ಶ್ರೀನಿವಾಸಪುರ : ತಾಲೂಕಿನ ಚಿಂತಾಮಣಿ ರಸ್ತೆಯ ಕಲ್ಲೂರು ಗ್ರಾಮದ ಸಮೀಪ ಶುಕ್ರವಾರ ಸಂಜೆ ತಿರುಮಲದಿಂದ ಚಿಕ್ಕಬಳ್ಳಾಪುರ ಹೋಗುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಜಿಂಕೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೆ ಮೃತ ಪಟ್ಟಿದೆ.ಜಿಂಕೆಯು ರಸ್ತೆ ದಾಟುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅರಣ್ಯ ಅಧಿಕಾರಿ ಅನಿಲ್‍ಕುಮಾರ್ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿ, ಕಾರು ಚಾಲಕನನ್ನು ವಿಚಾರಣೆಯ ಸಂಬಂದ ಶ್ರೀನಿವಾಸಪುರ ಅರಣ್ಯ ಇಲಾಖಾ ಕಚೇರಿಗೆ ಕರೆದ್ಯೂಲಾಯಿತು.
ಶ್ರೀನಿವಾಸಪುರ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಶೇ.90 ರಷ್ಟು ಫಲಿತಾಂಶ ದೊರೆತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿಲಕ್ಷ್ಮಯ್ಯ ತಿಳಿಸಿದ್ದಾರೆ.1253 ಗಂಡು, 1214 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 2467 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆ ಪೈಕಿ 1103 ಗಂಡು, 1117 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 2220 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.88ರಷ್ಟು ವಿದ್ಯಾರ್ಥಿಗಳು ಹಾಗೂ ಶೇ.92 ರಷ್ಟು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ತಾಲ್ಲೂಕಿಗೆ ಶೇ.90 ರಷ್ಟು ಫಲಿತಾಂಶ ಲಭ್ಯವಾಗಿದೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ […]
ಕೋಲಾರ:- ಬಸವ ಜಯಂತಿಯನ್ನು ವರ್ಷಕ್ಕೊಮ್ಮೆ ಆಚರಿಸಲು ಸೀಮಿತ ಗೊಳಿಸದೆ ಬಸವಣ್ಣನವರ ವಚನ, ತತ್ವಗಳ ಸಾರವನ್ನು ನಿತ್ಯ ಜೀವನದಲ್ಲಿ ಅಳವಡಿಸಿ ಕೊಳ್ಳುವ ಮೂಲಕ ಪ್ರತಿ ದಿನವೂ ಬಸವ ಜಯಂತಿ ಆಚರಿಸುವಂತಾದಾದರೆ ಮಾತ್ರ ಜೀವನ ಧನ್ಯ ಎಂದು ಬಸವ ಸಮಿತಿ ಅಧ್ಯಕ್ಷ ಡಾ ಅರವಿಂದ್ ಬಿ. ಜತ್ತಿ ಅಭಿಪ್ರಾಯಪಟ್ಟರು,ನಗರದ ಶ್ರೀ ಬಸವೇಶ್ವರ ಭಕ್ತ ಮಂಡಳಿ ಮತ್ತು ಶರಣೆಯರ ಬಳಗವು ಅರಳೇ ಪೇಟೆಯ ಶ್ರೀ ಬಸವೇಶ್ವರ ದೇವಾಸ್ಥಾನದ ಅವರಣದಲ್ಲಿ ಪ್ರತಿವರ್ಷದಂತೆ ಈ ವರ್ಷವು ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ […]
ಶ್ರೀನಿವಾಸಪುರ : ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯಿತಿಗೆ ಒಳಪಡುವ ಅವಲಕುಪ್ಪ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಸರ್ವೆ ನಂ. 95 ರಲ್ಲಿರುವ 10 ಎಕರೆ ಜಮೀನಿನಲ್ಲಿರುವ ಮಾವಿನ ತೋಟದ ಫಸಲನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶಾಲಾವರಣದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಎಸ್‍ಡಿಎಂಸಿ ಅಧ್ಯಕ್ಷತೆಯಲ್ಲಿ ಬುಧವಾರ ಬಹಿರಂಗ ಹರಾಜು ಪ್ರಕ್ರಿಯೆ ನಡೆಸಲಾಯಿತು.ಅವಲಕುಪ್ಪ ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಸರ್ವೆ ನಂಬರ್ 95ರಲ್ಲಿನ 10 ಎಕರೆ ಜಮೀನಿನ ಮಾವಿನ ತೋಟದ ಫಸಲು […]
ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕು ಬರಗಾಲದ ಪಟ್ಟಿಯಲ್ಲಿ ಇದ್ದು ಇದರ ಹಿನ್ನೆಲೆಯಲ್ಲಿ ತಾಲೂಕಿನ ರೈತರಿಗೂ ಸಹ ಸರ್ಕಾರವು ನೀಡಲಿರುವ ಬರಪರಿಹಾರಕ್ಕಾಗಿ ಹಣ ಬಿಡುಗಡೆಯಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಂಕರ್ ವಣಿಕ್ಯಾಳ್ ಹೇಳಿದರು.ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಗೆ ಬುಧವಾರ ಬೇಟಿ ನೀಡಿ ವಿವಿಧ ದಾಖಲೆಗಳ ಬಗ್ಗೆ ಚರ್ಚೆ ನೆಡೆಸಿ ಮಾತನಾಡಿದರು.ಅದಕ್ಕೆ ದಾಖಲೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಅಲ್ಲದೆ ಆಧಾರ್ ಫೀಡಿಂಗ್ ಲ್ಯಾಂಡ್ ಬೀಟ್ ಆಪ್ ಕುರಿತು ಪ್ರಗತಿ ಪರಿಶೀಲಿಸಿಲಾಗಿದೆ ಎಂದರು ಹಾಗೂ ಕಂದಾಯ ಇಲಾಖೆ ವಿಷಯಗಳ ಬಗ್ಗೆ […]
ಶ್ರೀನಿವಾಸಪುರ : ಸರ್ಕಾರವು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಬಿಸಿಊಟ, ಸಮವಸ್ತ್ರ, ಉಚಿತ ಪುಸ್ತಕಗಳು ಹೀಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೂ ಸಹ ಸರ್ಕಾರಿ ಶಾಲೆಗಳನ್ನು ಉಳಿಸಲು ಅನೇಕ ರೂಪರೇಷಗಳನ್ನು ಹಮ್ಮಿಕೊಂಡಿದೆ. ಆದರೂ ಸರ್ಕಾರಿ ಶಾಲೆಗಳೆಂದರೆ ಮಕ್ಕಳ ಪೋಷಕರಲ್ಲಿ ಒಂದು ರೀತಿಯಲ್ಲಿ ನಿರುತ್ಸಾಹ.ಇಂತಹ ಸಂದರ್ಭದಲ್ಲಿ ತಾಲೂಕಿನ ಜೆ.ತಿಮ್ಮಸಂದ್ರ ಗ್ರಾ.ಪಂ.ವ್ಯಾಪ್ತಿಯ ಕಿರುವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡದ ಕಳಪೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ […]
ಶ್ರೀನಿವಾಸಪುರ : ದೇವಾಲಯಗಳು ಮನುಷ್ಯನ ಜೀವನಕ್ಕೆ ದಾರಿದೀಪವಾಗಿದ್ದು, ದೇವರ ಆರಾಧನೆಯಿಂದ ನೆಮ್ಮದಿಯ ಬದುಕು ಪ್ರಾಪ್ತಿಯಾಗುತ್ತದೆ ಎಂದು ಗ್ರಾಮದ ಮುಖಂಡ ತೂಪಲ್ಲಿ ಮಧುಸೂದನರೆಡ್ಡಿ ಹೇಳಿದರು. ಶ್ರೀನಿವಾಸಪುರ ತಾಲೂಕಿನ ನೆಲವಂಕಿ ಹೋಬಳಿ ತೂಪಲ್ಲಿ ಗ್ರಾಮದಲ್ಲಿ ನಡೆದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ವಾರ್ಷಿಕೋತ್ಸವ ಹಾಗು ಲೋಕಾಕಲ್ಯಾಣರ್ಥವಾಗಿ ಕಲ್ಯಾಣೋತ್ಸವ, ರಾಮಕೋಟಿ ಕಾರ್ಯಕ್ರಮಗಳ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮದ ಶ್ರೀಕೋದಂಡರಾಮಸ್ವಾಮಿ ದೇವಾಲಯವು ಪುರತಾನವಾಗಿದ್ದು , ಕಳೆದ ಎರಡು ವರ್ಷಗಳಿಂದ ಪುನಃಪ್ರತಿಷ್ಟಾಪಿಸಲಾಗಿದ್ದು, ದೇವಾಲಯಕ್ಕೆ ಉತ್ಸವ ಮೂರ್ತಿಗಳನ್ನು ತಂದು ಅವುಗಳಿಗೆ ವಿಶೇಷ ಪೂಜೆಗಳನ್ನು ಮಾಡಿ […]
ಬೆಂಗಳೂರು : ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಶೇ.12 ರಷ್ಟು ಜಾಹೀರಾತು ದರವನ್ನು ಶೀಘ್ರವೇ ಹೆಚ್ಚಳ ಮಾಡಲಾಗುವುದೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಆಯುಕ್ತರನ್ನು ಭೇಟಿ ಮಾಡಿ ಈ ಹಿಂದಿನ ಆಯುಕ್ತರೊಂದಿಗೆ ಸಂಘದ ಪದಾಧಿಕಾರಿಗಳು ಸಭೆ ನಡೆಸಿ ಸಲ್ಲಿಸಲಾದ ಮನವಿಯಲ್ಲಿನ ಬೇಡಿಕೆಗಳ ಕುರಿತು ಆಯುಕ್ತರ […]
ಕೋಲಾರ; ಮೇ.6: ರೈತರ ಹೈನೋದ್ಯಮದ ಕ್ಷೀರಭಾಗ್ಯ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿ ಬರದಿಂದ ತತ್ತರಿಸಿರುವ ರೈತರ ರಕ್ಷಣೆಗೆ ಸಹಕಾರ ಸಚಿವರು ನಿಲ್ಲಬೇಕೆಂದು ರೈತ ಸಂಘದಿಂದ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೇಷ್ಮೆ, ಮಾವು, ಟೊಮೇಟೊ ಬೆಳೆಗಳಿಗೆ ಬಾದಿಸುತ್ತಿರುವ ರೋಗಗಳಿಂದ ತತ್ತರಿಸಿ ಹಾಕಿದ ಬಂಡವಾಳ ಕೈಗೆ ಸಿಗದೆ ಸಂಕಷ್ಟದಲ್ಲಿದ್ದ ರೈತರ ಕೈ ಹಿಡಿದ ಹೈನೋದ್ಯಮ ಇಂದು ದಿನೇ ದಿನೇ ನಷ್ಟದ ಸುಳಿಯಲ್ಲಿ ಸಿಲುಕುತ್ತಿದೆ. ಹೈನೋದ್ಯಮದ ರಕ್ಷಣೆಗೆ ನಿಲ್ಲಬೇಕಾದ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ರೈತ […]