ಶ್ರೀನಿವಾಸಪುರ: ಸಾಮಾಜಿಕ ಸಮಾನತೆ ಹಾಗೂ ವ್ಯಕ್ತಿಗೌರವ ಕುವೆಂಪು ಸಾಹಿತ್ಯದ ಪ್ರಮುಖ ಅಂಶವಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಶ್ರೇಷ್ಠ ಕವಿ ಮಾತ್ರವಲ್ಲದೆ, ಪ್ರಖರ ಮಾನವತಾವಾದಿಯಾಗಿದ್ದರು ಎಂದು ಹೇಳಿದರು.ತಾಲ್ಲೂಕಿನಲ್ಲಿ ರೂ.350 ಕೋಟಿ ವೆಚ್ಚದಲ್ಲಿ ಜಲ ಜೀವನ ಮಿಷನ್ ಯೋಜನೆ ಮೂಲಕ ಪ್ರತಿ ಮನೆಗೂ ಕುಡಿಯುವ ನೀರು ಪೂರೈಸಲಾಗುವುದು. ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಕಲ್ಪಿಸುವ […]
ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಫಲಾನಭವಿಗಳ ಆಯ್ಕೆ ದಿನಾಂಕ: 29.12.2023 ರಂದು ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷರವರ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿಯಲ್ಲಿ ವಿವರವಾಗಿ ಚರ್ಚಿಸಿ ಫಲಾನುಭವಿಗಳನ್ನು ಲಾಟರಿ ಎತ್ತುವ ಮುಖಾಂತರ ನಿಗದಿತ ಗುರಿಯಂತೆ ಆಯ್ಕೆ ಮಾಡಲಾಯಿತು. 2023-2024 ನೇ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು 653 ಅರ್ಜಿಗಳು ಸ್ವೀಕೃತಗೊಂಡಿದ್ದು ಸರ್ಕಾರ ನಿಗಧಿಪಡಿಸಿದ ಅರ್ಥಿಕ ಗುರಿ ರೂ.18 ಲಕ್ಷಗಳನ್ನು ನಿಗಧಿಪಡಿಸಿದ್ದು, ಜಿಲ್ಲೆಯ […]
ಕೋಲಾರ,ಡಿ.29: ಪತ್ರಕರ್ತ ಇಂದಿನ ಕಾರ್ಫೊರೇಟ್ ವ್ಯವಸ್ಥೆಯಲ್ಲಿ ಒಂದು ಸರಕಾಗುತ್ತಿದ್ದಾನೆ. ಅದನ್ನು ತಪ್ಪಿಸಲು ಪ್ರಯತ್ನ ಮಾಡಿದರೆ ಮಾದರಿ ಪತ್ರಕರ್ತರಾಗಿ ಉಳಿಯಬಲ್ಲರು ಎಂದು ಸಾಹಿತಿ ಸ.ರಘುನಾಥ ಅಭಿಪ್ರಾಯಪಟ್ಟರು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) ಅವರ ಪ್ರಥಮ ಪುಣ್ಯ ಸ್ಮರಣೆ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಹಿಂದೆ ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವನಿ ಇತ್ತು. ಇಂದು ಆ ಅಭಿವ್ಯಕ್ತಿ […]
ಕೋಲಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಕ್ರಮಕ್ಕೆ ಸೂಚನೆ ಆಯವ್ಯಯದಲ್ಲಿ ಘೋಷಣೆಯಾದ ಯೋಜನೆಗಳಿಗೆ ಹಣದ ಕೊರತೆ ಇಲ್ಲ ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆ ಮಂಜೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕೋಲಾರ : ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್‌ಗಳ ಮೇಲುಸ್ತುವಾರಿ ಮಾಡಲು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]
ಎ.ಪಿ.ಎಂ.ಸಿ. ಜಾಗದ ಸಮಸ್ಯೆ ಹಾಗೂ ಹಾಲು ಒಕ್ಕೂಟದ ನೇಮಕಾತಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಮತ್ತು ರೈತರ ನಿದ್ದೆಗೆಡಿಸುತ್ತಿರುವ ನಕಲಿ ಬಿತ್ತನೆ ಬೀಜ, ಕೀಟನಾಶಕ, ನಿಯಂತ್ರಣಕ್ಕೆ ಪ್ರಭಲ ಬೀಜ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಏಷ್ಯಾದಲ್ಲೇ ಅತಿ ದೊಡ್ಡ ಎರಡನೇ ಮಾರುಕಟ್ಟೆಯನ್ನು ಪ್ರಸಿದ್ದಿ ಪಡೆದಿರುವ ಎ.ಪಿ.ಎಂ.ಸಿ. ಅಭಿವೃದ್ದಿಗೆ ಅವಶ್ಯಕತೆ ಇರುವ 100 ಎಕರೆ ಜಮೀನನ್ನು 10 ವರ್ಷಗಳಿಂದ ಹುಡುಕಾಡಿದರೂ ಕಂದಾಯ ಮತ್ತು ಸರ್ವೆ ಅಧಿಕಾರಿಗಳಿಗೆ ಜಾಗ ಸಿಗುತ್ತಿಲ್ಲ. ಮತ್ತೊಂದಡೆ ಇನ್ನೇನು […]
