
JANANUDI.COM NETWORK ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ -ಹೆಬ್ರಿ ವರೆಗಿನ ರಸ್ತೆ ಡಾಂಬರೀಕರಣ ಕಾರಣದಿಂದಾಗಿ, ಮಾರ್ಚ್ 5 ರಿಂದ 15ನೇ ತಾರೀಕಿನವರೆಗೆ ಹತ್ತು ದಿನಗಳ ಕಾಲ ಆಗುಂಬೆ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.ಈ ಹಿನ್ನೆಲೆಯಲ್ಲಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರ್ಯಾಯ ಮಾರ್ಗ ಅನುಸರಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

JANANUDI.COM NETWORK ಕುಂದಾಪುರ, ಮಾ. 3: ದಿನಾಂಕ 02.03.2022ರಂದು ನಾರಾಯಣ ವಿಶೇಷ ಮಕ್ಕಳ ಶಾಲೆ ಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಪಾಲಕರ ಸಭೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಶರತ್ ಚಂದ್ರ ಶೆಟ್ಟಿ ನ್ಯಾಯವಾದಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನ ಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ.ಬಿ ಶೆಟ್ಟಿ ಯವರು ಮಾತನಾಡಿ ಸಂಸ್ಥೆಯ ಕಾರ್ಯ […]

JANANUDI.COM NETWORK ಕುಂದಾಪುರ: ಫೈರ್ ಬ್ರಾಂಡ್ ಪ್ರಚೋದನಕಾರಿ ಹೇಳಿಕೆ ನೀಡಿ ಕುಖ್ಯಾತಿ ಪಡೆದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಕಲಬುರಗಿಯಲ್ಲಿ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಚೈತ್ರಾ ಅವರು ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ತೆರಳುತ್ತಿದ್ದು, ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಪ್ರಯಾಣಿಸುವಾಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.ಚೈತ್ರಾ ಮತ್ತು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕಲಬುರಗಿ ಜಿಲ್ಲಾಡಳಿತವು ನಿರ್ಬಂಧ ಹೇರಿತ್ತು. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದು ಡಯಟ್ ಪ್ರಾಂಶುಪಾಲ ಟಿ.ಕೆ.ರಾಘವೇಂದ್ರ ಹೇಳಿದರು.ಪಟ್ಟಣದ ಕರ್ನಾಟಕ ಸರ್ಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಜನರ ಬದುಕಲ್ಲಿ ಹಾಸುಹೊಕ್ಕಾಗಿದೆ. ಅದನ್ನು ವಿವೇಚನೆಯಿಂದ ಬಳಸಬೇಕಾದ ಹೊಣೆ ಸಮಾಜದ ಮೇಲಿದೆ ಎಂದು ಹೇಳಿದರು.ಶಾಲೆಯ ಮುಖ್ಯ ಶಿಕ್ಷಕ ಎಂ.ಬೈರೇಗೌಡ ಮಾತನಾಡಿ, ವಿಜ್ಞಾನ ಮಾನವನ ಬದುಕನ್ನು ಸುಲಭ ಮಾಡಿದೆ. ಹಾಗೆಯೇ ವಿಜ್ಞಾನದ ಕೆಲವು ಆವಿಷ್ಕಾರಗಳು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶಾಲೆಗಳ ಅಭಿವೃದ್ದಿಯಲ್ಲಿ ಎಸ್ಡಿಎಂಸಿಗಳ ಪಾತ್ರ ಅತಿ ಮುಖ್ಯವಾಗಿದ್ದು, ಮುಖ್ಯಶಿಕ್ಷಕರು, ಶಿಕ್ಷರೊಂದಿಗೆ ಕೈಜೋಡಿಸುವ ಮುಲಕ ಸಮುದಾಯದ ನೆರವನ್ನು ಶಾಲೆಗಳಿಗೆ ಹರಿಸಬಹುದು ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ಅಭಿಪ್ರಾಯಪಟ್ಟರು.ಅರಾಭಿಕೊತ್ತನೂರು ಪ್ರಾಥಮಿಕ ಶಾಲೆ ಆವರಣದಲ್ಲಿ ಸೋಮವಾರ 2021-22ನೇ ಸಾಲಿನ ಎಸ್ಡಿಎಂಸಿ ಸದಸ್ಯರು,ಪೋಷಕರ ಕ್ಲಸ್ಟರ್ ಮಟ್ಟದ 4ನೇ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಸರ್ಕಾರದ ನೆರವಿನ ಜತೆಗೆ ಸಮುದಾಯದ ಸಹಾಕಾರ ಪಡೆದು ಶಾಲೆಗಳಲ್ಲಿ ಮಕ್ಕಳಿಗೆ ಅಗತ್ಯವಾದ ಹೈಟೆಕ್ ಸೌಲಭ್ಯ ಒದಗಿಸುವ ಹಾದಿಯಲ್ಲಿ ಪೋಷಕರು ಕೈಜೋಡಿಸಿ, […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬೆಂಗಳೂರಿನ ಶುಕ್ಲ ಯಜುಃಶಾಖಾ ಟ್ರಸ್ಟ್ ಆಧಾಯ ತೆರಿಗೆ ಇಲಾಖೆಯಿಂದ 1 ಕೋಟಿ ದಂಡ ಕಟ್ಟುವ ಪರಿಸ್ಥಿತಿಗೆ ಕಾರಣರಾದ ಆಡಳಿತ ಮಂಡಳಿಯ ಸ್ವಘೋಷಿತ ಪದಾಧಿಕಾರಿಗಳ ವಿರುದ್ದ ಸಮುದಾಯದ ಜಾಗೃತಿಗಾಗಿ ಶುಕ್ಲ ಯಜುರ್ವೇದ ಮಹಾಮಂಡಳ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಭಿಯಾನ ಆರಂಭಿಸಿದೆ ಎಂದು ಮಹಾಮಂಡಳದ ರಾಜ್ಯಾಧ್ಯಕ್ಷ ಸುಧಾಕರ ಬಾಬು ತಿಳಿಸಿದರು.ನಗರದ ಕೋಟೆಯ ಶೃಂಗೇರಿ ಶಂಕರಮಠದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, 110 ವರ್ಷಗಳ ಇತಿಹಾಸ ಹೊಂದಿರುವ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶುಕ್ಲ ಯಜುಃಶಾಖಾ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಬಾರ್ಡ್ನ ಕೃಷಿ ಮೂಲ ಸೌಕರ್ಯ ನಿಧಿ’ ಯೋಜನೆಯಡಿ ರೈತರು, ಕೃಷಿ ಉದ್ಯಮಿಗಳು,ಸಹಕಾರ ಸಂಘಗಳು ಆಧುನಿಕ ಕೃಷಿಗೆ ಅಗತ್ಯವಾದ ಟ್ರಾಕ್ಟರ್,ಟಿಲ್ಲರ್,ಬೆಳೆ ಕೋಯ್ಲೋತ್ತರ ಸಲಕರಣೆ, ಶೀತಲ ಘಟಕ ಸೇರಿದಂತೆ ವಿವಿಧ ಕಾರ್ಯಗಳಿಗೆ 20 ಲಕ್ಷದಿಂದ 2 ಕೋಟಿವರೆಗೂ ಸಾಲ ಸೌಲಭ್ಯ ಶೇ.6ರ ಬಡ್ಡಿಯಲ್ಲಿ ಪಡೆಯಬಹುದಾಗಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ಬ್ಯಾಂಕಿನ ಸಭಾಂಗಣದಲ್ಲಿ ಸೋಮವಾರ ನಬಾರ್ಡ್,ಅಫೆಕ್ಸ್ ಬ್ಯಾಂಕ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಡಿಸಿಸಿ ಬ್ಯಾಂಕ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಡೆಸುತ್ತಿರುವ ಫೆ.27ರ ಪಾದಯಾತ್ರೆ ಹಾಗೂ ಮಾ.3ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದನದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆ ವಿಳಂಬದ ವಿರುದ್ದ ಧ್ವನಿಯೆತ್ತೋಣ ಎಂದು ಮಾಜಿ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿ.ಆರ್.ಸುದರ್ಶನ್ ಮನವಿ ಮಾಡಿದರು.ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ಬೆಂಗಳೂರು ಮಾತ್ರವಲ್ಲ, ಕೋಲಾರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ನೀರು […]

