ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ ತರಗತಿಯನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಸರ್ಕಾರ ಹಾಗೂ ಇಲಾಖೆಯ ನಿರ್ದೇಶನದಂತೆ, ತರಗತಿ ಆರಂಭವನ್ನು ಸಿಹಿ ಹಂಚುವ ಮೂಲಕ ಹರ್ಷಭರಿತ ವಾತಾವರಣದಲ್ಲಿ ನೆರವೇರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕಿ ವಿ.ಬಿ. ಅರುಣ ಅವರು, ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಪ್ರತಿಯೊಬ್ಬ ಮಗುವನ್ನೂ ಶಾಲೆಗೆ ಸೇರಿಸುವುದು ಪೋಷಕರ ಪ್ರಮುಖ ಕರ್ತವ್ಯ. ಶಿಕ್ಷಣವೇ ಮಕ್ಕಳ ಉಜ್ವಲ ಭವಿಷ್ಯ […]
ಶ್ರೀನಿವಾಸಪುರ : ದೇಶವನ್ನು ಹಗಲಿರಲು ನಮ್ಮ ಸೈನಿಕರು ಕಾಯುತ್ತಿದ್ದಾರೆ ಅವರಿಗೆ ಮನಪೂರ್ವಕಾಗಿ ಅಭಿನಂದನೆಗಳನ್ನು ಸಲ್ಲಿಸಬೇಕು ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಕೆ.ಎನ್.ವೇಣುಗೋಪಾಲರೆಡ್ಡಿ ಹೇಳಿದರು.ಪಟ್ಟಣದಲ್ಲಿ ಗುರುವಾರ ಬಿಜೆಪಿ ಪಕ್ಷದವತಿಯಿಂದ ಹರ್‌ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 79 ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ 13, 14,15 ರಂದು ಈ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆಯ ಮೇಲೆ ರಾಷ್ಟ್ರದ್ವಜವನ್ನು ಹಾರಿಸುವುದರ ಮೂಲಕ ದೇಶ ಪ್ರೇಮವನ್ನು ಮರೆಯಬೇಕೆಂದು ಪ್ರದಾನ ಮಂತ್ರಿ ನರೇಂದ್ರ ಮೋದಿರವರು ಕರೆ ನೀಡಿರುವ ಹಿನ್ನೆಲೆಯಲ್ಲಿ […]
ಶ್ರೀನಿವಾಸಪುರ : ಶ್ರೀನಿವಾಸಪುರ ವಲಯದ ಸರ್ಕಾರಿ ಉರ್ದು ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಇರುವ ಸಂದರ್ಭಗಳಲ್ಲಿ, ಉರ್ದು ಅರಿತಿರುವ ಶಿಕ್ಷಕರಿಗೇ ಮುಖ್ಯಶಿಕ್ಷಕರ ಚಾರ್ಜ್ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಆದೇಶ ಹೊರಡಿಸಲಾಗಿದೆ. ಕೋಲಾರ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಮತ್ತು ಇಳುವರಿ ಇಲಾಖೆ, ಕೋಲಾರ ರವರ ಜ್ಞಾಪನದಂತೆ ಈ ಆದೇಶ ಹೊರಡಿಸಲಾಗಿದ್ದು, ಉರ್ದು ಶಾಲೆಗಳ ಶಿಕ್ಷಣ ಕಾರ್ಯದ ಗುಣಮಟ್ಟ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಉರ್ದು ಶಾಲೆಗಳಲ್ಲಿ ಮುಖ್ಯಶಿಕ್ಷಕರಾಗಿ ಕೆಲಸ ಮಾಡುವವರಿಗೆ ಪಾಠಯೋಜನೆ, ವಾರ್ಷಿಕ ಪಾಠ ಹಂಚಿಕೆ, […]
ಶ್ರೀನಿವಾಸಪುರ: ಗದ್ದರ್ ಸಮಾಜದಲ್ಲಿನ ಶೋಷಿತ ಸಮುದಾಯಗಳ ಬಗ್ಗೆ ಧ್ವನಿ ಎತ್ತಿದ ಕವಿ ಹಾಗೂ ಹಾಡುಗಾರರಾಗಿದ್ದರು. ಶೋಷಣೆ ವಿರುದ್ಧ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಾಲ್ಲೂಕು ದಲಿತ ಮುಖಂಡ ವರ್ತನಹಳ್ಳಿ ವೆಂಕಟೇಶ್ ಹೇಳಿದರು.ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ತಾಲ್ಲೂಕು ದಲಿತ ಸಂಘಟನೆಗಳ ವತಿಯಿಂದ ಬುಧವಾರ ಏರ್ಪಡಿಸಿದ್ದ ಪ್ರಜಾಕವಿ ಗದ್ದರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರಾಗಿದ್ದ ಗದ್ದರ್ ಸಮಾಜ ಸುಧಾರಣೆ ಮಾಡುವ ಉದ್ದೇಶದಿಂದ ನೌಕರಿಗೆ ವಿದಾಯ ಹೇಳಿದರು. ಕ್ರಾಂತಿ […]
ಶ್ರೀನಿವಾಸಪುರ : ಪ್ರತಿ ವರ್ಷ ಮುಂಗಾರು ಮಳೆ ಸೃಷ್ಠಿಸುವ ಅವಾಂತರಗಳನ್ನು ಸಮಪರ್ಕವಾಗಿ ನಿಭಾಯಿಸುವಲ್ಲಿ ಕಂದಾಯ ಅಧಿಕಾರಿಗಳು ವಿಫಲವಾಗಿದ್ದರೆ ಬಲಾಢ್ಯರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ರಾಜಕಾಲುವೆ ಚರಂಡಿ , ಬಂಡಿ ದಾರಿಗಳನ್ನು ಅಭಿವೃದ್ಧಿ ಪಡಿಸದ ಅಧಿಕಾರಿಗಳ ನಿರ್ಲಕ್ಯದಿಂದ ಕೆರೆಗೆ ಹರಿಯಬೇಕಾದ ಮಳೆನೀರು ರಸ್ತೆಯ ಮೇಲೆ ಹರಿದು ರೈತರ ಬೆಳೆ ಹಾಗೂ ಬಡವರ ಮನೆಗಳಿಗೆ ನುಗ್ಗಿ ಅವಾಂತರಗಳನ್ನು ಸೃಷ್ಠಿಸುತ್ತಿದ್ದರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳಿಂದ ಬಡವರ ಬದಕು ಬೀದಿಗೆ ಬೀಳುತ್ತಿದ್ದೇ ಎಂದು ರೈತ ಸಂಘದ ರಾಜ್ಯ ಸಂಚಾಲಕ […]
ಕೋಲಾರ : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ UPSC/KAS ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ KPSC ಗ್ರೂಪ್-‘ಸಿ’, RRB ಮತ್ತು SSC ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದೆ. ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಗಳು ಈ ತರಬೇತಿಗಾಗಿ ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳಂತೆ, ಅಭ್ಯರ್ಥಿಗಳು ಕರ್ನಾಟಕ ರಾಜ್ಯದ […]
ಕೋಲಾರ:- ಕೋಲಾರ ಮತ್ತು ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿದ್ದೋದ್ದೇಶ ಸಹಕಾರ ಸಂಘವು 2024-25 ಸಾಲಿನಲ್ಲಿ 1.71 ಲಕ್ಷ ನಿವ್ವಳ ಲಾಭದೊಂದಿಗೆ ಆಡಿಟ್ ವರದಿಯಲ್ಲಿ ಬಿ ಶ್ರೇಣಿ ದಕ್ಕಿಸಿಕೊಂಡಿದೆಯೆಂದು ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪ್ರತಿ ವರ್ಷ ಸಂಘದಿಂದ ಸುಮಾರು 65 ಮಂದಿ ಪತ್ರಕರ್ತರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಶೇ.90 ಕ್ಕಿಂತಲೂ ಹೆಚ್ಚಿನ ಪ್ರಮಾಣ ಸಾಲ ವಸೂಲಾತಿ […]
ಶ್ರೀನಿವಾಸಪುರ, ಆ. ೪ – ಹಬ್ಬದ ಒಳಗೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕುವ ಜೊತೆಗೆ ಬೀದಿ ದೀಪಗಳನ್ನು ತ್ವರಿತವಾಗಿ ಸ್ಥಾಪಿಸುವಂತೆ ಹಾಗೂ ನೀರಿನ ಕೊರತೆಯುಳ್ಳ ಗ್ರಾಮಗಳಲ್ಲಿ ತಕ್ಷಣ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಶಾಸಕರಾದ ಜಿ.ಕೆ. ವೆಂಕಟಶಿವಾರೆಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಹೊರವಲಯದ ಹೊಗಳಗೆರೆ ಕೃಷಿ ಮಾವು ಅಭಿವೃದ್ದಿ ಮಂಡಳಿ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಕೆಡಿಪಿ (ಕೆಳಮಟ್ಟದ ಅಭಿವೃದ್ಧಿ) ಸಭೆಗೆ ಚಾಲನೆ ನೀಡಿದ ಅವರು ಮಾತನಾಡಿದರು. ಹಳ್ಳಿಗಳಲ್ಲಿ ನಿಲ್ಲಿಸಿರುವ ಜೆಜೆಎಂ (ಜಲ ಜೀವನ್ ಮಿಷನ್) […]
ಕೋಲಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೋಲಾರ ಜಿಲ್ಲಾ ಕಚೇರಿ ವ್ಯಾಪ್ತಿಯ , ತಾಲ್ಲೂಕು ಕಚೇರಿ, ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಬಹುತೇಕ ಹುದ್ದೆಗಳು ಇನ್ನೂ ಖಾಲಿ ಇರುವ ದೃಶ್ಯ ಸ್ಪಷ್ಟವಾಗಿದೆ. ಜಿಲ್ಲೆಯಲ್ಲಿ ಒಟ್ಟು 86 ಖಾಯಂ ಹುದ್ದೆಗಳು ಮಂಜೂರಾಗಿದ್ದು, ಇದರ ಪೈಕಿ ಕೇವಲ 28 ಹುದ್ದೆಗಳು ಮಾತ್ರ ಭರ್ತಿಯಾಗಿವೆ, ಉಳಿದ 58 ಹುದ್ದೆಗಳು ಖಾಲಿಯಾಗಿವೆ ಎಂಬ ಅಂಶ ಬೆಳಕಿಗೆ ಬಂದಿದೆ. ವಿಭಾಗವಾರು ಹುದ್ದೆಗಳ ವಿವರ ಹೀಗಿದೆ: ಜಿಲ್ಲಾ […]

