ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮೊಬೈಲ್ ವಾಹನದಲ್ಲಿ ವಹಿವಾಟು ಆರಂಭಿಸುವ ಮೂಲಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಗ್ರಾಮೀಣ ಜನರ ಮನೆಬಾಗಿಲಿಗೆ ತಲುಪಿಸುತ್ತಿರುವ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ದೇಶಕ್ಕೆ ನಂ.1 ಆಗಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.ಶನಿವಾರ ಬ್ಯಾಂಕ್ ಮುಂಭಾಗ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲೇ ಮೊದಲ ಬಾರಿಗೆ ಆರಂಭಿಸಿರುವ ಮೊಬೈಲ್ ಬ್ಯಾಂಕಿಂಗ್ ವಾಹನದಲ್ಲಿ ಮೈಕ್ರೋ ಎಟಿಎಂ ಹಾಗೂ ವಹಿವಾಟಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಮೈಕ್ರೋ ಎಟಿಎಂನಲ್ಲಿ ಮಹಿಳಾ ಸಂಘದ ಸದಸ್ಯೆಯೊಬ್ಬರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಬಂಗಾರಪೇಟೆ: ಕೃಷಿ ಕಾಯಿದೆಗಳ ವಿರುದ್ಧ ಸತತ 2 ತಿಂಗಳಿಂದ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯವನ್ನು ಖಂಡಿಸಿಸ ರೈತಸಂಘದಿಂದ ಮಡಿಕೆಗಳು ಮತ್ತು ಮುಳ್ಳು ತಂತಿಯ ಸಮೇತ ಹಂಚಾಳ ಗೇಟ್ ಬಂದ್ ಮಾಡಿ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಯಿತು.ಹೋರಾಟದ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಜಾರಿಗೆ ಬರುವ ಸರ್ಕಾರಗಳು ಇಂದು ಪ್ರಜಾಪ್ರಭುತ್ವದ ವಿರೋಧಿಯಾಗಿ ಕಾರ್ಪೊರೇಟ್ ಕಂಪನಿಗಳ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಶಲ ಕರ್ಮಿಗಳು ಸರ್ಕಾರದ ಸೌಲಭ್ಯ ಬಳಿಸಿಕೊಂಡು ಜೀವನ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು.ತಾಲ್ಲೂಕಿನ ಗಂಗರಗಾನಪಲ್ಲಿ ಗ್ರಾಮದಲ್ಲಿ ಸಣ್ಣ ಕೈಗಾರಿಕೆ ಹಾಗೂ ಮೀನು ಸಾಕಾಣಿಕೆ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕುಶಲ ಕರ್ಮಿಗಳಿಗೆ ವಿವಿಧ ಸೌಲಭ್ಯ ವಿತರಣಾ ಸಮಾರಂಭದಲಿ ಮಹಿಳೆಯರಿಗೆ ಹೊಲಿಗೆ ಯಂತ್ರ, ಇತರರಿಗೆ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಕುಶಲ ಕರ್ಮಿಗಳು ವೈಜ್ಞಾನಿಕ ವಿಧಾನ ಅನುಸರಿಸಬೇಕು ಎಂದು ಹೇಳಿದರು.ಈ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ರೈತರು,ಮಹಿಳೆಯರಿಗೆ ಬಡ್ಡಿರಹಿತ ಸಾಲಸೌಲಭ್ಯ ಕಲ್ಪಿಸಿ ಸ್ವಾವಲಂಬಿ ಬದುಕಿಗೆ ದಾರಿಮಾಡಿಕೊಟ್ಟು ಜನರ ಮನೆ ಮಾತಾಗಿರುವ ಡಿಸಿಸಿ ಬ್ಯಾಂಕಿನಲ್ಲೇ ಉಳಿತಾಯದ ಹಣ ಠೇವಣಿ ಇಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತ ಅಸೋಸಿಯೇಟ್ ಪ್ರೊಫೇಸರ್ ಡಾ.ಜಯರಾಮರೆಡ್ಡಿ ತಿಳಿಸಿದರು.ಅವರು ಶುಕ್ರವಾರ ಸ್ವಯಂಪ್ರೇರಿತರಾಗಿ ನಿವೃತ್ತಿ ಸಂದರ್ಭದಲ್ಲಿ ಬಂದ ಉಳಿತಾಯದ ಹಣ 50 ಲಕ್ಷ ರೂಗಳನ್ನು ಡಿಸಿಸಿ ಬ್ಯಾಂಕಿನಲ್ಲಿ ಠೇವಣಿ ಇಟ್ಟ ಸಂದರ್ಭದಲ್ಲಿ ಬ್ಯಾಂಕಿನಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ನಾನು ಬೆಂಗಳೂರು ಜಿಲ್ಲೆಯ ವರ್ತೂರು ಪ್ರಥಮ ದರ್ಜೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಅಲೂಗಡ್ಡೆ ಬೆಳೆ ಕ್ಷೇತ್ರೋತ್ಸವ: ಆಲೂಗಡ್ಡೆ ಬೆಳೆಯಲ್ಲಿ ಅಂಗಮಾರಿ ರೋಗವು ಪ್ರಮುಖ ರೋಗವಾಗಿದ್ದು ಇದರ ನಿರ್ವಹಣೆಯ ಬಗ್ಗೆ ಕೃಷಿ ವಿಜ್ಞಾನ ಕೇಂದ್ರ, ಕೋಲಾರವು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಶ್ರೀ. ಶಾಮಾಚಾರಿ ರೈತರ ಹೊಲದಲ್ಲಿ ಮುಂಚೂಣಿ ಪ್ರಾತ್ಯೆಕ್ಷಿಕೆ ಹಮ್ಮಿಕೊಂಡಿದ್ದು, ದಿನಾಂಕ 05.02.2021 ರಂದು ‘ಆಲೂಗಡ್ಡೆ ಬೆಳೆಯ ಕ್ಷೇತ್ರೋತ್ಸವ’ದಲ್ಲಿ ಪಾಲ್ಗೊಂಡಿದ್ದ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಯಾದ ಡಾ. ಅಂಬಿಕಾ ಡಿ.