
ಶ್ರೀನಿವಾಸಪುರ: ಕೊಲೆಯಾದ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಅವರ ಪಾಥೀವ ಶರೀರದ ಮೆರವಣಿಗೆ ಏರ್ಪಡಿಸಲಾಗಿತ್ತು. ಮೆರವಣಿಗೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮೃತ ಶ್ರೀನಿವಾಸ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದ್ದ ವಾಹನ, ಎಂಜಿ ರಸ್ತೆ ಹಾಗೂ ಮುಳಬಾಗಿಲು ರಸ್ತೆ ಮೂಲಕ ಮೃತರ ತೋಟಕ್ಕೆ ಸಾಗಿತು. ರಸ್ತೆ ಪಕ್ಕದ ಮೃತರ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.ಎಂ.ಶ್ರೀನಿವಾಸನ್ ಅವರ ಪತ್ನಿ ಡಾ. ಚಂದ್ರಕಳಾ, ಪುತ್ರ […]

ಶ್ರೀನಿವಾಸಪುರ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳ ಜೊತೆಗ ದಾನಿಗಳು ನೀಡುವ ಶೈಕ್ಷಣಿಕ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಸಾಧಿಸಬೇಕು ಎಂದು ಚಿಕ್ಕಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಎಸ್.ಮುನಿರಾಜು ಹೇಳಿದರು.ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಥ್ಯಾಂಕ್ಸ್ ಟು ಧಮೇರ್ಶ್ ಕಾರ್ಯಕ್ರಮದಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ದಾನಿ ಧರ್ಮೇಶ್ ನೀಡಿದ ಲೇಖನ ಸಾಮಗ್ರಿ, ಕುಡಿಯುವ ನೀರಿನ ಬಾಟೆಲ್ ಮತ್ತಿತರ ವಸ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಆರ್.ಧರ್ಮೇಶ್ ತಮ್ಮ […]

ಶ್ರೀನಿವಾಸಪುರ: ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ರೂ.350 ಕೋಟಿ ವೆಚ್ಚದಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ರೋಣೂರು ಹಾಗೂ ಕೊಳತೂರು ಗ್ರಾಮದಲ್ಲಿ ಶನಿವಾರ ಜಲ್ ಜೀವನ್ ಮಿಷನ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರೋಣೂರಿಗೆ ರೂ. 5.50 ಕೋಟಿ ಹಾಗೂ ಕೊಳತೂರಿಗೆ ರೂ.1 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಪೂರೈಸಲಾಗುವುದು. ಮೂರು ತಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.ಗ್ರಾಮ ಹಾಗೂ ಪಟ್ಟಣ ಪ್ರದೇಶದ […]

ಶ್ರೀನಿವಾಸಪುರ: ರೇಷ್ಮೆ ಕೃಷಿಯಲ್ಲಿ ರೈತರು ವೈಜ್ಞಾನಿಕ ಪದ್ಧತಿ ಅನುಸರಿಸಬೇಕು. ಅಧಿಕ ಬೇಡಿಕೆ ತಳಿ ಬೆಳೆಯಲು ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ರೇಷ್ಮೆ ಇಲಾಖೆ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೇಷ್ಮೆ ಇಲಾಖೆ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ರೂ.60 ಲಕ್ಷ ವೆಚ್ಚದಲ್ಲಿ ತಾಲ್ಲೂಕು ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ತಾಂತ್ರಿಕ ಸೇವಾ ಕೇಂದ್ರ, ರೇಷ್ಮೆ ಗೂಡು ಮಾರುಕಟ್ಟೆ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು.ರೇಷ್ಮೆ ಗೂಡು ಬೆಲೆಯಲ್ಲಿ ಏರುಪೇರು […]

ಕ್ಷೇತ್ರಕ್ಕೆ ಸಂಬಂಧಿಸಿದಂತೆ (ಜೆಜೆಎಂ)ಜಲ ಜೀವನ್ ಯೋಜನೆಗೆ ಇದುವರೆಗೂ 350 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಯೋಜನೆಯು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ಇಂಜನೀಯರ್‍ರವರಿಗೆ ಸೂಚನೆ ನೀಡಿದ್ದೇನೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ಕೊಳತೂರು ಗ್ರಾ.ಪಂ. ವ್ಯಾಪ್ತಿಯ ವೆಂಕಟೇಶ ನಗರ ಗ್ರಾಮದಲ್ಲಿ ಶನಿವಾರ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.ಕೊಳತೂರು ಗ್ರಾಮಪಂಚಾಯಿತಿಗೆ ಸಂಬಂದಿಸಿದಂತೆ ಅಂದಾಜು ಒಟ್ಟು 6.5 ಕೋಟಿ ವೆಚ್ಚದಲ್ಲಿನ ಜಲಜೀವನ್ ಮಿಷನ್ ಕಾಮಗಾರಿ ಹಮ್ಮಿಕೊಂಡಿದ್ದು , ಕೊಳತೂರು ಗ್ರಾಮಕ್ಕೆ 1 ಕೋಟಿ […]

