ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಮಾ.31ರೊಳಗೆ ಸಾಲ ಮರುಪಾವತಿ ಮಾಡಿದಲ್ಲಿ ಬಡ್ಡಿ ಮತ್ತು ಸುಸ್ತಿ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು. ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ನಿರ್ದೇಶಕರ ಸಭೆಯ ಅಧ್ಯಕ್ಷತೆ ವಹಿಸಿ ಮಾನಾಡಿ, ಬ್ಯಾಂಕ್ ರೈತರಿಗೆ ರೂ. 280.68ಲಕ್ಷ ಸಾಲ ನೀಡಿದೆ. ಅದಕ್ಕೆ ರೂ. 308.62 ಲಕ್ಷ ಬಡ್ಡಿ ಬರಬೇಕಾಗಿದೆ. ಅಸಲು ಮತ್ತು ಬಡ್ಡಿ ಸೇರಿ ರೂ. 589.30 ಸಾಲ ಮರುಪಾವತಿ ಆಗಬೇಕಾಗಿದೆ. ಇದರಿಂದ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಹೆಣ್ಣು ಭ್ರೂಣ ಹತ್ಯೆ ಮಾಡಿದರೆ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಜೆಎಂಎಫ್ಸಿ ನ್ಯಾಯಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜು ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಾಗಲೆ ಹೆಣ್ಣು ಗಂಡಿನ ಅನುಪಾತದಲ್ಲಿ ಏರುಪೇರಾಗಿದೆ. ಇದು ಹಲವು ಸಮಸ್ಯೆಗಳಿಗೆ ದಾರಿಮಾಡಿಕೊಡುತ್ತದೆ ಎಂದು ಹೇಳಿದರು. ಪೋಷಕರು ಲಿಂಗ ತಾರತಮ್ಯ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಮಕ್ಕಳಲ್ಲಿ ಶಿಸ್ತು ಮೂಡಿಸುಲ್ಲಿ ಹಾಗೂ ಸ್ವಚ್ಛತೆ ಪಾಲಿಸುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಹಿರಿದು : ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸರಿಯಿದ್ದಾಗ ಮಾತ್ರ ಕಲಿಕೆ ವ್ಯವಸ್ಥಿತವಾಗಿ ನಡೆಯುತ್ತದೆ. ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳ ಮನೋ ವಿಕಾಸಕ್ಕೆ ಸಾಣೆ ಹಿಡಿಯಬೇಕು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಸೈನಿಕರ ತ್ಯಾಗ ಹಾಗೂ ಬಲಿದಾನದ ಫಲವಾಗಿ ದೇಶ ವಾಸಿಗಳು ನಿರಾತಂಕವಾಗಿ ಜೀವನ ನಿರ್ವಹಿಸಲು ಸಾಧ್ಯವಾಗಿದೆ: ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕಾಶ್ ಪಟ್ಟಣದ ಯೋಧರ ಸ್ಮಾರಕದ ಸಮೀಪ ಪುಲ್ವಾಮಾ ದಾಳಿಗೆ ಒಂದು ವರ್ಷವಾದ ಸಂದರ್ಭದಲ್ಲಿ ಮಾಜಿ ಯೋಧರಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮೃತ ಯೋಧರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಸೈನಿಕರು ದೇಶದ ಹೆಮ್ಮೆಯ ಪುತ್ರರು. ಅವರಿಗೆ ಅಗತ್ಯವಾದ ಬೆಂಬಲ ನೀಡಬೇಕು. ಅವರ ಸೇವೆಯನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು. […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು : ಶಾಸಕ ಕೆ.ಅರ್.ರಮೇಶ್ ಕುಮಾರ್ ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮದಲ್ಲಿ ರೂ.21 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಎನ್ಆರ್ಐಜಿಯಿಂದ ರೂ.18 ಲಕ್ಷ ಹಾಗೂ ಶಾಸಕರ ಅನುದಾನದಿಂದ ರೂ.7 ಲಕ್ಷ ನೀಡಲಾಗಿದೆ. ಮುಂದೆ ಸಭೆಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ವಿಶಾಲವಾದ ಸಭಾಂಗಣ ನಿರ್ಮಿಸಲಾಗುವುದು ಎಂದು ಹೇಳಿದರು. ಇಂದಿನ ಪರಿಸ್ಥಿತಿಯಲ್ಲಿ […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ, ಹೆಣ್ಣು ಮಕ್ಕಳು ಕಾನೂನು ರಕ್ಷಣೆ ಪಡೆಯಬೇಕು. ಸಮಾಜಕ್ಕೆ ಹೆದರಿ ದೌರ್ಜನ್ಯವನ್ನು ಸಹಿಸಬಾರದು : ಜಎಂಎಫ್ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಚ್.