ಮುಂಬೈ: ನೆರೆಯ ವಾಣಿಜ್ಯ ನಗರಿಯಲ್ಲಿ ಅಬ್ಬರಿಸುತ್ತಿರುವ ಬಿರುಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ, ಮೆಟ್ರೋ ಹಾಗೂ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ತೆಂಗಿನ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೇಘವಾಡಿ ನಾಕಾದಲ್ಲಿ ನಡೆದಿದೆ. ಕೂಡಲೇ ಸ್ಥಳೀಯರು ಆಟೋ ಚಾಲಕ ಹಯಾತ್ ಖಾನ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ […]

Read More

ಮುಂಬೈ: ಮುಂಬೈನಲ್ಲಿ ಮುಂಬೈನಲ್ಲಿ ಧೂಳು ಸಹಿತ ಬಿರುಗಾಳಿಯದ್ದಿದ್ದು, ಗಾಳಿಯ ರಭಸಕ್ಕೆ ಇಂದು ಸಂಜೆ 4.30ರ ಸುಮಾರಿಗೆ ಬೃಹತ್‌ ಹೋರ್ಡಿಂಗ್‌ ಕುಸಿದಿದ್ದರಿಂದ ಸುಮಾರು 100 ಜನರು ಅದರಡಿ ಸಿಕ್ಕಿಬಿದ್ದಿದ್ದಾರೆ. ಪಂತ್‌ ನಗರದ ಪೂರ್ವ ಎಕ್ಸ್‌ಪ್ರೆಸ್‌ ಹೆದ್ದಾರಿ ಬಳಿ ಇರುವ ಜಾಹೀರಾತು ಫಲಕವು ಪೆಟ್ರೋಲ್‌ ಪಂಪ್‌ ಮೇಲೆ ಕುಸಿದಿದೆ. ಇದರಿಂದ ನಾಲ್ವರು ಮೃತಪಟ್ಟಿದ್ದು, 59 ಜನರು ಗಾಯಗೊಂಡಿದ್ದಾರೆ. ಹೋರ್ಡಿಂಗ್‌ ಪೆಟ್ರೋಲ್‌ ಪಂಪ್‌’ನ ಸ್ಟ್ಯಾಫೋಲ್ಡಿಂಗ್‌ ಮತ್ತು ಪಂಪ್‌ ನಲ್ಲಿ ನಿಲ್ಲಿಸಿದ್ದ ಕೆಲವು ವಾಹನಗಳನ್ನು ಹಾನಿಗೊಳಿಸಿದೆ. ಸದ್ಯ 12 ಅಗ್ನಿಶಾಮಕ ವಾಹನಗಳು. ಮತ್ತು […]

Read More

ಕನ್ಯಾಕುಮಾರಿಯಲ್ಲಿನ ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮದುವೆ ಸಮಾರಂಭಕ್ಕೆ ಬಂದತ್ತಹ ಸಮುದ್ರ ತೀರಕ್ಕೆ ಐವರು ವಿದ್ಯಾರ್ಥಿಗಳು ತೆರಳಿದ್ದರು. ಇದೇ ವೇಳೆ, ಲೆಮುರ್‌ ಬೀಚ್‌ನಲ್ಲಿ ಈಜಾಡುವಾಗ ಐವರೂ ನೀರುಪಾಲಾಗಿದ್ದಾರೆ. ಐವರಲ್ಲಿ ಇಬ್ಬರು ಯುವತಿಯರಿದ್ದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಐವರೂ ತಿರುಚಿರಪಳ್ಳಿಯಲ್ಲಿರುವ ಎಸ್‌ ಆರ್‌ ಎಂ ಮೆಡಿಕಲ್‌ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ಮೃತರನ್ನು ತಂಜಾವೂರಿನ ಚಾರುಕವಿ, ನೇಯ್‌ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್‌, ದಿಂಡಿಗಲ್‌ನ ಪ್ರವೀಣ್‌ ಸ್ಯಾಮ್‌ ಹಾಗೂ ಆಂಧ್ರಪ್ರದೇಶದ ವೆಂಕಟೇಶ್‌ ಎಂಬುದಾಗಿ ಗುರುತಿಸಲಾಗಿದೆ. ಒಟ್ಟು […]