ಕೋಲಾರ, ಅ-21, ಬರದ ನಡುವೆ ಪಶು ಆಹಾರ ಏರಿಕೆ ಮಾಡಿ ರೈತರ ಹಣದಲ್ಲಿ ವಿದೇಶಿ ಯುರೋಪ್ ಪ್ರವಾಸ ಹೊರಟಿರುವ ಒಕ್ಕೂಟದ ವ್ಯವಸ್ಥಾಪಕರು ಹಾಗೂ ನಿರ್ದೇಶಕರುಗಳ ವಿರುದ್ಧ ರೈತ ಸಂಘದಿಂದ ಗಾಂಧಿ ಪ್ರತಿಮೆ ಮುಂದೆ ಸಗಣಿ ಸಮೇತ ಹೋರಾಟ ಮಾಡಿ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳವಂತೆ ತಹಶೀಲ್ದಾರ್ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯದಲ್ಲಿ ತೀವ್ರವಾದ ಬರಗಾಲ ಆವರಿಸಿ ಭೂಮಿಗೆ ಹಾಕಿರುವ ಭಿತ್ತನೆ ಬೀಜ ಮೊಳಕೆ ಒಡೆಯದೆ ಭೂಮಿಯಲ್ಲಿಯೇ ಒಣಗಿರುವ ಜೊತೆಗೆ ಬೆಳೆದ […]

ಶ್ರೀನಿವಾಸಪುರ 2 : ರಾಷ್ಟೀಯ ಹಬ್ಬಗಳನ್ನ ಎಲ್ಲಾ ಇಲಾಖಾಧಿಕಾರಿಗಳು ಅದ್ದೂರಿಯಾಗಿ ನಡೆಸುವಂತೆ ತಹಶೀಲ್ದಾರ್ ಶರೀನ್‍ತಾಜ್ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಸಮಿತಿವತಿಯಿಂದ ವಾಲ್ಮೀಕಿ ಜಯಂತಿ, ಕನ್ನಡ ರಾಜ್ಯೋತ್ಸವ, ಕನಕ ಜಯಂತಿ, ಒನಿಕೆ ಓಬವ್ವ ಜಯಂತಿ, ಕಿತ್ತೂರುರಾಣಿ ಚನ್ನಮ್ಮ ಜಯಂತಿ ಅಂಗವಾಗಿ ನಡೆದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದರು.ವಾಲ್ಮೀಕಿ ಜಯಂತಿ ಅಂಗವಾಗಿ ಎಲ್ಲಾ ಗ್ರಾಮಪಂಚಾಯಿತಿಗಳಿಂದಲೂ ಸ್ತಬ್ದ ಚಿತ್ರಗಳನ್ನು ಮೆರವಣಿಗೆ ಮೂಲಕ ತಾಲೂಕು ಕೇಂದ್ರಕ್ಕೆ ತರುವಂತೆ ಸೂಚಿಸಲಾಯಿತು.ಎಲ್ಲಾ ಇಲಾಖೆಗಳ ಕಛೇರಿಯ ಕಟ್ಟಡಗಳಿಗೆ ವಿದ್ಯುತ್‍ದೀಪಾ ಅಲಂಕಾರಗಳನ್ನು ಮಾಡಿ, […]

ಶ್ರೀನಿವಾಸಪುರ: ತಾಲ್ಲೂಕಿನ ಪಾತಪಲ್ಲಿ ಗ್ರಾಮದ ಸಮೀಪ ಇಂದು ಬೆಳಿಗ್ಗೆ 4 ಗಂಟೆಗೆ ಜೆಸಿಬಿ ಯಂತ್ರಗಳೊಂದಿಗೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅರಣ್ಯ ಪ್ರದೇಶದಲ್ಲಿ ಬೆಳೆಯಲಾಗಿದ್ದ ಮಾವಿನ ಮರಗಳನ್ನು ಉರುಳಿಸಿ ತೆರವುಗೊಳಿಸಿದರು.ತಾಲ್ಲೂಕಿನ ಪಾತಪಲ್ಲಿ, ಶೆಟ್ಟಿಹಳ್ಳಿ ಹಾಗೂ ಚೌಡನಹಳ್ಳಿ ಸುತ್ತಮುತ್ತ ನೂರು ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಲಾಯಿತು. ಉಪ ಅರಣ್ಯ ವ¯ಯಾಧಿಕಾರಿ ಕೆ.ಮಹೇಶ್, ಉಪ ಅರಣ್ಯಾಧಿಕಾರಿಗಳಾದ ಶ್ರೀನಾಥ್, ಶ್ರೀನಾಥ್, ಅನಿಲ್ ಕುಮಾರ್, ನವೀನ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳಕ್ಕೆ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಬಿಜೆಪಿ […]

ಕೋಲಾರ 19 ಅಕ್ಟೋಬರ್: ಕರ್ನಾಟಕ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿಗೆ ನೌಕರರ ಭವನ ನಿರ್ಮಿಸುವಂತೆ ಮತ್ತು ಅನಾರೋಗ್ಯದ ವ್ಯೆದ್ಯಕೀಯ ವೆಚ್ಚದ ಬಿಲ್ಲುಗಳನ್ನು ಮರುಪಾವತಿ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೆ ಕೋಲಾರ ಜಿಲ್ಲಾಧಿಕಾರಿಗಳ ಮುಖಾಂತರ ನಿವೃತ್ತ ಎ.ಎಸ್.ಐ.ಗಳಾದ ಗೌರಿಪೇಟೆ ಕೆ.ಎನ್.ರವೀಂದ್ರನಾಥ್ ಮತ್ತು ಬೆಗ್ಲಿಹೊಸಹಳ್ಳಿ ಮುನಿಕೃಷ್ಣಯ್ಯ ರವರು ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವಂತಹ ಪೊಲೀಸ್ ಪೇದೆಗಳು, ಮುಖ್ಯಪೇದೆಗಳು, ಎ. ಎಸ್. ಐ, ಮತ್ತು ಪಿ. ಎಸ್. ಐ ಸಿಬ್ಬಂದಿ ವರ್ಗದವರುಗಳು […]