ಆರ್.ದೇವರಾಜು ಶ್ರೀನಿವಾಸಪುರ: ಹೆಣ್ಣು ಮಕ್ಕಳು ಕಾನೂನು ರಕ್ಷಣೆ ಪಡೆಯಬೇಕು. ಸಮಾಜಕ್ಕೆ ಹೆದರಿ ದೌರ್ಜನ್ಯವನ್ನು ಸಹಿಸಬಾರದು ಕಾನೂನು ರಕ್ಷಣೆ ಪಡೆಯಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಚ್.ಆರ್.ದೇವರಾಜು ಹೇಳಿದರು. ಪಟ್ಟಣದ ಸರ್ಕಾರಿ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ […]
ವರದಿ ಶಬ್ಬೀರ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಅಂತರ್ಜಲ ವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಅಂತರ್ಜಲ ಕಚೇರಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಅಂತರ್ಜಲ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯ ಮುನಿಸು ಜೀವ ಸಂಕುಲಕ್ಕೆ ಶಾಪವಾಗಿ ಪರಿಣಸಿದೆ. ಮನುಷ್ಯನ ಸ್ವಾರ್ಥ ಸಮಸ್ಯೆಗಳನ್ನು ತಂದೊಡ್ಡಿದೆ. 1800 ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ ಎಂದು ಹೇಳಿದರು. […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಇಂದಿರಾ ನಗರ ಬಡಾವಣೆ ನಿವಾಸಿಗಳು ಗುರುವವಾರ ಕುಡಿಯುವ ನೀರು ಪೂರೈಸುವಂತೆ ಪುರಸಭೆ ಅಧಿಕಾರಿಗಳನ್ನು ಆಗ್ರಹಿಸಿ ಪಂಪ್ ಹೌಸ್ ಎದುರು ಪ್ರತಿಭಟನೆ ನಡೆ ಬಡವಾಣೆಗೆ 8 ತಿಂಗಳಿಂದ ಅಗತ್ಯ ಪ್ರಮಾಣದ ನೀರು ಸರಬರಾಜಾಗುತ್ತಿಲ್ಲ. ಕೂಲಿ ಮಾಡುವ ಜನರು ದುಡಿದ ಅರ್ಧಷ್ಟು ಹಣವನ್ನು ನೀರು ಖರಿದಿಸಲು ಬಳಸಬೇಕಾಗಿದೆ. ನೀರು ಪೂರೈಸುವಂತೆ ಪುರಸಭೆ ಅಧಿಕಾರಿಗಳಲ್ಲಿ ಪದೇ ಪದೇ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಡವಣೆಯ ಮಹಿಳೆಯರು ದೂರಿದರು. […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನಯಲ್ದೂರಿನ ಶ್ರೀ ಶ್ರೀನಿವಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ವರ್ಷದ ವಿದ್ಯಾರ್ಥಿಗಳಿಗೆ ಎ.ಪಿ.ಜೆ. ಅಬ್ದುಲ್ ಕಲಾಂ ರಸಪ್ರಶ್ನೆಕಾರ್ಯಕ್ರಮ ಶ್ರೀನಿವಾಸಪುರ, ತಾಲ್ಲೂಕಿನಯಲ್ದೂರಿನಲ್ಲಿರುವ ಶ್ರೀ ಶ್ರೀನಿವಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ವರ್ಷದ ಎ.ಪಿ.ಜೆ. ಅಬ್ದುಲ್ ಕಲಾಂ ರಸಪ್ರಶ್ನೆಕಾರ್ಯಕ್ರಮವನ್ನುಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿತಾಲ್ಲೂಕಿನ ವಿವಿಧ 11 ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರುರಸಪ್ರಶ್ನೆಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿತಾಲ್ಲೂಕಿನ ವಿವಿಧ 11 ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರುರಸಪ್ರಶ್ನೆಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾಗವಹಿಸಿದ ಶಾಲೆಗಳ ಪೈಕಿ ಶ್ರೀ ಮಾರುತಿ […]