ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಗೆ ಖಾಯಂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ನೀಡುವ ಜೊತೆಗೆ ಕೃಷಿ ಆಧಾರಿತ ಕೈಗಾರಿಕೆಗಳು ಮತ್ತು ಮಾವು ಸಂಸ್ಕರಣಾ ಘಟಕಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ತರಕಾರಿಯೊಂದಿಗೆ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಯಾವುದೇ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ ಜಿಲ್ಲೆಯ ಮೂಡಣಬಾಗಿಲು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಎಂಸಿ ಘಟಕಗಳ ಸ್ಥಾಪನೆಯಿಂದ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣೆ ಸಾಧ್ಯವಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ತಾಲ್ಲೂಕಿನ ನಾರವಮಾಕಲಹಳ್ಳಿ ಗ್ರಾಮದಲ್ಲಿ ಗುರುವಾರ 3 ಸಾವಿರ ಲೀಟರ್ ಮಾಮಥ್ಯದ ನೂತನ ಬಿಎಂಸಿ ಘಟಕ ಉದ್ಘಾಟಿಸಿ ಮಾತನಾಡಿ, ಬಿಎಂಸಿ ಘಟಕಗಳಲ್ಲಿ ಹಾಲನ್ನು ಶೀಥಲೀಕರಣ ಮಾಡುವುದರಿಂದ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತಾಲ್ಲೂಕಿನಲ್ಲಿ ಪ್ರತಿ ದಿನ 55 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಹಾಲು ಉತ್ಪಾದಕರಿಗೆ ಲೀಟರ್ ಒಂದಕ್ಕೆ ರೂ.27 ನೀಡಲಾಗುತ್ತಿದೆ. ಪಶು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಇತ್ತೀಚಿಗೆ ಅಭಿವೃದ್ಧಿ ಹೊಂದುತ್ತಿರುವ ಜಗತ್ತಿನಲ್ಲಿ ಶಬ್ದ ಮಾಲಿನ್ಯ ಹೆಚ್ಚಾಗಿದ್ದು ಕಿವಿಯ ತಮಟೆಗೆ ಹೆಚ್ಚು ಅಪಾಯಕಾರಿ ಇರುವುದರಿಂದ ಶ್ರವಣಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್. ಸೆಲ್ವಮಣಿ ಅವರು ತಿಳಿಸಿದರು .ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶ್ರವಣ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು . […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ; ಬೇಸಿಗೆ ಸಮೀಪಿಸುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು, ಸ್ವಚ್ಚತೆ, ಬೀದಿ ದೀಪ, ನರೇಗಾ ಕಾಮಗಾರಿಗಳು ಪಂಚಾಯಿತಿಯ ಎಲ್ಲಾ ಹಳ್ಳಿಗಳಿಗೆ ಪಕ್ಷಬೇದವನ್ನು ಮರೆತು ಮೂಲಭೂತ ಸೌಲಭ್ಯಗಳಿಗೆ ಆಧ್ಯತೆ ನೀಡೋಣ ಎಂದು ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಣಿ ರವಣಮ್ಮ ತಿಳಿಸಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಕಛೇರಿಯಲ್ಲಿ ಅಧ್ಯಕ್ಷಣಿ ರವಣಮ್ಮ ಅಧ್ಯಕ್ಷತೆಯಲ್ಲಿ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡೋಣ ಎಲ್ಲಾ ಗ್ರಾಮಗಳಿಗೂ ಬೀದಿ ದೀಪ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ನೂತನ ಸರ್ಕಾರಿ ಪ್ರೌಢಶಾಲೆಯ 1995ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ನಗರದ ಮುಸ್ಸಂಜೆ ವೃದ್ದಾಶ್ರಮಕ್ಕೆ ಮಂಚಗಳು,ಕುರ್ಚಿಗಳು ಮತ್ತು ಅಲ್ಲೇರಾ ಮತ್ತಿತರ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ವಿತರಿಸಿದರು.ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವೃಂದದ ಸಂಯೋಜಕ ಜಿ.ಮಹೇಶ್, ತಾವು ಮತ್ತು ತಮ್ಮ ಸಹಪಾಠಿಗಳು ವಿದ್ಯಾರ್ಥಿ ದೆಸೆಯಿಂದಲೂ ಪ್ರತಿ ವರ್ಷ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ ಎಂದರು.ಈ ಬಾರಿ ಮುಸ್ಸಂಜೆ ಮನೆ ಸೇವಾಶ್ರಮದಲ್ಲಿ ಅಗತ್ಯವಿರುವ ವಸ್ತುಗಳನ್ನು ವಿತರಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ಹಿರಿಯರಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ವಕೀಲ ತಾರಹಳ್ಳಿ ವೆಂಕಟೇಶ್ ಅವರ ಕೊಲೆಗೆ ಸಂಬಂಧಿಸಿದಂತೆ, ಪೊಲೀಸರು ಎಲ್ಲ ಆರೋಪಿಗಳನ್ನೂ ಬಂಧಿಸಬೇಕು ಎಂದು ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಆಗ್ರಹಿಸಿದರು.ಪಟ್ಟಣದ ನ್ಯಾಯಾಲಯದ ವಕೀಲರ ಕೊಠಡಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೊಲೆಯಾದ ವಕೀಲರ ಕುಟುಂಬಕ್ಕೆ ಸರ್ಕಾರ ರೂ.25 ಲಕ್ಷ ಪರಿಹಾರ ನೀಡಬೇಕು. ವಕೀಲರ ಪರಿಷತ್ತಿನಿಂದಲೂ ಮೃತ ವಕೀಲರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸೌಲಭ್ಯಗಳನ್ನು ಪರಿಚಯಿಸಿ, ಅನುಕೂಲಮಾಡಿಕೊಡುವುದೇ ವಾರ್ಡ್ ಸಭೆ ಮತ್ತು ಗ್ರಾಮಸಭೆಯ ಉದ್ದೇಶ ಎಂದು ಅಧ್ಯಕ್ಷ ಆರ್.ವಿಶ್ವನಾಥರೆಡ್ಡಿ ಹೇಳೀದರು.ಕೂರಿಗೇಪಲ್ಲಿ ಗ್ರಾಮಪಂಚಾಯಿತಿ ವತಿಯಿಂದ ಗುರುವಾರ ನಡೆದ ವಾರ್ಡ್ ಸಭೆ ಮತ್ತು ಗ್ರಾಮ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಪಂಚಾಯಿತಿವತಿಯಿಂದ ಪಂಚಾಯಿತಿಗೆ ಸಂಬಂದಿಸಿದ ಪ್ರತಿ ಗ್ರಾಮದಲ್ಲಿಯೂ ಕುಡಿಯುವ ನೀರು,ಬೀದಿದೀಪಗಳು,ಚರಂಡಿಗಳ ಸ್ವಚ್ಚತೆ,ಗ್ರಾಮನೈರ್ಲಮ್ಯ, ಸ್ವಚ್ಚತೆಯ ಬಗ್ಗೆ ಹೆಚ್ಚಿನ ಆಧ್ಯತೆ ನೀಡಲಾಗುದು. ನರೇಗಾ ಯೋಜನೆಗಳ ಮೂಲಕ ಸಿಮೆಂಟ್ರಸ್ತೆ, ಚರಂಡಿಗಳ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಪೆ. 01: ಜಿಲ್ಲಾದ್ಯಂತ ಪಿಎಲ್ಡಿ ಬ್ಯಾಂಕ್ನಿಂದ ಪಡೆದಿರುವ ಕೃಷಿ, ಕೋಳಿ ಮತ್ತಿತರ ಸಾಲ ವಸೂಲಾತಿಗಾಗಿ ರೈತರಿಗೆ ನೀಡಿರುವ ನೋಟೀಸ್ ಆದೇಶವನ್ನು ವಾಪಸ್ ಪಡೆದು ಕನಿಷ್ಟಪಕ್ಷ ಒಂದು ವರ್ಷ ಸಾಲ ಮರುಪಾವತಿಸಲು ಕಾಲಾವಕಾಶ ನೀಡಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಿ ರೈತ ಸಂಘ, ಸಾಲ ಪಡೆದಿರುವ ರೈತರು, ಪ್ರಾಂತ ರೈತ ಸಂಘದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನೋಟಿಸ್ಗಳನ್ನು ಸುಡುವ ಮೂಲಕ ಹೋರಾಟ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನಪದ ಕಲೆ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ಕನ್ನಡ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ, ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಹೇಳಿದರು.ಸೋಮಯಾಜಲಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಗುಮ್ಮರೆಡ್ಡಿಪುರ ಗ್ರಾಮದ ಗಾಯಿತ್ರಿ ಮಹಿಳಾ ಸೇವಾ ಸಂಸ್ಥೆಯ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಜನಪದ ಝೇಂಕಾರ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜನಪದ ಕಲೆ ಹಾಗೂ ಸಾಹಿತ್ಯದ ತಾಯಿ […]

