಾರಿ ಪಿ.ಎಸ್.ಐ ನಾರಾಯಣಪ್ಪ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಸೆಂಟ್ರಲ್ ಶ್ರೀನಿವಾಸಪುರ ವತಿಯಿಂದ ಪತ್ರಿಕಾ ಹಂಚುವ ಹುಡುಗರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಪಿ.ಎಸ್.ಐ. ನಾರಾಯಣಪ್ಪ, ಪತ್ರಿಕಾ ಹಂಚುವ ಹುಡುಗರನ್ನು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಸೆಂಟ್ಆನ್ಸ್ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಫಿಮುಸ್ಕಾನ್ ದ್ವಿತೀಯ ಪಿಯುಸಿಯಲ್ಲಿ 463 ಅಂಕಗಳೊಂದಿಗೆ ಶೇ.77.16 ಫಲಿತಾಂಶ ಪಡೆದಿದ್ದಾರೆ. ಈ ವಿದ್ಯಾರ್ಥಿನಿ ಇಂಗ್ಲೀಷ್ನಲ್ಲಿ 73, ಹಿಂದಿಯಲ್ಲಿ 76, ವಾಣಿಜ್ಯ ಶಾಸ್ತ್ರದಲ್ಲಿ 80, ಲೆಕ್ಕಶಾಸ್ತ್ರದಲ್ಲಿ 70, ಸಂಖ್ಯಾಶಾಸ್ತ್ರದಲ್ಲಿ 71 ಹಾಗೂ ಕಂಪ್ಯೂಟರ್ ಸೈನ್ಸ್ನಲ್ಲಿ 63 ಅಂಕ ಪಡೆದಿದ್ದಾರೆ.

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪತ್ರಿಕಾ ವಿತರಕರು ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜ ಸೇವಾ ಸಂಸ್ಥೆಗಳು ಅವರ ನೆರವಿಗೆ ಬರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಅಧ್ಯಕ್ಷ ಎಸ್.ಶಿವಮೂರ್ತಿ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಸೆಂಟ್ರಲ್ ಶ್ರೀನಿವಾಸಪುರ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸಭೆಯಲ್ಲಿ ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಕೊರೊನಾ ಭಯದ ನಡುವೆ ಸೈನಿಕರಂತೆ ಪತ್ರಿಕಾ ವಿತರಕರು ಮನೆ ಮನೆಗೆ ತೆರಳಿ ಪತ್ರಿಕೆ […]