ಶ್ರೀನಿವಾಸಪುರ : ಹಾಲು ಉತ್ತಮ ಗುಣಮಟ್ಟದಲ್ಲಿದ್ದರೆ ಮಾತ್ರ ಅದಕ್ಕೆ ಹೆಚ್ಚಿನ ಬೆಲೆ ಲಭ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ತಾಲ್ಲೂಕಿನ ಆರ್. ತಿಮ್ಮಸಂದ್ರ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಂಘದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘದ ಲೆಕ್ಕಪತ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೈನುಗಾರಿಕೆ ಒಂದು ದೊಡ್ಡ ಉದ್ಯಮವಾಗಿದ್ದು, ಅದನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದು ಅಗತ್ಯ ಎಂದು ಹೇಳಿದರು. ದಿವಂಗತ ಎಂ.ವಿ. ಕೃಷ್ಣಪ್ಪ ಅವರು ಕ್ಷೀರ ಕ್ರಾಂತಿಯ ಹರಿಕಾರರಾಗಿದ್ದು, ಅವರ […]
ಶ್ರೀನಿವಾಸಪುರ : ಸ್ಥಳೀಯ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿ, ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಪಾತಪಳ್ಳಿ ಪಿ.ಎನ್. ಮಂಜುನಾಥ ರೆಡ್ಡಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಶಬ್ಬೀರ್ ಅಹ್ಮದ್ ಪಾಷಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಆಯ್ಕೆಯಲ್ಲಿ ವಿಶೇಷವೆಂದರೆ, ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಶಬ್ಬೀರ್ ಅಹ್ಮದ್ ಪಾಷಾ ಉಪಾಧ್ಯಕ್ಷ ಸ್ಥಾನಕ್ಕೇರಿರುವುದು ಗಮನಾರ್ಹ ಮೈಲಿಗಲ್ಲಾಗಿದೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ […]
ಶ್ರೀನಿವಾಸಪುರ : ತಾಲ್ಲೂಕನ್ನು ಜಿಲ್ಲೆಯಲ್ಲಿ ಸ್ವಚ್ಛತೆಯ ಮಾದರಿಯನ್ನಾಗಿಸಲು ಸಂಕಲ್ಪ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಸರ್ವೇಶ್ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 25 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವಾರದಿಂದಲೇ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಶ್ರೀನಿವಾಸಪುರವನ್ನು ಸ್ವಚ್ಛತೆಯ ಕ್ಷೇತ್ರದಲ್ಲಿ ಜಿಲ್ಲೆಗೆ ಮಾದರಿಯನ್ನಾಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಮನ್ವಯದಿಂದ […]
ಶ್ರೀನಿವಾಸಪುರ : ಓಂ ಶ್ರೀ ಮಂಜುನಾಥಾಯ ನಮ ಎಂಬ ಭಕ್ತಿಭಾವದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬವನ್ನು ಶ್ರೀನಿವಾಸಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ರಾಜ್ಯದ ಲಕ್ಷಾಂತರ ಮಹಿಳೆಯರ ಸಬಲಿಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವ ಮಾತೃಶ್ರೀ ಹೇಮಾವತಿ ಅಮ್ಮನವರು, ನೊಂದವರು, ನಿರ್ಗತಿಕರು ಹಾಗೂ ಆಶ್ರಯವಿಲ್ಲದವರಿಗೆ ಆಶಾಕಿರಣವಾಗಿ ಪರಿಣಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮಾಸಿಕ ರೂ.1000 ರಿಂದ ರೂ.3000ರವರೆಗೆ ನೆರವು […]
ಶ್ರೀನಿವಾಸಪುರ : ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶ್ರೀ ಪಾರ್ವತಿ ಸಮೇತ ಸಹಮನೇಶ್ವರಸ್ವಾಮಿ ಬ್ರಹ್ಮರಥೋತ್ಸವವು ಗುರುವಾರ ಭಕ್ತಿಭಾವದಿಂದ, ಸಂಪ್ರದಾಯಬದ್ಧವಾಗಿ ಹಾಗೂ ಅದ್ದೂರಿಯಾಗಿ ನಡೆಯಿತು. ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ಅಲಂಕಾರ ಕಾರ್ಯಗಳು ನೆರವೇರಿದವು. ನಂತರ ಗ್ರಾಮ ದೇವರ ಉತ್ಸವ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹೂವು, ಹಣ್ಣು, ಪೂಜೆ ಸಾಮಗ್ರಿಗಳನ್ನು ಸಮರ್ಪಿಸಿ ಭಕ್ತಿಭಾವದಿಂದ […]
ಶ್ರೀನಿವಾಸಪುರ : ಜಿಲ್ಲಾ ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಮಹೇಶ್ ಅವರು ಮೊದಲಿನಿಂದಲೂ ಸಂಘಟನೆ ಕಾರ್ಯಗಳಲ್ಲಿ ತೊಡಗಿಸಿಕೊಂಡು ಅನುಭವ ಹೊಂದಿದ್ದಾರೆ ಎಂದು ತಾಲೂಕು ಪಂಚಾಯಿತಿ ಇಒ ಕೆ. ಸರ್ವೇಶ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಹಾಗೂ ಖಜಾಂಚಿಯನ್ನು ಸನ್ಮಾನಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಹಲವು ಸವಾಲುಗಳು ಎದುರಾಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಮಹೇಶ್ […]
ಶ್ರೀನಿವಾಸಪುರ : ದೇಶದ ಸಮಗ್ರ ಅಭಿವೃದ್ಧಿಗೆ ಯುವ ಪೀಳಿಗೆಯ ಆರೋಗ್ಯ ಅತ್ಯಂತ ಅಗತ್ಯವಾಗಿದ್ದು, ಪೌಷ್ಟಿಕ ಆಹಾರದಿಂದಲೇ ಆರೋಗ್ಯವಂತ ಮಕ್ಕಳ ನಿರ್ಮಾಣ ಸಾಧ್ಯ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಟಿ.ಆರ್. ಸುಲೋಚನ ಹೇಳಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹೈಯರ್ ಪ್ರೈಮರಿ ಶಾಲೆಯಲ್ಲಿ ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ಅಡುಗೆ ಸಿಬ್ಬಂದಿಗಳಿಗಾಗಿ ಆಯೋಜಿಸಿದ್ದ ಅಡುಗೆ ತಯಾರಿಕಾ ಸ್ಪರ್ಧೆಗೆ ಚಾಲನೆ ನೀಡಿ […]
ಶ್ರೀನಿವಾಸಪುರ : ಪಟ್ಟಣದ ವಾಸವಿ ಕನ್ನಿಕಾಪರಮೇಶ್ವರಿ ದೇವಾಲಯ ಆವರಣದಲ್ಲಿ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ವಾಸವಿ ಗಂಗಾ ಆರತಿ ತಂಡದ ವತಿಯಿಂದ ಭಕ್ತರಿಗೆ ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡುವ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರು ಭಕ್ತಿ ಶ್ರದ್ಧೆಯಿಂದ ಆಚರಿಸಿದರು. ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತರ ಆಗಮನ ಹೆಚ್ಚಾಗಿದ್ದು, ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ನಂತರ ವಾಸವಿ ಗಂಗಾ ಆರತಿ […]
ಶ್ರೀನಿವಾಸಪುರ : ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಸರ್ವೇಶ್ ಪರಿಶೀಲಿಸಿದರು. ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಒಟ್ಟು 245 ಶುದ್ಧ ಕುಡಿಯುವ ನೀರು ಘಟಕಗಳಿದ್ದು, ಅವುಗಳಲ್ಲಿ 216 ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ 29 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, […]

