ಕೋಲಾರ,ಡಿ.11: ನವದೆಹಲಿಯಲ್ಲಿ ಭಾರತೀಯ ಮಹಿಳಾ ಸಾಧನೆಗಳ ಪ್ರಶಸ್ತಿ 2023ನ್ನು ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ಸಾಧನೆಗಳ ಪ್ರಶಸ್ತಿ 2023ನ್ನು ಹಾಗೂ ಮೆರಿಟ್ ಸರ್ಟಿಫಿಕೇಟನ್ನು ಅಂತರಾಷ್ಟ್ರೀಯ ಕರಾಟೆಪಟು ನಗರದ ಮಹಾಲಕ್ಷ್ಮೀ ಲೇಔಟ್ನ ನಿವಾಸಿ ರುಮಾನಾ ಕೌಸರ್ ಬೇಗ್ ಪಡೆದುಕೊಂಡಿದ್ದಾರೆ.ಕರಾಟೆ ಕ್ರೀಡೆಯಲ್ಲಿ ವಸತಿ ಶಾಲೆಗಳ 3000 ಬಾಲಕಿಯರಿಗೆ ಆತ್ಮ ರಕ್ಷಣೆ ಕಲೆಯನ್ನು ತರಬೇತಿ ನೀಡುತ್ತಿರುವ ಕೋಲಾರ ಜಿಲ್ಲೆಯ ಕರ್ನಾಟಕ ರಾಜ್ಯದ ರುಮಾನಾ ಕೌಸರ್ ಬೇಗ್ ರಾಜ್ಯ ಮಟ್ಟದಲ್ಲಿ 30 ಪದಕಗಳು ಮತ್ತು 100 ರಾಷ್ಟ್ರೀಯ ಮತ್ತು […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ವೈಜ್ಞಾನಿ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸುಗುಣ ಹೇಳಿದರು.ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಈಚೆಗೆ ಕೋಲಾರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಪರಿಸರ ಸಮಸ್ಯೆಗಳು, ಹವಾಮಾನ ಬದಲಾವಣೆ ಹಾಗೂ ಪರ್ಯಾಯ ಶಕ್ತಿ ಮೂಲಕಗಳು ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಎಂ.ಎಸ್.ಹೇಮಂತ್ ಮತ್ತು […]
ಶ್ರೀನಿವಾಸಪುರ: ಪಟ್ಟಣದ ವಕೀಲರು ಶುಕ್ರವಾರ, ಈಚೆಗೆ ನಡೆದ ಗುಲ್ಬರ್ಗ ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ನ್ಯಾಯಾಲಯದದಿಂದ ತಮ್ಮ ಬೇಡಿಕೆ ಒಳಗೊಂಡ ಫಲಕ ಹಿಡಿದು ಮೆರವಣಿಗೆ ಹೊರಟ ವಕೀಲರು, ಎಂಜಿ ರಸ್ತೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ, ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ತಮ್ಮ ಬೇಡಿಕೆ ಒಳಗೊಂಡ ಮನವಿ ಪತ್ರ ಅರ್ಪಿಸಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಜಯರಾಮೇಗೌಡ ಮಾತನಾಡಿ, ಗುಲ್ಬರ್ಗದಲ್ಲಿ ಈಚೆಗೆ ಹಾಡು ಹಗಲೇ ಕರ್ತವ್ಯ ನಿರತ ವಕೀಲ […]
ಶ್ರೀನಿವಾಸಪುರ: ತಾಲ್ಲೂಕಿನ ಇಮರಕುಂಟೆ ಗ್ರಾಮದ ಶಿಕ್ಷಣ ತಜ್ಞ ಹಾಗೂ ಭೈರವೇಶ್ವರ ವಿದ್ಯಾನಿಕೇತನದ ಸಂಸ್ಥಾಪಕ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ತಮ್ಮ ಕಣ್ಣುಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾನ ಮಾಡುವುದರ ಮೂಲಕ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ.ಅವರು ಪಟ್ಟಣದ ವೆಂಕಟೇಶ್ವರ ನಸಿರ್ಂಗ್ ಹೋಂನಲ್ಲಿ ಗುರುವಾರ ರಾತ್ರಿ ಹೃದಯಾಘಾತದಿಂದ ಮರಣಹೊಂದಿದ ಮೇಲೆ, ಜಾಲಪ್ಪ ಆಸ್ಪತ್ರೆ ವೈದ್ಯರು ಆಗಮಿಸಿ ಶಸ್ತ್ರ ಚಿಕಿತ್ಸೆ ನಡೆಸಿ ಕಣ್ಣು ಪಡೆದುಕೊಂಡರು.ಎಂ.ಶ್ರೀರಾಮರೆಡ್ಡಿ ಅವರ ಪಾರ್ಥೀವ ಶರೀರವನ್ನು ಶುಕ್ರವಾರ ಭೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ […]