ಕೋಲಾರ: ಭಾರತ ಸೇವಾದಳವು ಶತಮಾನೋತ್ಸವ ಕಾರ್ಯಕ್ರಮವನ್ನು ಡಿ. 28 ರಂದು ಮಾಲೂರು ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಗುತ್ತಿದ್ದು, ಆನಂತರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಚರಿಸಲು ಭಾರತ ಸೇವಾದಳ ಜಿಲ್ಲಾ ಸಮಿತಿ ತೀರ್ಮಾನಿಸಿತು. ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಅಧ್ಯಕ್ಷತೆಯಲ್ಲಿ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಮಾಲೂರು ಕಾರ್ಯಕ್ರಮದ ನಂತರ ಕೋಲಾರ ಜಿಲ್ಲಾ ಕೇಂದ್ರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸುಮಾರು 2 ಸಾವಿರ ಮಕ್ಕಳ ಸಮ್ಮುಖದಲ್ಲಿ ಭಾರತ ಸೇವಾದಳ […]
ಶ್ರೀನಿವಾಸಪುರ 1 : ನಮ್ಮ ದೇಶದಲ್ಲಿ ಬಡುಕುಟುಂಬಗಳ ಏಳಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ. ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರದರ್ಶಿಸುತ್ತಿದೆ. ದೇಶದಲ್ಲಿ ಎಲ್ಲರೂ ಸಹ ನನ್ನ ಕುಟುಂಬವೇ ಎನ್ನುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.ರಾಯಲ್ಪಾಡಿನ ಗ್ರಾಮಪಂಚಾಯತಿ ಆವರಣದ ಮುಂಭಾಗ ಮಂಗಳವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ನರೇಂದ್ರ ಮೋದಿರವರು ಒಂದು ದಿನವೂ ಸಹ ರಜಾ ಹಾಕಿಲ್ಲ. ದೇಶವನ್ನು ಪ್ರಪಂಚದಲ್ಲಿಯೇ […]
ಶ್ರೀನಿವಾಸಪುರ: ಹಿರಿಯ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಪೊಲೀಸ್ ಇನ್ಸ್‍ಪೆಕ್ಟರ್ ಎಂ.ಬಿ.ಮಹಮದ್ ಗೊರವನಕೊಳ್ಳ ಹೇಳಿದರು.ಪಟ್ಟಣದ ವೃದ್ಧಾಶ್ರಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ವೃದ್ಧಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ವೃದ್ಧರನ್ನು ಕಡೆಗಣಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು.ತಂದೆ ತಾಯಿ ತಮ್ಮ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುತ್ತಾರೆ. ತಮ್ಮ ಸಮಸ್ಯೆಗಳನ್ನು ಬದಿಗಿಟ್ಟು ಮಕ್ಕಳ ಪಾಲನೆ ಮಾಡುತ್ತಾರೆ. ಅವರ ಉತ್ತಮ ಭವಿಷ್ಯದ ಬಗ್ಗೆ ಕನಸು ಕಾಣುತ್ತಾರೆ. ಆದರೆ ಮಕ್ಕಳು ಮುದಿ ತಂದೆ ತಾಯಿಯನ್ನು […]
ಮುಂಬೈ : ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿ ಮುಂಬೈಗೆ ಬಂದು ನೆಲೆನಿಂತಿದ್ದಾರೆ. ಮುಂಬೈನಲ್ಲಿ ಕನ್ನಡ ಪತ್ರಿಕೆಗಳು ಸಾಕಷ್ಟು ಪ್ರಸಾರ ಹೊಂದಿವೆ. ಇಲ್ಲೇ ಹಲವು ಪತ್ರಿಕೆಗಳು ಹುಟ್ಟಿ ಬೆಳೆದು ನಮ್ಮ ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೂ ದೊಡ್ಡ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಪ್ರಂಶಸೆ ವ್ಯಕ್ತಪಡಿಸಿದರು. ಮುಂಬೈನ ಸ್ವರ್ಗೀಯ ರಾಧಾ ಭೋಜನಶೆಟ್ಟಿ ಸುರತ್ಕಲ್ ವೇದಿಕೆಯಲ್ಲಿ ಶನಿವಾರ ನಡೆದ ಕರ್ನಾಟಕ ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ […]