JANANUDI.COM NETWORK ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅಂಗಿಕರಿಸಿದೆ.ïಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ.18 ವರ್ಷದಲ್ಲಿಯೇ ಹೆಣ್ಣಿಗೆ ಮದುವೆ ಮಾಡುವುದರಿಂದ ಆಕೆ ತಾಯ್ತನದಲ್ಲಿ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾಳೆ. ಈಗಾಗಲೇ ಭಾರತದಲ್ಲಿ ತಾಯಂದಿರ ಮರಣದ ಪ್ರಮಾಣ ಹೆಚ್ಚಳವಾಗಿದ್ದು. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದಲ್ಲದೇ ತಜ್ಞರು ನೀಡಿರುವ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು […]
JANANUDI.COM NETWORK ಕುಂದಾಪುರ:ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಟಾರ್ಪೆಡೊಸ್ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್ಷಿಪ್ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಗೆದ್ದುಕೊಂಡರೆ, ಕರ್ನಾಟಕ ವಿವಿಧ ವಿಭಾಗಗಳಲ್ಲಿ ಮೇಲುಗೈ ಸಾಧಿಸಿ ಸಮಗ್ರ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.ಕುಂದಾಪುರದ ಹರಿಪ್ರಸಾದ್ ಹೊಟೇಲಿನ ಆತಿಥ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಚಾಂಪಿಯನ್ಷಿಪ್ನಲ್ಲಿ ತಮಿಳುನಾಡಿನ ಚಾಂಪಿಯನ್ ಆಟಗಾರ, ಎಲೋ ರೇಟಿಂಗ್ನಲ್ಲಿನ 2177 ಅಂಕಗಳನ್ನು ಹೊಂದಿರುವ ಮುತ್ತಯ್ಯ ಒಂಬತ್ತು […]
JANANUDI.COM NETWORK ಕೇರಳದ ಆಲಪ್ಪುಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆಯಾದ ಪರಿಣಾಮ ಕೋಳಿ ಹಾಗೂ ಬಾತುಕೋಳಿಗಳನ್ನು ನಾಶಪಡಿಸಲು ತಂಡ ರಚಿಸಲಾಗಿದೆ. ರೈತರೊಬ್ಬರು ಸಾಕಿದ ಸಾವಿರಾರು ಬಾತುಕೋಳಿಗಳು ಸಾವನ್ನಪ್ಪಿದ ಬಳಿಕ ಹಕ್ಕಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ.ಬಾತುಕೋಳಿಗಳು ಸಾವಿರಾರು ಸಂಖ್ಯೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭೂಪಾಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ ಗೆ ಮಾದರಿಗಳನ್ನು ಕಳುಹಿಸಿದಾಗ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಪಶುಸಂಗೋಪನೆ ಇಲಾಖೆ ತಕ್ಷಣವೇ ಈ ಕ್ರಮಕೈಗೊಂಡಿದ್ದು, ಬಾತುಕೋಳಿ, […]
JANNANUDI.COM NETWORK 40 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ಗಳನ್ನು ನೀಡುವಂತೆ SARS-Cov- ಜೀನೋಮಿಕ್ಸ್ ಸೀಕ್ವೆನ್ಸಿಂಗ್ ಕನ್ಸೋರ್ಟಿಯಂ (ಇನ್ಸಾಕಾಗ್)ನ ವಿಜ್ಞಾನಿಗಳ ತಂಡವು ಶಿಫಾರಸು ಮಾಡಿದೆ.ಆರೋಗ್ಯ, ನೈರ್ಮಲ್ಯ ಮತ್ತು ಪೆÇಲೀಸ್ ವಲಯಗಳಲ್ಲಿ ವ್ಯಕ್ತಿಗಳಿಗೆ ಮೊದಲ ಬೂಸ್ಟರ್ ಡೋಸ್ ನೀಡುವ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದೆ. ಇನ್ನೂ ಲಸಿಕೆ ಹಾಕದ ಎಲ್ಲರಿಗೂ ತ್ವರಿತವಾಗಿ ಲಸಿಕೆಯನ್ನು ನೀಡಬೇಕು ಎಂದು ತನ್ನ ವಾರಾಂತ್ಯದ ವರದಿಯಲ್ಲಿ ಹೇಳಿದೆ.ಲೋಕಸಭೆಯ ಸಂಸದರು ಬೂಸ್ಟರ್ ಡೋಸ್ಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಇನ್ಸಾಕಾಗ್ ಈ ಶಿಫಾರಸುಗಳನ್ನು ಮಾಡಿದೆ. ಕೊರೋನಾ ರೂಪಾಂತರದ ಪ್ರಕರಣಗಳು […]
