
ಶ್ರೀನಿವಾಸಪುರ: ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ವಯೋನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್ ಅವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದಾರೆ. ಹಿಂದಿನ ಸರ್ಕಾರದಲ್ಲಿ ಶೇ.17 ರಷ್ಟು ಮಧ್ಯಂತರ ಪರಿಹಾರ ಪಡೆದುಕೊಳ್ಳುವಲ್ಲಿ […]

ಶ್ರೀನಿವಾಸಪುರ: ಸಂಘ ಜೀವಿಯಾದ ಮನುಷ್ಯ ಸ್ವಾಭಿಮಾನದಿಂದ ಬದುಕಲು ಮೂಲಭೂತ ಹಕ್ಕುಗಳು ಅವಕಾಶ ಕಲ್ಪಿಸುತ್ತವೆ. ಮಾನವ ಹಕ್ಕು ನಿರಾಕರಣೆ ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ ಎಂದು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಹಾಗೂ ವಕೀಲರ ಸಂಘದಿಂದ ಶನಿವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು. ಬದಲಾದ ಪರಿಸ್ಥಿತಿಯಲ್ಲಿ ಹಕ್ಕುಗಳ ರಕ್ಷಣೆ ದೊಡ್ಡ ಸವಾಲಾಗಿದೆ ಎಂದು ಹೇಳಿದರು.ಮಾನವ ಹಕ್ಕು […]

ಶ್ರೀನಿವಾಸಪುರ 4 : ಶ್ರದ್ಧೆಯಿಂದ ಓದಿದರೆ ಯಶಸ್ಸು ಖಂಡಿತ ಕಟ್ಟಿಕಟ್ಟ ಬುತ್ತಿ ಎಂದು ಪ್ರಾಂಶುಪಾಲ ಸೀನಪ್ಪ ಕರೆನೀಡಿದರು.ತಾಲೂಕಿನ ಮುತ್ತಕಪಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಶುಕ್ರವಾರ ಪಾಮುಚ ಸಾಹಿತ್ಯ ಹಾಗು ಸಾಂಸ್ಕøತಿಕ ಸಂಸ್ಥೆ ಯಿಂದ ನಡೆದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ದೃಡಸಂಕಲ್ಪ , ಆತ್ಮವಿಶ್ವಾಸ, ನಿಷ್ಟೆ ಇವರಲ್ಲವೂ ಇದ್ದಾಗ ನಾವೆಲ್ಲರೂ ಸಾಧಕರ ಹಾದಿಯಲ್ಲಿ ಸಾಗಬಹುದಾಗಿದೆ , ಆದ್ದರಿಂದ ವಿದ್ಯಾರ್ಥಿಗಳು ದೊಡ್ಡಗುರಿಯನ್ನು ಹೊಂದಿ ಮುನ್ನೆಡಯಬೇಕು ಎಂದರು.ನಿವೃತ್ತ ಪ್ರಾಂಶುಪಾಲ ಎಂ.ವಿ.ಬಷೀರ್ ಮಾತನಾಡಿ ವಿದ್ಯಾರ್ಥಿಗಳು ಒಂದು ಗುರಿಯನ್ನು ಇಟ್ಟುಕೊಂಡು ಆ […]

ಶ್ರೀನಿವಾಸಪುರ: ಸಾಮಾಜಿಕ ಸಮಾನತೆ ಹಾಗೂ ವ್ಯಕ್ತಿಗೌರವ ಕುವೆಂಪು ಸಾಹಿತ್ಯದ ಪ್ರಮುಖ ಅಂಶವಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಶ್ರೇಷ್ಠ ಕವಿ ಮಾತ್ರವಲ್ಲದೆ, ಪ್ರಖರ ಮಾನವತಾವಾದಿಯಾಗಿದ್ದರು ಎಂದು ಹೇಳಿದರು.ತಾಲ್ಲೂಕಿನಲ್ಲಿ ರೂ.350 ಕೋಟಿ ವೆಚ್ಚದಲ್ಲಿ ಜಲ ಜೀವನ ಮಿಷನ್ ಯೋಜನೆ ಮೂಲಕ ಪ್ರತಿ ಮನೆಗೂ ಕುಡಿಯುವ ನೀರು ಪೂರೈಸಲಾಗುವುದು. ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಕಲ್ಪಿಸುವ […]

ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಫಲಾನಭವಿಗಳ ಆಯ್ಕೆ ದಿನಾಂಕ: 29.12.2023 ರಂದು ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷರವರ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿಯಲ್ಲಿ ವಿವರವಾಗಿ ಚರ್ಚಿಸಿ ಫಲಾನುಭವಿಗಳನ್ನು ಲಾಟರಿ ಎತ್ತುವ ಮುಖಾಂತರ ನಿಗದಿತ ಗುರಿಯಂತೆ ಆಯ್ಕೆ ಮಾಡಲಾಯಿತು. 2023-2024 ನೇ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು 653 ಅರ್ಜಿಗಳು ಸ್ವೀಕೃತಗೊಂಡಿದ್ದು ಸರ್ಕಾರ ನಿಗಧಿಪಡಿಸಿದ ಅರ್ಥಿಕ ಗುರಿ ರೂ.18 ಲಕ್ಷಗಳನ್ನು ನಿಗಧಿಪಡಿಸಿದ್ದು, ಜಿಲ್ಲೆಯ […]

ಕೋಲಾರ,ಡಿ.29: ಪತ್ರಕರ್ತ ಇಂದಿನ ಕಾರ್ಫೊರೇಟ್ ವ್ಯವಸ್ಥೆಯಲ್ಲಿ ಒಂದು ಸರಕಾಗುತ್ತಿದ್ದಾನೆ. ಅದನ್ನು ತಪ್ಪಿಸಲು ಪ್ರಯತ್ನ ಮಾಡಿದರೆ ಮಾದರಿ ಪತ್ರಕರ್ತರಾಗಿ ಉಳಿಯಬಲ್ಲರು ಎಂದು ಸಾಹಿತಿ ಸ.ರಘುನಾಥ ಅಭಿಪ್ರಾಯಪಟ್ಟರು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) ಅವರ ಪ್ರಥಮ ಪುಣ್ಯ ಸ್ಮರಣೆ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಹಿಂದೆ ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವನಿ ಇತ್ತು. ಇಂದು ಆ ಅಭಿವ್ಯಕ್ತಿ […]

ಕೋಲಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಕ್ರಮಕ್ಕೆ ಸೂಚನೆ ಆಯವ್ಯಯದಲ್ಲಿ ಘೋಷಣೆಯಾದ ಯೋಜನೆಗಳಿಗೆ ಹಣದ ಕೊರತೆ ಇಲ್ಲ ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆ ಮಂಜೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕೋಲಾರ : ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್‌ಗಳ ಮೇಲುಸ್ತುವಾರಿ ಮಾಡಲು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಎ.ಪಿ.ಎಂ.ಸಿ. ಜಾಗದ ಸಮಸ್ಯೆ ಹಾಗೂ ಹಾಲು ಒಕ್ಕೂಟದ ನೇಮಕಾತಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಮತ್ತು ರೈತರ ನಿದ್ದೆಗೆಡಿಸುತ್ತಿರುವ ನಕಲಿ ಬಿತ್ತನೆ ಬೀಜ, ಕೀಟನಾಶಕ, ನಿಯಂತ್ರಣಕ್ಕೆ ಪ್ರಭಲ ಬೀಜ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಏಷ್ಯಾದಲ್ಲೇ ಅತಿ ದೊಡ್ಡ ಎರಡನೇ ಮಾರುಕಟ್ಟೆಯನ್ನು ಪ್ರಸಿದ್ದಿ ಪಡೆದಿರುವ ಎ.ಪಿ.ಎಂ.ಸಿ. ಅಭಿವೃದ್ದಿಗೆ ಅವಶ್ಯಕತೆ ಇರುವ 100 ಎಕರೆ ಜಮೀನನ್ನು 10 ವರ್ಷಗಳಿಂದ ಹುಡುಕಾಡಿದರೂ ಕಂದಾಯ ಮತ್ತು ಸರ್ವೆ ಅಧಿಕಾರಿಗಳಿಗೆ ಜಾಗ ಸಿಗುತ್ತಿಲ್ಲ. ಮತ್ತೊಂದಡೆ ಇನ್ನೇನು […]

ಕೋಲಾರ: ಭಾರತ ಸೇವಾದಳವು ಶತಮಾನೋತ್ಸವ ಕಾರ್ಯಕ್ರಮವನ್ನು ಡಿ. 28 ರಂದು ಮಾಲೂರು ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಗುತ್ತಿದ್ದು, ಆನಂತರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಚರಿಸಲು ಭಾರತ ಸೇವಾದಳ ಜಿಲ್ಲಾ ಸಮಿತಿ ತೀರ್ಮಾನಿಸಿತು. ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಅಧ್ಯಕ್ಷತೆಯಲ್ಲಿ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಮಾಲೂರು ಕಾರ್ಯಕ್ರಮದ ನಂತರ ಕೋಲಾರ ಜಿಲ್ಲಾ ಕೇಂದ್ರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸುಮಾರು 2 ಸಾವಿರ ಮಕ್ಕಳ ಸಮ್ಮುಖದಲ್ಲಿ ಭಾರತ ಸೇವಾದಳ […]