ತಡವಾದ ಮುಂಗಾರಿಗೆ ಅಲ್ಪಾವಧಿ ಮತ್ತು ಬೆಂಕಿ ರೋಗ ನಿರೋಧಕರಾಗಿ ತಳಿ ಕೆ.ಎಂ.ಆರ್-316 ಕ್ಷೇತ್ರೋತ್ಸವರಾಗಿ ನಮ್ಮ ರಾಜ್ಯದ ಮುಖ್ಯವಾದ ಖುಷ್ಕಿ ಬೆಳೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮಳೆಯ ಅಸಮತೋಲನದಿಂದ ರಾಗಿ ಇಳುವರಿ ಕಡಿಮೆಯಾಗುತ್ತಿದ್ದು ಇದರ ಸಮಸ್ಯೆ ಪರ್ಯಾಯವಾಗಿ ನೂತನ ರಾಗಿ ತಳಿ ಕೆ.ಎಂ.ಆರ್-316 ಪ್ರಥಮ ಬಾರಿಗೆ ರೈತರ ತಾಕುಗಳಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸಲಾಗಿದ್ದು, ಇದರ ಅಂಗವಾಗಿ ಬಂಗಾರಪೇಟೆ ತಾಲ್ಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಮದ ಗೋವಿಂದಗೌಡರವರ ಜಮೀನಿನಲ್ಲಿ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ತಳಿಯ ಬಗ್ಗೆ ರೈತರಾದ ಗೋವಿಂದಗೌಡ ಮತ್ತು ಹರೀಶ್ […]
ಕೋಲಾರ : ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಬಂಗಾರಪೇಟೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಯುವ ಮತದಾರರ ನೊಂದಣಿ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ್ದರು.
ಶ್ರೀನಿವಾಸಪುರ: ರೋಟರಿ ಶ್ರೀನಿವಾಸಪುರ ಸೆಂಟ್ರಲ್ವತಿಯಿಂದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಇಂಗ್ಲೀಷ್ ನಿಘಂಟುಗಳ ವಿತರಣೆ ಮಾಡಿ,ರೋಟರಿ ಸಂಸ್ಥೆಯು ಸೇವಾ ಮನೋಭಾವನೆಯನ್ನು ಹೊಂದಿದ್ದು, ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಅಧ್ಯಕ್ಷರಾದ ಎಸ್.ಎನ್. ಮಂಜುನಾಥರೆಡ್ಡಿ ತಿಳಿಸಿದರು. ತಾಲ್ಲೂಕಿನ ಗಡಿಭಾಗದ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ರೋಟರಿ ಶ್ರೀನಿವಾಸಪುರ ಸೆಂಟ್ರಲ್ವತಿಯಿಂದ ಇಂಗ್ಲೀಷ್ ನಿಘಂಟುಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದ ಎಸ್.ಎನ್. ಮಂಜುನಾಥರೆಡ್ಡಿ, ಗಡಿಭಾಗದಲ್ಲಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಆಂಗ್ಲಭಾಷೆಯು ಕಷ್ಟಕರವಾಗಿದ್ದು, […]
ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಸರ್ವರ ಹಿತ ಕಾಯುವ ಸಂವಿಧಾನ ನೀಡುವುದರ ಮೂಲಕ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ದಲಿತಪರ ಸಂಘಟನೆಗಳಿಂದ ಬುಧವಾರ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ತಮ್ಮ ಜೀವನದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. ಓದಿನ ಮೂಲಕ ಜ್ಞಾನ ಪ್ರಭೆಯಾಗಿ ಕಂಗೊಳಿಸಿದರು. ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು […]
ಕೋಲಾರ: ಪೋಷಕರು ಅಂಗವಿಕಲ ಮಕ್ಕಳಿಗೆ ವೈಜ್ಞಾನಿಕ ಸಾಧನ ಕೊಡಿಸುವುದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಹೇಳಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಭಾನುವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರ ಬಗ್ಗೆ ಅನುಕಂಪ ಇದ್ದರೆ ಸಾಲದು, ಅವರಿಗೆ ಅಗತ್ಯವಾದ ನೆರವು ನೀಡಬೇಕು ಎಂದು ಅಭಿಪ್ರಾಯಪಟ್ಟರು.ಶೀಗಹಳ್ಳಿ ಶಾಲೆಯ ಮುಖ್ಯ […]