JANANUDI.COM NETWORK ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಓಮಿಕ್ರಾನ್ ವೈರಸ್ ವಿಶ್ವದಾದ್ಯಂತ ಮತ್ತೆ ಭೀತಿಯನ್ನು ಸೃಷ್ಟಿಸಿದೆ. ಈ ರೂಪಾಂತರವನ್ನು ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಅದರಂತೆ ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿದೆ.ಹಾಂಕಾಂಗ್ ಮತ್ತು ಬೆಲ್ಜಿಯಂನಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದವರ ಬಗ್ಗೆ ಭಾರತದಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಹೊಸ ತಳಿಯ […]
JANANUDI.COM NETWORK ನವದೆಹಲಿ: ಭಾರೀ ಚರ್ಚೆ ಹಾಗೂ ರೈತರ ಭಾರಿ ಸಾವು ನೋವಿಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಕೊನೆಗೂ ಪ್ರಧಾನಿ ಮೋದಿ ಘೋಷಿಸಿದ್ದು, ರೈತರ ತೀವ್ರ ಹೋರಾಟ, ಬಲಿದಾನಕ್ಕೆ ಕೊನೆಗೂ ನ್ಯಾಯ ದೊರಕಿದಂತಾಗಿದೆ.ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ. ಇದೇ ತಿಂಗಳು ಸಂಸತ್ತಿನಲ್ಲಿ ಈ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಇನ್ನೂ ಕೃಷಿ ಕಾಯ್ದೆಗಳ ತಿದ್ದುಪಡಿ ಕಾಯ್ದೆಯನ್ನು […]
JANANUDI.COM NETWORK ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ ಮಂಗಳವಾರ ನ.16 ರ ಬೆಳಗ್ಗೆ ಈ ಭೀಕರ ಆ್ಯಕ್ಸಿಡೆಂಟ್ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 333 ರಲ್ಲಿ ಈ ಅಪಘಾತ ಸಂಭವಿಸಿದ್ದು. ಸುಶಾಂತ್ ಕುಟುಂಬದವರು ಸೇರಿ ಒಟ್ಟು ೧೦ ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್ ನಡುವೆ ನಡೆದ ಅಪಘಾತದ ಪರಿಣಾಮ ಸ್ಥಳದಲ್ಲೇ […]
JANANUDI.COM NETWORK ನಟ ಪುನೀತ್ ರಾಜ್ ಕುಮಾರ್ ಇಂದು ಸೀರಿಯಸ್ ಹೃದಯಾಘಾತಕ್ಕೆ ಒಳಗಾಗಿದ್ದರು. ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿದ್ದರು, ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ.ಮಾಡಿಸಿಕೊಂಡು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಸ್ಥಿತಿ ಗ0ಭೀರವಾಗಿದ್ದು ಅವರಿಗೆ ಎಲ್ಲಾ ಚಿಕಿತ್ಸೆಯನ್ನು ಆರಂಭಿಸಲಾಗಿತ್ತು. ಈ ಬಗ್ಗೆ ವಿಕ್ರ0 ಆಸ್ಪತ್ರೆಯ ವೈದ್ಯರೊಬ್ಬರು ಹೇಳಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ರಾಜ್ ಕುಮಾರ್ ವಿಧಿವಶವಾಗಿದ್ದಾರೆ. ಇದೊಂದು ಅತ್ಯಂತ ದುಖಕರ ಘಟನೆಯಾಗಿದೆ ಪುನೀತ್ ರಾಜ್ಕುಮಾರ್ ನಿಧನ ಕನ್ನಡಕ್ಕೆ ತುಂಬಲಾರದ ನಶ್ಟ: ಕೇವಲ ಇವರು ಚಿತ್ರ ತಾರೆಯಾಗಿರಲಿಲ್ಲ ಗುಣ […]
JANANUDI.COM NETWORK ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಇರುವ ಇದ್ದ ಕಾರಣಕ್ಕೆ, ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೇರಳದ ಹೈಕೋರ್ಟ್, ಇದೀಗ ಕೇಂದ್ರ ಸರಕಾರಕ್ಕೆ ನೋಟಿಸ್ ಜ್ಯಾರಿ ಮಾಡಿದೆ.ಕೇರಳದ ಕೊಟ್ಟಾಯಮ್ ನಿವಾಸಿ ಎಂ.ಪೀಟರ್ ತನಗೆ ಪ್ರಧಾನ ಮಂತ್ರಿ ಮೋದಿಯವರ ಭಾವಚಿತ್ರ ಇಲ್ಲದಿರುವ ಪ್ರಮಾಣ ಪತ್ರ ಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಮತ್ತು ಕೇರಳ ರಾಜ್ಯ ಸರಕಾರಗಳಿಗೆ ನೋಟಿಸ್ ಜ್ಯಾರಿ ಮಾಡಿ, ಕೇಂದ್ರ […]