Read More

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ಅವರನ್ನುಎಸ್‌ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರವರ ನಿವಾಸದಿಂದಲೇ ಬಂಧಿಸಿರುವ ಅಧಿಕಾರಿಗಳು ಎಸ್‌ಐಟಿ ಕಚೇರಿಗೆ.ಕರೆದುಕೊಂಡು ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ.ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿದ್ದಾರೆ. ಇಂದು ರಾತ್ರಿ ಅಥವಾನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ ಡಿ ರೇವಣ್ಣಗೆ ಸಂಕಷ್ಟ […]

Read More

ಬಾಗಲಕೋಟೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋಷಿಸಿರುವ ಬರಪರಿಹಾರ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದುಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ ಮೇಲೆ ಈಗ ಕೇಂದ್ರ ಸರ್ಕಾರ 3,464 ಕೋಟಿ ರೂ. ಬರ ಪರಿಹಾರ ನೀಡುತ್ತಿದೆ. ಇದು ಬಹಳ ಕಡಿಮೆ ಪ್ರಮಾಣದ ಪರಿಹಾರ. ನಾವು ಕೇಳಿದ್ದು 18,172ಕೋಟಿ ರೂಪಾಯಿ. ಕೇಂದ್ರ ನೀಡುತ್ತಿರುವುದು ಕೇವಲ 3,464 ಕೋಟಿ ರೂ. […]

Read More

ದೆಹಲಿ : ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್​ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟ ಸರ್ಕಾರ ರಿಟ್ ಅರ್ಜಿ ಸಲ್ಲಿಸಿದೆ. ಇಂದು (ಏ.22) ಸುಪ್ರೀಂಕೋರ್ಟ್​ ಅರ್ಜಿ ವಿಚಾರಣೆ ನಡೆಸಿತು. ಸುಪ್ರೀಂಕೋರ್ಟ್​ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ಅರ್ಜಿ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ವಾದ ಮಂಡಿಸಿದರು. […]

Read More

ಗಾಂಧಿನಗರ: ಬಿಸಿಲಿನ ತಾಪಕ್ಕೆ ಬೇಸತ್ತು ಗುಜರಾತಿನ ವಡೋದರಾ ಸಂಚಾರಿ ಪೊಲೀಸರು ಎಸಿ ಹೆಲ್ಮೆಟ್‌ನ್ನು ಕಂಡುಕೊಂಡಿದ್ದಾರೆ.. ಗುಜರಾತ್‌ ಪೊಲೀಸ್‌ ಇಲಾಖೆ ಸಂಚಾರಿ ಪೊಲೀಸರಿಗೆ ವಿಶೇಷ ಹವಾನಿಯಂತ್ರಿತ ಹೆಲ್ಮೆಟ್‌ ಗಳನ್ನು ಪರಿಚಯಿಸಿದೆ. ಈ ಹೆಲ್ಮೆಟ್‌ 40-42 ಡಿಗ್ರಿ ಸೆಲ್ಸಿಯಸ್‌ನ ಗರಿಷ್ಠ ತಾಪಮಾನದಲ್ಲಿ ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಸಂಚಾರಿ ಪೊಲೀಸರಿಗೆ ತಣ್ಣನೆಯ ಅನುಭವ ನೀಡಲಿದೆ. ಈ ಹೆಲ್ಮೆಟ್‌ ಗಳನ್ನು ವಿಶೇಷವಾಗಿ ತಯಾರಿಸಲಾಗಿದೆ. ಸೂರ್ಯನ ಬೆಳಕಿನಿಂದ ಕಣ್ಣುಗಳನ್ನು ರಕ್ಷಿಸಲು ಮುಖವಾಡ ಮತ್ತು ಇದಕ್ಕೆ ಚಾರ್ಜಿಂಗ್ ವ್ಯವಸ್ಥೆ ಇದ್ದು. ಪೂರ್ಣ ಚಾರ್ಜ್‌ನಲ್ಲಿ ಈ ಹೆಲ್ಕೆಟ್‌ಗಳು 8 […]

Read More
1 3 4 5 6 7 33