JANANUDI.COM NETWORK ಬೆ೦ಗಳೂರು: ಶಿಕ್ಷಣ ಸ೦ಸ್ಥೆಗಳಲ್ಲಿ ಹಿಜಾಬ್ನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ವಿವಿಧ ಅರ್ಜಿಗಳ ಕುರಿತು ಕರ್ನಾಟಕ ಹೈಕೋರ್ಟ್ ವಾದಗಳನ್ನು ಆಲಿಸಿ ವಾದವನ್ನು ಮುಕ್ತಾಯಗೊಳಿಸಿದ್ದು, ತನ್ನ ಆದೇಶವನ್ನು ಕಾಯ್ದಿರಿಸಿದೆ. ಶುಕ್ರವಾರ ಕೋರ್ಟ್ ನಲ್ಲಿ ವಾದ ಮುಕ್ತಾಯವಾಗಿದ್ದು. ಈಗ ಎಲ್ಲರ ಮನಸಿನಲ್ಲಿ ನ್ಯಾಯಾಲಯದ ತೀರ್ಪು ಏನು ಬರುವುದೆಂದು ಕಾತರಿಕೆ ಆರಂಭವಾಗಿದೆ.ನ್ಯಾಯಮೂರ್ತಿ ರಿತುರಾಜ್ ಅವಸ್ಸಿ, ನ್ಯಾ. ಕೃಷ್ಣ ಎಸ್.ದೀಕ್ಚಿತ್, ನ್ಯಾ. ಖಾಜಿ ಜೈಬುನ್ನಿಸಾ ತ್ರಿಸದಸ್ಯ ನ್ಯಾಯಪೀಠ ಸತತ 11 ನೇ ದಿನ ಹಿಜಾಬ್ಗೆ ಸ೦ಬ೦ಧಿಸಿದ ಅರ್ಜಿಗಳ ವಿಚಾರಣೆಗಳನ್ನು ನಡೆಸಿ, ವಾದ […]