ಶ್ರೀನಿವಾಸಪುರ : ಪುರಸಭಾ ಕಚೇರಿಯ  ಸಭಾಂಗಣದಲ್ಲಿಂದು ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ,ಚಾಲನೆ ನೀಡಿದರು ಕಚೇರಿ ವ್ಯವಸ್ಥಾಪಕರಾದ ಶ್ರೀ ನವೀನ್ ಚಂದ್ರ,ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಕೆ ಜಿ. ರಮೇಶ್,ಕಂದಾಯ ನಿರೀಕ್ಷಕ ಎನ್.ಶಂಕರ್ ಸರ್ಕಾರಿ ಬಾಲಕಿಯರ  ಕಾಲೇಜಿನ ಶಿಕ್ಷಕಿ ಶ್ರೀಮತಿ ಮಂಜುಳಾ,ಸ್ವಚ್ಛ ಭಾರತ್ ರಾಯಬಾರಿ ಶ್ರೀಮತಿ ಮಾಯಾ ಬಾಲಚಂದ್ರ,,ನಂದಿನಿ ಅರ್ಜುನ್ ಸೇರಿದಂತೆ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read More

ಬರಹ : ಶಬೀನಾ. ವೈ.ಕೆ “ಈ ಮಗುವನ್ನು ದೊಂಬರಾಟ ಆಡುವವರಿಗೆ ಕೊಟ್ಟು ಬಿಡಿ” ಎಂದು ಒಬ್ಬ ಮಹಿಳೆ ಹೇಳಿ ಬಿಟ್ಟರು. ಇದರಿಂದ ಕುಪಿತರಾದ ವಿಠ್ಠಪ್ಪ “ಅವಳು ನನ್ನ ಮಗಳು. ಬದುಕಿರುವ ತನಕ ನಾನೇ ಸಾಕುತ್ತೇನೆ” ಎಂದು ಬಂದವರ ಬಾಯಿ ಮುಚ್ಚಿಸಿ ಬಿಟ್ಟರು. ಯಶೋದ ಕುಮಾರಿ ಹುಟ್ಟಿನಿಂದಲೇ ವಿಶೇಷಚೇತನರು. ಅವರ ಎಡಗಾಲು ಸಂಪೂರ್ಣ ರೂಪು ಪಡೆದಿರಲಿಲ್ಲ; ಇದ್ದ ಬಲಗಾಲಿಗೂ ಪೋಲಿಯೋ ಘಾಸಿ ನೀಡಿತ್ತು. ಹುಟ್ಟಿದ ಮಗುವನ್ನು ಜನರು ವೀಕ್ಷಿಸಲೆಂದೇ ಮೂರು ದಿನಗಳ ಕಾಲ ಹೊರಗಡೆ ತೊಟ್ಟಿಲಲ್ಲಿ ಇಟ್ಟಿದ್ದರು. ಆಗ […]

Read More

ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಾವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.ರಾಧಾ ಹಾಗೂ ಅವರ ತಂದೆ ಮುನಿಯಪ್ಪ ಕೊಲೆಯಾದವರು. ಶ್ರೀನಿವಾಸಪುರದ ಮಾಂಸದ ವ್ಯಾಪಾರಿ ನಾಗೇಶ್ ಕೊಲೆ ಆರೋಪಿ.ನಾಗೇಶ ತನ್ನ ಮೊದಲ ಪತ್ನಿ ರಾಧಾಗೆ ವಿಚ್ಛೇದನ ನೀಡಿದ್ದ, ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುತ್ತಿದ್ದ. ಎರಡನೇ ಪತ್ನಿಯೊಂದಿಗೆ ಶ್ರೀನಿವಾಸಪುರದಲ್ಲಿ ವಾಸವಾಗಿದ್ದ. ಮಂಗಳವಾರ ನಂಬಿಹಳ್ಳಿಗೆ ಬಂದ ನಾಗೇಶ, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವಿಚ್ಛೇದಿತ ಪತ್ನಿ ರಾಧಾ ಮತ್ತು ಮಾವನ […]

Read More

ಶ್ರೀನಿವಾಸಪುರ: ಮಕ್ಕಳು ಪುಟ್ಟ ಕೃಷ್ಣನನ್ನು ತಮ್ಮ ಗೆಳೆಯನೆಂದು ಬಗೆದು ಖುಷಿ ಪಡುತ್ತಾರೆ ಎಂದು ತಾಲ್ಲೂಕು ಸನ್ಮಾರ್ಗ ಬಳಗದ ಅಧ್ಯಕ್ಷ ಡಿ.ಸತ್ಯಮೂರ್ತಿ ಹೇಳಿದರು.ಪಟ್ಟಣದ ಭಾರತಿ ತೀರ್ಥರ ಸಭಾ ಭವನದಲ್ಲಿ ಶಂಕರ ಸೇವಾ ಸಮಿತಿ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಮಕ್ಕಳ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೃಷ್ಣನದು ಮಹಾ ಭಾರತದ ಮಹಾಪಾತ್ರಗಳಲ್ಲಿ ಅತ್ಯಂತ ಮಹತ್ವದ ಪಾತ್ರ ಎಂದು ಹೇಳಿದರು.ಮಹಾ ಕಾವ್ಯಗಳು ಭಾರತೀಯ ಸಂಸ್ಕೃತಿಯ ಪ್ರತೀಕ. ಸನ್ಮಾರ್ಗ ತೋರಿಸುವ ಸಾಧನ. ಆದ್ದರಿಂದ ಪ್ರತಿಯೊಬ್ಬರೂ […]

Read More

ಎಲ್‌ಐಸಿ ಪಾಲಿಸಿ ಮಾಡಿಸುವಲ್ಲಿ ಉತ್ತಮ ಸಾಧನೆ ಮಾಡಿರುವ ಶ್ರೀನಿವಾಸಪುರದ ಪ್ರತಿನಿಧಿ ಎಸ್.ಲಕ್ಷಮಣ ಅವರಿಗೆ ಸೋಮವಾರ, ಜಿಲ್ಲಾ ಎಲ್‌ಐಸಿ ಶಾಖಾ ವ್ಯವಸ್ಥಾಪಕ ಎನ್.ಆರ್.ಸಿದ್ದೇಶ್ ಪಾರಿತೋಷಕ ನೀಡಿ ಗೌರವಿಸಿದರು. ಶ್ರೀಕಾಂತ್ ಇದ್ದರು.

Read More

ಶ್ರೀನಿವಾಸಪುರ ; ಶ್ರೀನಿವಾಸಪುರದ ಪೊಲೀಸ್ ಠಾಣೆಯಲ್ಲಿ ಭಾನುವಾರ ಕರ್ನಾಟಕ ಪ್ರಾಂತ್ಯ ರೈತ ಸಂಘದ ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರನ್ನು ಭೇಟಿಯಾಗಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಮನವಿ ಮಾಡಿದರು.

Read More

ಶ್ರೀನಿವಾಸಪುರ: ಸಾಮಾಜಿಕ ನ್ಯಾಯ ಪಡೆಯಲು ಅಕ್ಷರ ಜ್ಞಾನ ಅಗತ್ಯ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಾಕ್ಷರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಗಿ ಹೆಣ್ಣು ಮಕ್ಕಳು ಅಕ್ಷರ ಕಲಿಯಲೇ ಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಅರ್ಥಪೂರ್ಣವಾದುದು ಎಂದು ಹೇಳಿದರು.ಅನಕ್ಷರತೆ ನಿವಾರಣೆಯಲ್ಲಿ ಶಾಲಾ ಶಿಕ್ಷಣ ಪ್ರಮುಖ ಪಾತ್ರ ವಹಿಸಿದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು […]

Read More

ಶೀನಿವಾಸಪುರ: ಸಮಾಜದ ಎಲ್ಲ ವರ್ಗದ ಜನ ಪರಿಸರ ಮಾಲಿನ್ಯ ತಡೆಯಲು ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಚ್ಛ ಭಾರತ್ ಮಿಷನ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು, ಶಾಲಾ ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಅಭಿಯಾನ ಕಾರ್ಯಕ್ರಮ ಜಾರಿಗೊಳಿಸಬೇಕು ಎಂದು ಹೇಳಿದರು.ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್ ಮಾತನಾಡಿ, ನಾಗರಿಕರು ವಸ್ತುಗಳ ಬಳಕೆ ಕಡಿಮೆ ಮಾಡಬೇಕು. ಸಾಧ್ಯವಾದಷ್ಟು […]

Read More

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ಕೃಷ್ಣನ್ ತಿಳಿಸಿದ್ದಾರೆ.ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾಸ್ಕಾರ್ಡ್ ಬ್ಯಾಂಕ್‍ನ ರಾಜ್ಯ ನಿರ್ದೇಶಕ ಯಲವಾರ ಸೊಣ್ಣೇಗೌಡ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More
1 75 76 77 78 79 323