ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಾವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.ರಾಧಾ ಹಾಗೂ ಅವರ ತಂದೆ ಮುನಿಯಪ್ಪ ಕೊಲೆಯಾದವರು. ಶ್ರೀನಿವಾಸಪುರದ ಮಾಂಸದ ವ್ಯಾಪಾರಿ ನಾಗೇಶ್ ಕೊಲೆ ಆರೋಪಿ.ನಾಗೇಶ ತನ್ನ ಮೊದಲ ಪತ್ನಿ ರಾಧಾಗೆ ವಿಚ್ಛೇದನ ನೀಡಿದ್ದ, ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುತ್ತಿದ್ದ. ಎರಡನೇ ಪತ್ನಿಯೊಂದಿಗೆ ಶ್ರೀನಿವಾಸಪುರದಲ್ಲಿ ವಾಸವಾಗಿದ್ದ. ಮಂಗಳವಾರ ನಂಬಿಹಳ್ಳಿಗೆ ಬಂದ ನಾಗೇಶ, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವಿಚ್ಛೇದಿತ ಪತ್ನಿ ರಾಧಾ ಮತ್ತು ಮಾವನ […]

Read More

ಶ್ರೀನಿವಾಸಪುರ: ಮಕ್ಕಳು ಪುಟ್ಟ ಕೃಷ್ಣನನ್ನು ತಮ್ಮ ಗೆಳೆಯನೆಂದು ಬಗೆದು ಖುಷಿ ಪಡುತ್ತಾರೆ ಎಂದು ತಾಲ್ಲೂಕು ಸನ್ಮಾರ್ಗ ಬಳಗದ ಅಧ್ಯಕ್ಷ ಡಿ.ಸತ್ಯಮೂರ್ತಿ ಹೇಳಿದರು.ಪಟ್ಟಣದ ಭಾರತಿ ತೀರ್ಥರ ಸಭಾ ಭವನದಲ್ಲಿ ಶಂಕರ ಸೇವಾ ಸಮಿತಿ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಮಕ್ಕಳ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೃಷ್ಣನದು ಮಹಾ ಭಾರತದ ಮಹಾಪಾತ್ರಗಳಲ್ಲಿ ಅತ್ಯಂತ ಮಹತ್ವದ ಪಾತ್ರ ಎಂದು ಹೇಳಿದರು.ಮಹಾ ಕಾವ್ಯಗಳು ಭಾರತೀಯ ಸಂಸ್ಕೃತಿಯ ಪ್ರತೀಕ. ಸನ್ಮಾರ್ಗ ತೋರಿಸುವ ಸಾಧನ. ಆದ್ದರಿಂದ ಪ್ರತಿಯೊಬ್ಬರೂ […]

Read More

ಎಲ್‌ಐಸಿ ಪಾಲಿಸಿ ಮಾಡಿಸುವಲ್ಲಿ ಉತ್ತಮ ಸಾಧನೆ ಮಾಡಿರುವ ಶ್ರೀನಿವಾಸಪುರದ ಪ್ರತಿನಿಧಿ ಎಸ್.ಲಕ್ಷಮಣ ಅವರಿಗೆ ಸೋಮವಾರ, ಜಿಲ್ಲಾ ಎಲ್‌ಐಸಿ ಶಾಖಾ ವ್ಯವಸ್ಥಾಪಕ ಎನ್.ಆರ್.ಸಿದ್ದೇಶ್ ಪಾರಿತೋಷಕ ನೀಡಿ ಗೌರವಿಸಿದರು. ಶ್ರೀಕಾಂತ್ ಇದ್ದರು.

Read More

ಶ್ರೀನಿವಾಸಪುರ ; ಶ್ರೀನಿವಾಸಪುರದ ಪೊಲೀಸ್ ಠಾಣೆಯಲ್ಲಿ ಭಾನುವಾರ ಕರ್ನಾಟಕ ಪ್ರಾಂತ್ಯ ರೈತ ಸಂಘದ ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರನ್ನು ಭೇಟಿಯಾಗಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಮನವಿ ಮಾಡಿದರು.

