ಕೋಲಾರ : ಯುವಕ ಯುವತಿಯರು ಈ ದೇಶದ ಬಹು ದೊಡ್ಡ ಆಸ್ತಿ ಅವರನ್ನು ಸರಿದಾರಿಗೆ ನಡೆಸಿಕೊಂಡು ಹೋಗಬೇಕಾದ್ದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯ ಮಾಡುವುದು ಸರ್ಕಾರದ ಪ್ರಮುಖ ಗುರಿ ಎಂದು ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು. ಇಂದು ಬಂಗಾರಪೇಟೆ ತಾಲ್ಲೂಕಿನ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬೂದಿಕೋಟೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಹೊಸ ಸರ್ಕಾರ ಬಂದ ನಂತರ ಕೋಲಾರ […]

Read More

ಶ್ರೀನಿವಾಸಪುರದ ಪುರಸಭೆ ಕಾರ್ಯಾಲಯದಲ್ಲಿ ಸೋಮವಾರ ಜಕಣಾಚಾರಿ ಜಯಂತಿ ಆಚರಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹಾಗೂ ಸಿಬ್ಬಂದಿ ಇದ್ದರು.

Read More

ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮzಲ್ಲಿ ಸೋಮವಾರ ಏರ್ಪಡಿಸಿದ್ದ ರೇಣುಕಾ ಯಲ್ಲಮ್ಮ ದೇವಿ ವಿಶೇಷ ಪೂಜಾ ಮಹೋತ್ಸವದ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Read More

ಶ್ರೀನಿವಾಸಪುರ: ಶಿಲ್ಪಿ ಜಕಣಾಚಾರಿ ಅವರಿಂದ ಕೆತ್ತಲ್ಪಟ್ಟಿರುವ ಶಿಲ್ಪಗಳು ಇಂದಿಗೂ ಜನರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಉಪ ತಹಶೀಲ್ದಾರ್ ಕೆ.ಎಲ್.ಜಯರಾಂ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿ ಸಮಾರಂಭದಲ್ಲಿ ಜಕಣಾಚಾರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕರ್ನಾಟಕ ಕಲೆಯ ತೊಟ್ಟಿಲಾಗಲು ಜಕಣಾಚಾರಿ ಅವರಂಥ ಶಿಲ್ಪಿಗಳು ಕಾರಣರಾಗಿದ್ದಾರೆ ಎಂದು ಹೇಳಿದರು.ವಾಸ್ತು ಶಿಲ್ಪ ಕಲಾ ಪ್ರಕಾರಕ್ಕೆ ಜಕಣಾಚಾರಿ ಮಾದರಿಯಾಗಿದ್ದಾರೆ. ಅವರ ಪರಂಪರೆ ರಾಜ್ಯದಲ್ಲಿ ಇನ್ನೂ […]

Read More

ಶ್ರೀನಿವಾಸಪುರ: ; ಜ.1: ಬಡವರ ಹಸಿವಿನ ಮೇಲೆ ಸರ್ಕಾರ ವ್ಯಾಪಾರ ಮಾಡುವುದನ್ನು ನಿಲ್ಲಿಸಬೇಕೆಂದು ರೈತಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಸರ್ಕಾರಗಳಿಗೆ ಎಚ್ಚರಿಕೆಯ ಜೊತೆಗೆ ಮನವಿ ಮಾಡಿದರು.ಹೊಸ ವರ್ಷ ಆಚರಣೆಯನ್ನು ತಾಲೂಕು ಕಚೇರಿ ಮುಂದೆ ರೈತರು ಬೆಳೆಯುವ ತರಕಾರಿಗಳನ್ನು ಉಚಿತವಾಗಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ವಿತರಣೆ ಮಾಡಿ ಮಾತನಾಡಿದ ಅವರು, ಈ ವರ್ಷ ಉತ್ತಮ ಮಳೆಯಾಗಿ ರೈತರ ಬದುಕು ಹಸನಾಗಿ ನಕಲಿ ಬಿತ್ತನೆ ಬೀಜ ಕೀಟನಾಶಕಗಳ ಹಾವಳಿಯಿಂದ ಮುಕ್ತಿಯಾಗಲಿ. ದುಡಿಮೆಗೆ ತಕ್ಕ ಬೆಲೆ ಸಿಗಲಿ ರೈತರ ಬದುಕು ಹಸನಾಗಲಿ […]

