ಕೋಲಾರ,ಡಿ.14: ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಬೋಟು ಅವರು ನನಗೆ ಪ್ರಾಣ ಬೆದರಿಕೆ ಹಾಕಿರುವುದರಿಂದ ತನಗೆ ಮತ್ತು ತನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸೈಯದ್ ಇಬ್ರಾಹಿಂ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಷಹೀನ್ ಷಾ ನಗರದ ನಿವಾಸಿಯಾದ ರುಕ್ಸಾರ್ ತಾಜ್ ಕೋಂ.ಮೆಹಬುಬ್ ಬೇಗ್ ರವರ ಮೇಲೆ ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಬೋಟು ಮತ್ತು ಇವರ ಕುಟುಂಬದವರು ಕ್ಷುಲ್ಲಕ ವಿಚಾರಕ್ಕೆ ಇವರ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ರುಕ್ಸಾರ್ ತಾಜ್ […]
ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಪ ವಿಭಾಗದಿಂದ ವಿಧ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಬೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯುತ್ ಸುರಕ್ಷತೆ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು. ವಿದ್ಯುತ್ ಸುರಕ್ಷತೆ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ, ಪ್ರಬಂಧ […]
ಕೋಲಾರ : ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುಧಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಗಧಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗಧಿತ […]
ಕೋಲಾರ: ಜಿಲ್ಲಾಧಿಕಾರಿಗಳು ಕೋಲಾರ ನಗರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕ್ರೀಡಾ ಇಲಾಖಾಧಿಕಾರಿಗಳಾದ ಗೀತಾ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ಮುನಿಯಪ್ಪ ಪ್ರದಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ,ಹಿರಿಯ ಕ್ರೀಡಾ ಪಟು ಹೆಚ್. ಜಗನ್ನಾಥನ್,ಕಾರ್ಯದರ್ಶಿ ರಾಜೇಶ್ ಬಾಬು,ಕೋಚ್ ಎಂ.ವೆಂಕಟೇಶ್ ಅವರು ಜಿಲ್ಲಾಧಿಕಾರಿಗಳಿಗೆ ಸ್ಟೇಡಿಯಂ ಬಗ್ಗೆ ಮಾಹಿತಿ ನೀಡಿ ಶೀಘ್ರವೇ ಕಾಮಗಾರಿಗಳನ್ನು ಪೂರ್ಣ ಗೊಳಿಸಿ ಸಹಕರಿಸುವಂತೆ ಮನವಿ ಮಾಡಿದರು.
ಕೋಲಾರ: ಕಾರ್ಯ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಇಲಾಖಾ ಮುಖ್ಯಸ್ತರು ನೀಡಿರುವ ಗುರಿಯನ್ನು ನಿಗಧಿತ ಅವಧಿಯೊಳಗೆ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ನ್ಯಾಯಾಂಗ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಸರ್ಕಾರವು ವಿವಿಧ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋಲಾರ ಜಿಲ್ಲೆಯಲ್ಲಿ ಒಟ್ಟು 229492 ಅಲ್ಪಸಂಖ್ಯಾತರಿದ್ದು, ಜನಗಣತಿಯ ಆಧಾರದ ಮೇಲೆ ಶೇ. 14.93 ರಷ್ಟು ವಾಸವಿರುತ್ತಾರೆ. ಜಿಲ್ಲೆಯಲ್ಲಿ ಗಾಜಲದಿನ್ನೆ ಮತ್ತು ಬಾಲಸಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ […]
ಕೋಲಾರ : ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುಧಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಗಧಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗಧಿತ […]
ಶ್ರೀನಿವಾಸಪು: ಸರ್ಕಾರ, ಬಗರ್ ಹುಕುಂ ಸಾಗುವಳಿ ರೈತರ ತೆರವು ಕಾರ್ಯಾಚರಣೆ ಕೈಬಿಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಆಗ್ರಹಿಸಿದರು.ಪಟ್ಟಣದ ಶ್ರೀರಾಮ ಮಂದಿರದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಅರಣ್ಯ ಇಲಾಖೆ ಮೂಲಕ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆಪಾದಿಸಿದರು.ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚಿನ […]
ಕೋಲಾರ : ಜಿಲ್ಲೆಯಲ್ಲಿ ಒಟ್ಟು 2180 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ ಒಟ್ಟು 462 ಕಟ್ಟಡಗಳು ಬಾಡಿಗೆಯ ಕಟ್ಟಡಗಳಾಗಿವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ನಿವೇಶನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕುವಾರು ನಿವೇಶನ ಇರುವ ಹಾಗೂ ಇಲ್ಲದೆ ಇರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಸಂಪೂರ್ಣ […]
ಶ್ರೀನಿವಾಸಪುರ 1 : ಸುಮಾರು 10 ಸಾವಿರ ಕ್ಯೂಸೆಕ್ ನೀರು ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ ಈ ಯೋಜನೆ ಗ್ರಾಮೀಣ ಬಾಗದ ರೈತರ ಕೃಷಿ ಹಾಗು ನಾಗರೀಕರ ಕುಡಿಯುವ ನೀರು ಪರಿಸರ ಸಂರಕ್ಷಣೆಗೆ ಪೂರಕವಾಗಿದೆ ಎಂದು ಯಲ್ದೂರು ಗ್ರಾಮಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ಎಂ. ಮಂಗಳಾಂಬ ತಿಳಿಸಿದರು.ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಟೂರು ಗ್ರಾಮದಲ್ಲಿ ಅಮೃತ ಸರೋವರ ಯೋಜನೆ ಅಡಿಯಲ್ಲಿ ಸುಮಾರು 60 ಲಕ್ಷ ವೆಚ್ಚದಲ್ಲಿ ಕೆರೆ ಕಟ್ಟೆ ದುರಸ್ಥಿ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಕೇಂದ್ರ […]