Read More

ಶ್ರೀನಿವಾಸಪುರ: ಸಾಮಾಜಿಕ ನ್ಯಾಯ ಪಡೆಯಲು ಅಕ್ಷರ ಜ್ಞಾನ ಅಗತ್ಯ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಾಕ್ಷರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಗಿ ಹೆಣ್ಣು ಮಕ್ಕಳು ಅಕ್ಷರ ಕಲಿಯಲೇ ಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಅರ್ಥಪೂರ್ಣವಾದುದು ಎಂದು ಹೇಳಿದರು.ಅನಕ್ಷರತೆ ನಿವಾರಣೆಯಲ್ಲಿ ಶಾಲಾ ಶಿಕ್ಷಣ ಪ್ರಮುಖ ಪಾತ್ರ ವಹಿಸಿದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು […]

Read More

ಶೀನಿವಾಸಪುರ: ಸಮಾಜದ ಎಲ್ಲ ವರ್ಗದ ಜನ ಪರಿಸರ ಮಾಲಿನ್ಯ ತಡೆಯಲು ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಚ್ಛ ಭಾರತ್ ಮಿಷನ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು, ಶಾಲಾ ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಅಭಿಯಾನ ಕಾರ್ಯಕ್ರಮ ಜಾರಿಗೊಳಿಸಬೇಕು ಎಂದು ಹೇಳಿದರು.ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್ ಮಾತನಾಡಿ, ನಾಗರಿಕರು ವಸ್ತುಗಳ ಬಳಕೆ ಕಡಿಮೆ ಮಾಡಬೇಕು. ಸಾಧ್ಯವಾದಷ್ಟು […]

Read More

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ಕೃಷ್ಣನ್ ತಿಳಿಸಿದ್ದಾರೆ.ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾಸ್ಕಾರ್ಡ್ ಬ್ಯಾಂಕ್‍ನ ರಾಜ್ಯ ನಿರ್ದೇಶಕ ಯಲವಾರ ಸೊಣ್ಣೇಗೌಡ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More

ಶ್ರೀನಿವಾಸಪುರ: ಶಿಕ್ಷಕ ಸಮುದಾಯ ಪ್ರತಿಭಾವಂತ ಮಕ್ಕಳನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು ಎಂದು ಯರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.ತಾಲ್ಲೂಕಿನ ಬೂರಮಾಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದವರು, ಮಕ್ಕಳಲ್ಲಿನ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.ಸೌಲಭ್ಯ ಹಾಘೂ ಅವಕಾಶಗಳ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹಿಂದುಳಿದಿದ್ದಾರೆ. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂಬುದನ್ನು ಮರೆಯಲಾಗದು. […]

Read More

ಶ್ರೀನಿವಾಸಪುರ 1 : ಪರಿಸರ ಪ್ರಜ್ಞೆಯ ಜೀವನಶೈಲಿಯನ್ನು ಉತ್ತೇಜಿಸಿ , ಹವಾಮಾನ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲು ವ್ಯಕ್ತಿಗಳನ್ನು ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ ಹೇಳಿದರು.ಪಟ್ಟಣದ ಪುರಸಭೆ ಕಛೇರಿಯಲ್ಲಿ ಗುರುವಾರ ಕಛೇರಿ ಸಭಾಂಗಣದಲ್ಲಿ ತ್ರೈಮಾಸಿಕ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಮನೆಗಳಲ್ಲಿ , ಕಛೇರಿಗಳಲ್ಲಿ ಹಸಿಗೊಬ್ಬರ, ಒಣಗೊಬ್ಬರಗಳನ್ನು ಬೇರ್ಪಡಿಸುವ ವಿಧಾನಗಳ ಬಗ್ಗೆ ವಿವರಿಸಿದರು. ಸ್ವಚ್ಚ ಭಾರತ್ ಮಿಷನ್ ಅಭಿಯಾನದ ಅಡಿಯಲ್ಲಿ ಆರ್‍ಆರ್‍ಆರ್ ಕಾರ್ಯಕ್ರಮವನ್ನು ಎಲ್ಲಾ ಸರ್ಕಾರಿ ಕಛೇರಿಗಳು, ಸಂಸ್ಥೆಗಳು, ನಿಗಮ ಮಂಡಳಿಗಳು, ಶಾಲಾ ಕಾಲೇಜುಗಳಲ್ಲಿ […]

Read More
1 91 92 93 94 95 339