
ಶ್ರೀನಿವಾಸಪುರ: ಭಾರತೀಯ ಜೀವ ವಿಮಾ ನಿಗಮ ಆರ್ಥಿಕ ಚಟುವಟಿಕೆ ಮೂಲಕ ಸಮಾಜ ಸೇವೆ ಮಾಡುವ ಸಂಸ್ಥೆಯಾಗಿದೆ. ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ ನಿಗಮದ ಮುಖ್ಯಗುರಿಯಾಗಿದೆ ಎಂದು ಎಲ್ಐಸಿ ಉಪ ಶಾಖಾ ವ್ಯವಸ್ಥಾಪಕ ಎಚ್.ವಿ.ಪ್ರಸಾದ್ ಹೇಳಿದರು.ಪಟ್ಟಣದ ಎಲ್ಐಸಿ ಶಾಖಾ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ 67ನೇ ಎಲ್ಐಸಿ ಸಪ್ತಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆ ವ್ಯಕ್ತಿಗು ಎಲ್ಐಸಿ ಸೌಲಭ್ಯ ಒದಗಿಸಬೇಕು. ಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಸುತ್ತಾಡಿ, ಜನರ ಆರ್ಥಿಕ ಸ್ಥಿತಿಗೆ ಅನುಗುಣವಾದ ಪಾಲಿಸಿ ಮಾಡಿಸಬೇಕು ಎಂದು […]

ಕುಂದಾಪುರದ ಸಂತ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಪ್ರಥಮ ಪಿ ಯು ವಿದ್ಯಾರ್ಥಿಗಳ ರಕ್ಷಕ ಶಿಕ್ಷಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಸಂತ ಮೇರಿಸ್ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿರುವ ಅತಿ .ವಂ.ಫಾದರ್ ಸ್ಟ್ಯಾನಿ ತಾವ್ರೋರವರು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಪಿ ಯು ಹಂತದಲ್ಲಿ ಚೆನ್ನಾಗಿ ಅಭ್ಯಾಸ ಮಾಡುವದರೊಂದಿಗೆ ಉಲ್ಲಾಸದಿಂದಿರಬೇಕು. ಅಪ್ಪ ಅಮ್ಮ ಗುರು ಹಿರಿಯರನ್ನು ಗೌರವಿಸಬೇಕು.ಎನ್ನುತ್ತಾ ಸಂಸ್ಥೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳಾದ ವಿನಾರ್ಡ್ ಡಿಕೊಸ್ತಾ ಹಾಗೂ ನವೀನ್ ಕುಮಾರ […]

ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೆ.2 ರಂದು ಬೆಳಿಗ್ಗೆ 10 ಗಂಟೆಗೆ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಏರ್ಪಡಿಸಲಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲರೆಡ್ಡಿ ತಿಳಿಸಿದರು.ಪಟ್ಟಣದ ಭೈರವೇಶ್ವರ ವಿದ್ಯಾ ನಿಕೇತನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಂಪೇಗೌಡರ ಜಯಂತ್ಯುತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಮುಳಬಾಗಿಲು ವೃತ್ತದಿಂದ ಮೆರವಣಿಗೆ ಹಾಗೂ ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಬಾಲಕಿಯರ […]

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು 2023-24ನೇ ಸಾಲಿನ ತಾಲೂಕು ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ ಸಭೆಯಲ್ಲಿ ಪರಿಷ್ಕರಿಸಲಾಗಿದೆ. ಪರಿಷ್ಕರಿಸಿದ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಗಳ ಕರಡು ಪ್ರತಿಯನ್ನು ಸಾರ್ವಜನಿಕ ಸಲಹೆ ಸೂಚನೆ ಮತ್ತು ಆಕ್ಷೇಪಣೆಗಳಿಗಾಗಿ ಶ್ರೀನಿವಾಸಪುರ ಉಪ ನೊಂದಣಿ ಕಚೇರಿಯಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಸಲಹೆ ಸೂಚನೆ ಆಕ್ಷೇಪಣೆ ಇದ್ದರೆ ಸೆಪ್ಟೆಂಬರ್ 14ರ ಒಳಗೆ ಶ್ರೀನಿವಾಸಪುರ ಉಪ ನೊಂದಣಾ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ, ಆಸ್ತಿ ಮೌಲ್ಯ ಮಾಪನ ಸಮಿತಿಗೆ […]

ಶ್ರೀನಿವಾಸಪುರ 2 : ಪಟ್ಟಣದ ಬೆಸ್ಕಾಂ ಇಲಾಖೆ ಮುಂಭಾಗ ಬುಧವಾರ ಕರ್ನಾಟಕ ರಾಜ್ಯ ಹಸಿರು ಸೇನೆ ಸಂಘದವತಿಯಿಂದ ವಿದ್ಯುತ್ನಲ್ಲಿ ಅಡಚಣೆ ಸರಿಪಡಿಸುವಂತೆ ಕಛೇರಿ ಬಳಿ ಪ್ರತಿಭಟನೆ ನಡೆಸಿ ಎಇಇ ಅಧಿಕಾರಿ ರಾಮತೀರ್ಥರವರಿಗೆ ಮನವಿ ಪತ್ರನೀಡಿದರು.ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಮಾತನಾಡಿ ಸರ್ಕಾರ ರೈತರ ಪಂಪುಸೆಟ್ಗಳಿಗೆ ಏಳು ತಾಸು ವಿದ್ಯುತ್ ನೀಡುತ್ತವೆಂದು ಹೇಳಿದ್ದರು ಸಹ ಈಗ ಮೂರು ತಾಸು ಸಹ ವಿದ್ಯುತ್ ನೀಡುತ್ತಿಲ್ಲ ಇದರಿಂದ ತೋಟಗಾರಿಕೆ ಬೆಳೆಗಳಿಗೆ ತೊಂದರೆಯಾಗಿದ್ದು ಬೆಳೆಗಳು ಒಣಗುತ್ತಿವೆ.ಲೋಡ್ ಶೆಡ್ಡಿಂಗ್ ನೆಪದಲ್ಲಿ ಸಾಯಂಕಾಲ […]