Read More

ಕೋಲಾರ, ಜ.1 ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಲ ಮತ್ತು ಸಬ್ಸಿಡಿ ಯೋಜನೆಗಳು ಯಶಸ್ವಿಯಾಗಬೇಕಾದರೆ ಬ್ಯಾಂಕ್ ಗಳ ಸಂಪೂರ್ಣ ಸಹಕಾರ ಅಗತ್ಯ ಎಂದು ಜಿ.ಪಂ ಸಿಇಓ ಪದ್ಮ ಬಸವಂತಪ್ಪ ಹೇಳಿದರು.ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಲ ಮತ್ತು ಸಬ್ಸಿಡಿ ಯೋಜನೆಗಳು ಅಶಕ್ತರ ಪಾಲಿಗೆ ವರದಾನ. ಅಂತಹ ಮಹತ್ವದ ಯೋಜನೆಗಳಿಗೆ ಬ್ಯಾಂಕ್ ಗಳು ಪ್ರಥಮ […]

Read More

ಕೋಲಾರ,ಜ.01: ಕನ್ನಡ ಪರ ಹೋರಾಟಗಾರ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಮತ್ತು ಕಾರ್ಯಕರ್ತರ ಮನೆಗಳಿಗೆ ಪೆÇಲೀಸರು ತೆರಳಿ ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕ.ರ.ವೇ ಜಿಲ್ಲಾ ಅಧ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಸೋಮವಾರ ಜಿಲ್ಲಾಡಳಿತ ಭವನದ ಬಳಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಕಳೆದ ತಿಂಗಳ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸುವುದವರ […]

Read More

ಕೋಲಾರ,ಜ.01: ನಗರದ ಕೋಲಾರಮ್ಮ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು, ಕೊಡಲೇ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುವಂತೆ ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಆಕ್ರಂಪಾಷ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ, ಕೋಲಾರ ನಗರದ ಅಧಿದೇವತೆ ಕೋಲಾರಮ್ಮ ದೇವಾಲಯ ಹಾಗೂ ಶಿಲ್ಪಕಲೆಯ ಸೊಬಗನ್ನು ಹೊಂದಿರುವ ಸೋಮೇಶ್ವರ ದೇವಾಲಯವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಜನರು ಆಗಮಿಸುತ್ತಾರೆ. […]

Read More

ಶ್ರೀನಿವಾಸಪುರ 1 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳಿಸುವುದು ಕಷ್ಟ . ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ನಿರ್ಧಿಷ್ಟ ಗುರಿಯೊಂದಿಗೆ ಶ್ರದ್ಧೆಯಿಂದ ಶಿಕ್ಷಕರು ಭೋದಿಸುವಂತಹ ಪಾಠಪ್ರವಚನಗಳನ್ನು ಆಲಿಸಿ ಜೀವನದ ಗುರಿಯನ್ನ ಸಾಧಿಸಿ ಎಂದು ಜಿಲ್ಲಾರಕ್ಷಣಾಧಿಕಾರಿ ಎಂ.ನಾರಾಯಣ್ ಸಲಹೆ ನೀಡಿದರು.ತಾಲೂಕಿನ ರೋಣೂರು ಕ್ರಾಸ್ ಬಳಿಯ ವಿಐಪಿ ಶಾಲೆಯ ಆವರಣದಲ್ಲಿ ಶನಿವಾರ ನಡೆದ ಶಾಲಾಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರನ್ನು ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.ಮುಖ್ಯವಾಗಿ ಮಕ್ಕಳ ತಂದೆತಾಯಿಂದಿರು 10 ನೇ ತರಗತಿ ಹಾಗು ಪಿಯುಸಿ ಮಕ್ಕಳಿಗೆ ಯಾವುದೇ ಕಾರಣಕ್ಕೂ […]

Read More
1 71 72 73 74 75 338