
ಶ್ರೀನಿವಾಸಪುರ : ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆ ನಡೆದು ಅಂತಿಮ ವರದಿ ಸರ್ಕಾರಕ್ಕೆ ಬರುವ ತನಕ ಅರಣ್ಯ ಇಲಾಖೆಯವರು ರೈತರಿಗೆ ತೊಂದರೆ ಕೊಡಬಾರದೆಂದುಸರ್ಕಾರದ ಆದೇಶ ಇದ್ದರು , ಈ ಸೋಮವಾರ ಸರ್ಕಾರದ ಆದೇಶವನ್ನು, ಹೈಕೋರ್ಟ್ ಆದೇಶವನ್ನು ದಿಕ್ಕರಿಸಿದ್ದಾರೆ ಎಂದು ಪಿ.ಆರ್. ಸೂರ್ಯನಾರಾಯಣ ಆರೋಪಿಸಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರನ್ನು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.ಶ್ರೀನಿವಾಸಪುರದ ವಲಯ ಅರಣ್ಯಾಧಿಕಾರಿ ಮತ್ತು ಇಪ್ಪತ್ತಕ್ಕೂ ಹೆಚ್ಚು ಸಿಬ್ಬಂದಿ ತಾಲೂಕಿನ ಕಸಬಾ ಹೋಬಳಿಯ ಪಾತಪಲ್ಲಿ, ದ್ವಾರಸಂದ್ರ, ಆರಮಾಕಲಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಈ […]

ನರಸಾಪುರ,ಮಾ.18: ಮಹೇಂದ್ರ ಏರೋ ಸ್ಟೈಸ್ ಕಂಪನಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಖಾಸಗಿ ವ್ಯಕ್ತಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡಿರುವ ಕಾರ್ಖಾನೆ ಆಡಳಿತ ಮಂಡಳಿ ವಿರುದ್ದ ಕ್ರಮಿನಲ್ ಮೊಕದ್ದಮೆ ದಾಖಲು ಮಾಡಿ ನೊಂದ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕೆಂದು ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಕಾರ್ಮಿಕ ಸಚಿವರು ಹಾಗೂ ಜಿಲ್ಲಾಡಳಿತವನ್ನು ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯ ಮಾಡಿದ್ದಾರೆ.ರೈತರ ಕೃಷಿ ಭೂಮಿ ನೀರು ಹಾಗೂ ಮೂಲಭೂತ ಸೌಕರ್ಯಗಳನ್ನು ಸ್ಥಳಿಯ ಕಾರ್ಮಿಕರಿಗೆ ಉದ್ಯೋಗ ನೀಡದೆ ಹೊರ ರಾಜ್ಯದ ಕಾರ್ಮಿಕರಿಗೆ ಲಕ್ಷ ಲಕ್ಷ ಉದ್ಯೋಗವನ್ನು […]

ಶ್ರೀನಿವಾಸಪುರ: ಹಾಲೇರಿ ಗ್ರಾಮದಲ್ಲಿ ಭಾನುವಾರ ಪುನೀತ್‍ರಾಜಕುಮಾರ್ (ಅಪ್ಪು) ರವರ 49 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಸಿಹಿ ಹಂಚಿ, ಅನ್ನ ಸಂತರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳಾದ ಮಾರುತಿಚಾರಿ, ಸುನಿಲ್, ಸುಮನ್, ಕೃಷ್ಣ, ನವೀನ್, ಅನಿಲ್, ರಾಘವೇಂದ್ರ, ನಾಗ, ಪಾಂಡು, ಶ್ರೀಕಂಠ ಹಾಗು ಗ್ರಾಮಸ್ಥರು ಉಪಸ್ಥಿತಿರಿದ್ದರು

ಶ್ರೀನಿವಾಸಪುರ : ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಸ್ಥಳೀಯ ಗ್ರಾ,ಪಂ. ನೀತಿ ಸಂಹಿತೆ ಹೆಸರಿನಲ್ಲಿ ಮನೆಗಳ ಮೇಲೆ ಕಟ್ಟಲಾಗಿದ್ದ ಕೇಸರಿ ಧ್ವಜ ಹಾಗೂ ಶ್ರೀರಾಮನ ಕಟೌಟ್‍ಗಳನ್ನು ತೆರವು ಮಾಡಿದ ಪಂಚಾಯಿತಿ ಸಿಬ್ಬಂದಿ ಗ್ರಾಮದ ಕೂರೀಗೆಪಲ್ಲಿ ರಸ್ತೆಯ ತಿಪ್ಪೆಯಲ್ಲಿ, ಸ್ಮಶಾನದ ಬಳಿ ಬಿಸಾಡಿದ್ದಕ್ಕೆ ಗ್ರಾ.ಪಂ ಸದಸ್ಯ ವೇಂಪಲ್ಲಿ ವೆಂಕಟರಮಣ, ಮೊಟಮಾಕಲ ರಘು, ರೆಡ್ಡಪ್ಪ, ಯಡಗಾನಪಲ್ಲಿ ಶಿವಣ್ಣ, ವೆಂಕಟರಮಣ, ಮಲ್ಲಿಮೋರಪಲ್ಲಿ ಮದನಮೋಹನರೆಡ್ಡಿ, ಚಿಂತಪಲ್ಲಿ ಗ್ರಾಮದ ಗೋವಿಂದು, ಮಂಜುನಾಥ್, ವೆಂಕಟೇಶ್, ದಿಗವ ಚಿಂತಪಲ್ಲಿ ಬಾಲಾಜಿರೆಡ್ಡಿ ರವರು ಗ್ರಾ,ಪಂ ಸಿಬ್ಬಂದಿ ಕಾರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಕೂರಿಗೇಪಲ್ಲಿ […]

ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಪತ್ರಕರ್ತರ ಭವನದಲ್ಲಿ ಡಿವಿಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಡಿ.ವಿ.ಗುಂಡಪ್ಪ ಅವರ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್ ಮಾತನಾಡಿ, ಡಿವಿಜಿ ಪತ್ರಕರ್ತರ ಸಂಘ ಹುಟ್ಟು ಹಾಕಿದ್ದು ಮಾತ್ರವಲ್ಲ; ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ಹೊಟ್ಟೆಪಾಡಿಗಾಗಿ ಪತ್ರಕರ್ತ ಆದೆ ಎಂದಿದ್ದರು. ಆದರೆ, ಎಲ್ಲೂ ಕೈಚಾಚಲಿಲ್ಲ. ನೈತಿಕತೆ ಕಳೆದುಕೊಳ್ಳಲಿಲ್ಲ. ಯಾರ ಹಂಗಿಗೂ ಒಳಗಾಗುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದರು, ಡಿವಿಜಿ ಬರೆದೊರುವ ವೃತ್ತ ಪತ್ರಿಕೆ ಎಂಬ ಕೃತಿ […]

ಲೋಕಸಭಾ ಚುನಾವಣೆ ಘೋಷಣೆ:ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಕೋಲಾರ : ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಹೇಳಿದರು. ಇಂದು ತಮ್ಮ ಕಚೇರಿಯಲ್ಲಿ ಕರೆದ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ […]

ಕೋಲಾರ:- ಜಿಲ್ಲಾದ್ಯಂತ ಮಾ.25 ರಿಂದ ಏ.6ರವರೆಗೂ 65 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 20479 ವಿದ್ಯಾರ್ಥಿಗಳು ಕುಳಿತಿದ್ದು, ಯಾವುದೇ ಗೊಂದಲಕ್ಕೆಡೆ ಇಲ್ಲದಂತೆ ಅಗತ್ಯ ಮೂಲಸೌಲಭ್ಯ ಒದಗಿಸಿ, ಗೊಂದಲಕ್ಕೆ ಅವಕಾಶ ಬೇಡ, ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು,ಶೌಚಾಲಯ ವ್ಯವಸ್ಥೆ, ಡೆಸ್ಕ್, ಗಾಳಿ,ಬೆಳಕು ಸರಿಯಾಗಿದೆ ಎಂಬುದನ್ನು ದೃಢಪಡಿಸಿಕೊಳ್ಳಿ, ಕೇಂದ್ರಗಳಿಗೆ […]

ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ತಾಡಿಗೋಳ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಚ್.ಚಲಪತಿ ಅವರನ್ನು ನೇಮಿಸಿ ತಾ ಪಂ ಇಒ ಅವರು ಆದೇಶ ಹೊರಡಿಸಿದ್ದಾರೆ.ಈವರೆಗೂ ಯಲ್ದೂರು ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದ ಮಂಗಳಾಂಭ ಆಡಳಿತ ವೈಖರಿ ವಿರುದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಸೇರಿದಂತೆ ಸದಸ್ಯರು ತಿರುಗಿಬಿದ್ದ ಹಿನ್ನಲೆಯಲ್ಲಿ ಪಿಡಿಒ ಹುದ್ದೆ ವಿವಾದಕ್ಕೀಡಾಗಿತ್ತು. ಮತ್ತು ತುರ್ತು ಸಭೆ ನಡೆಸಿ ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ವರ್ಗಾವಣೆ ಮಾಡಲು ನಿರ್ಣಯ ಅಂಗೀಕರಿಸಿ ದೂರು […]

ಕೋಲಾರ:- ಶಿಕ್ಷಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಮೂಲಕ ಗುರುಸ್ನೇಹಿಯಾಗಿ ಕೆಲಸ ಮಾಡಿ ಎಲ್ಲರ ಪ್ರೀತಿ ವಿಶ್ವಾಸ ಉಳಿಸಿಕೊಳ್ಳಿ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್ ಮನವಿ ಮಾಡಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ಇತ್ತೀಚೆಗೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಸ್.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಪ್ಪ, […]