ಶ್ರೀನಿವಾಸಪುರ: ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು. ಯೋಜನೆ ಲಾಭ ಪಡೆಯಲು ತಪ್ಪದೆ ಅರ್ಜಿ ಸಲ್ಲಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ಏರ್ಪಡಿಸಿದ್ದ ಗೃಹ ಲಕ್ಷ್ಮಿ ಯೋಜನೆ ಜಾರಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಯೋಜನೆಯಿಂದ ಬಡ ಕುಟುಂಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ನೆರವು ದೊರೆತಂತಾಗಿದೆ ಎಂದು ಹೇಳಿದರು.ಕ್ಷೇತ್ರದಲ್ಲಿ ಸೂರಿಲ್ಲದೆ ಪರಿತಪಿಸುತ್ತಿರುವ ಎಲ್ಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಪಟ್ಟಣದ ಸರ್ವತೋಮುಖ […]

ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಕಚೇರಿಗೆ ಮಂಗಳವಾರ ಲೋಕಾಯುಕ್ತ ಡಿವೈಎಸ್ಪಿ ಸೂರ್ಯನಾರಾಯಣ ರಾವ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.ಎರಡನೇ ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿಗಾಗಿ ಅರ್ಜಿ ಸಲ್ಲಿಸಿದ ಹಳೆ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ, ಶಾಲಾ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಯಿತು ಎಂದು ಲೋಕಾಯುಕ್ತ ಡಿವೈಎಸ್ಪಿ ಸೂರ್ಯನಾರಾಯಣ ರಾವ್ ತಿಳಿಸಿದರು.ವಿಷಯಕ್ಕೆ ಸಂಬಂಧಿಸಿದಂತೆ ಶುಲ್ಕ ವಿವರ ಮತ್ತು ಎರಡನೆ ಸಲ ವರ್ಗಾವಣೆ […]

ಕೋಲಾರ:- ಕರ್ನಾಟಕ ಗಾಂಧಿ ಹೆಸರಿನಿಂದ ಖ್ಯಾತಿ ಪಡೆದಿರುವ ನಾ.ಸು.ಹರ್ಡೀಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಶಿಸ್ತು, ಧೈರ್ಯ ಹಾಗೂ ತ್ಯಾಗ ಮನೋಭಾವನೆಯನ್ನು ಹಿಂದೂಸ್ತಾನಿ ಸೇವಾದಳದ ಮೂಲಕ ಪರಿಚಯಿಸಿ ಸ್ವಾತಂತ್ರ್ಯ ಸಂಗ್ರಾಮವನ್ನು ಚುರುಕುಗೊಳಿಸಿದ ಮಹನೀಯರಲ್ಲಿ ಪ್ರಮುಖರೆಂದು ಜಿಲ್ಲಾ ಭಾರತ ಸೇವಾದಳ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಾ.ಸು.ಹರ್ಡೀಕರ್ ಅವರ 48 ನೇ ಪುಣ್ಯ ಸ್ಮರಣೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.ಬಾಲ್ಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡರೂ, ಸ್ವಾತಂತ್ರ್ಯ ಸಂಗ್ರಾಮದತ್ತ ಆಕರ್ಷಿತರಾದರು, ಬಾಲಗಂಗಾಧರ ತಿಲಕ್ರ ಕೇಸರಿ ಪತ್ರಿಕೆಯ ಲೇಖನಗಳನ್ನು ಕನ್ನಡದಲ್ಲಿ […]

ಕೋಲಾರ:- ನಗರದ ದೇವರಾಜ ಅರಸು ಶುಶ್ರೂಷ ವಿದ್ಯಾಲಯದ ವಾರ್ಷಿಕಕ್ರೀಡಾ ಕೂಟವನ್ನು ಶನಿವಾರ ಶ್ರೀ ದೇವರಾಜು ಅರಸು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.ದೇವರಾಜಅರಸು ವಿಶ್ವವಿದ್ಯಾಲಯ ಸಲಹೆಗಾರರಾದ ಹನುಮಂತರಾವ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಪ್ರತಿಯೊಬ್ಬರೂ ಕ್ರೀಡಾ ಸ್ಪೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು, ಸೋಲು ಗೆಲುವನ್ನು ಸಮಚಿತ್ತದಿಂದ ಸ್ಪೀಕರಿಸಿ,ದೈಹಿಕವಾಗಿ ಆರೋಗ್ಯವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು.ಅರಸು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾಕರ್ ಮಾತನಾಡಿ, ಕ್ರೀಡೆಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾಗಿದ್ದು ಅದು ನಮ್ಮನ್ನು ಮಾನಸಿಕವಾಗಿ ಮತ್ತುದೈಹಿಕವಾಗಿಸದೃಡವಾಗಿರಿಸುತ್ತದೆ.ಕ್ರೀಡೆಯು ಅಕ ರಕ್ತದೊತ್ತಡ ಮತ್ತು ಮಧÀುಮೇಹದಂತಹ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ತಪ್ಪಿಸುತ್ತದೆ ಹಾಗು […]