ಎಸ್ ರೈತರನ್ನು ಉದ್ದೇಶಿಸಿ ಮಾತನಾಡಿ ಆಲೂಗಡ್ಡೆ ಬೆಳೆಯಲ್ಲಿ ಬರುವ ಅಂಗಮಾರಿ ರೋಗದ ನಿಯಂತ್ರಣಕ್ಕೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಕೊಟ್ಯಂತರ ರೂಪಾಯಿ ತಂದರೂ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಆರೋಪ ಸತ್ಯಕ್ಕೆ ದೂರವಾದದು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ನಡೆದ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಶಾಸಕರು, ಆಡಳಿತ ಪಕ್ಷದ ಸದಸ್ಯರ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ಈ ಹಿಂದೆ ಎಂಟು ವರ್ಷಗಳ ಕಾಲ ಪುರಸಭೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಡಿಯುವ ನೀರಿನ ಸೌಲಭ್ಯ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ಅಭಿವೃದ್ಧಿಗೆ ಪೂಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರುವಲ್ಲಿ ಎಲ್ಲ ಸದಸ್ಯರೂ ಸಹಕಾರ ನೀಡಬೇಕುಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಮಾತನಾಡಿ, ಪುರಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರು, ತಮ್ಮ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರವು ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಸಿಬ್ಬಂದಿಗಳಿಗೆ ದಿನಾಂಕ 03.02.2021 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ‘ತೆಂಗಿನ ಸುರುಳಿ ಸುತ್ತುವ ಬಿಳಿನೊಣದ ನಿರ್ವಹಣೆ ತರಬೇತಿ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು.ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಶ್ರೀ ತುಳಸಿರಾಮರವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೆಂಗಿನ ಸುರುಳಿ ಸುತ್ತುವ ಬಿಳಿನೊಣದ ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತೋಟಗಾರಿಕೆ ಮತ್ತು ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ಈ ಕೀಟವು 2016ನೇ ಸಾಲಿನಲ್ಲಿ ಮೊಟ್ಟಮೊದಲ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವು ಮತ್ತು ಟೊಮೆಟೊ ಬೆಳೆ ರಕ್ಷಣೆಗೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಡಿ.ಎಸ್.ಅಂಬಿಕಾ ಹೇಳಿದರು.ತಾಲ್ಲೂಕಿನ ಸಾತಾಂಡ್ಲಹಳ್ಳಿ ಗ್ರಾಮದಲ್ಲಿ ತೊಟಗಾರಿಕಾ ಇಲಾಖೆ ಹಾಗೂ ಕೋಲಾರದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ರೈತರ ಬೆಳೆಗಳಿಗೆ ಕೀಟ ಹಾಗೂ ರೋಗ ಹತೊಟಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೇ.90 ರಷ್ಟು ರೈತರು ಮಾವು ಬೆಳೆಯ ಮೇಲೆ ಆಧಾರ […]

