JANANUDI.COM NETWORK ಮಂಗಳೂರು:ಜು.30: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಜುಲೈ 29 ರಂದು  ಹೃದಯಘಾತದಿಂದ ನಿಧನರಾಗಿದ್ದಾರೆ.    ಅವರು ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ ಅಭಿನಯಿಸಿದ್ದರು. ಇವರ ಕಲಾ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತಿ ವಿನ್ಸೆಂಟ್, ಮತ್ತು ಮಕ್ಕಳಾದ ಪ್ರತಾಪ್ ಮತ್ತು ಬಬಿತಾ ಇವರನ್ನು ಅಗಲಿದ್ದಾರೆ.

Read More

JANANUDI.COM NETWORK ಟೋಕಿಯೊ:ಜು.3o; ಟೋಕಿಯೊ ಒಲಂಪಿಕ್ಸ್’ನ ಬಾಕ್ಸಿಂಗ್ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾಗಿದೆ.ಟೋಕಿಯೊ ಒಲಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದ್ದು ಇದುವರೆಗೂ ಭಾರತದ ಪರ ಪದಕವನ್ನು ಗೆದ್ದಿರುವ ಏಕೈಕ ಆಟಗಾರ್ತಿ ಅಂದರೆ ಮೀರಾಬಾಯಿ ಚಾನು ಮಾತ್ರ.ಪಿವಿ ಸಿಂಧು, ಅತನು ದಾಸ್ ಮತ್ತು ಭಾರತದ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿದ್ದಾರೆ. […]

Read More

JANANUDI.COM NETWORK ಬೆಂಗಳೂರು:ಜು. 27: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ರಾಜ್ಯದ ೩೦ ನೇ ಸಿಎಂ ಆಗಿ ಆಯ್ಕೆ ಆಗಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಅಚ್ಚರಿ ಎಂಬಂತ್ತೆ ಸಿಎಂ ಅಭ್ಯರ್ಥಿಯ ಪೈಪೋಟಿಯಲ್ಲಿ ಶಿಗ್ಗಾವಿ ಶಾಸಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ ಆಗಿದ್ದು, ಈಗಾಗಲೇ ವರಿಷ್ಠರು ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಸ್ & ರಾಜಭವನದ ಸಿಬ್ಬಂದಿಗೆ ತಿಳಿಸಿದ್ದಾರೆ ಎನ್ನಲಾಗಿದೆ.ಇನ್ನು, ಉಸ್ತುವಾರಿ ಸಿಎಂ ಬಿಎಸ್ ಯಡಿಯೂರಪ್ಪ […]

Read More

JANANUDI.COM NETWORK ಬೆಂಗಳೂರು,ಜು.26, ಇಂದು ನಡೆದ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ.ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ […]

Read More

JANANUDI.COM NETWORK ಮಂಗಳೂರು್,ಜು.23; ಮಾಜಿ ಮಂತ್ರಿ ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬ ಗುರುವಾರ ಅವರ ಸಾವಿನ ಬಗ್ಗೆ ವೈರಲ್ ಸುಳ್ಳು ಸುದ್ದಿಯನ್ನು ಖಂಡಿಸಿದ್ದು, ಅವರು ನಗರದ ಯೆನೆಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.ಅವರು ಆಸ್ಪತ್ರೆಯ ಐಸಿಯುನಲ್ಲಿ ವೀಕ್ಷಣೆಯಲ್ಲಿದ್ದಾರೆ ಎಂದು ಕುಟುಂಬ ತೀಳಿಸಿದ್ದಾರೆಆಸ್ಕರ್ ಫೆರ್ನಾಂಡಿಸ್ ಪಿ.ಎ. ಅಶ್ಪಕ್ ಅಮ್ಮದ್ ಮಾಧ್ಯಮಕ್ಕೆ ತಿಳಿಸಿದ್ದು, ಕಾಂಗ್ರೆಸ್ ಹಿರಿಯ ಮುಖಂಡರ ಆಸ್ಕರ್ ಅವರ ಆರೋಗ್ಯದ ಬಗ್ಗೆ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡದಂತೆ ಜನರನ್ನು ಒತ್ತಾಯಿಸಿದರು. ಮತ್ತು ಅವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಬೇಕು […]

Read More

ಮುಕ್ತಿ ಧಾಮ@ಸ್ಮಶಾನ ಅಂದರೆ ನಮ್ಮಲ್ಲಿ ಬೆಚ್ಚಿ ಕಿಲೋಮೀಟರ್ ದೂರ ಓಡಿ ಹೋಗುವ ವ್ಯವಸ್ಥೆ ಇದೆ.ಆದರೆ…‌‌‌…. ದೂರದ ಶಿರಸಿಸ್ಮಶಾನವೂ ಸಾಂಸ್ಕೃತಿಕ ತಾಣವಾಗಬಲ್ಲದು ಎಂಬುದನ್ನು ಮಾಡಿ ತೋರಿಸಲಾಗಿದೆ ಹಾಗೆ ನೋಡಿದರೆ,ಶಿರಸಿ ಹಾದಿ ಸವೆಸಿದ್ದು ಕಡಿಮೆ. ಆಗೊಮ್ಮೆ ಈಗೊಮ್ಮೆ ಸಹ್ಯಾದ್ರಿ ತಪ್ಪಲಿನಲ್ಲಿ ಓಡಾಡಿ ಬಂದಿದ್ದ, ಜೋಗದ ಗುಂಡಿಯಲ್ಲಿ ಮಿಂದೆದ್ದ ನೆನಪು ಇನ್ನೂ ಅಚ್ಚಳಿಯದೆ ಉಳಿದಿವೆ. ಮೊನ್ನೆ ಶಿಕಾರಿಪುರ ಕಾರ್ಯಕ್ರಮ ಮುಗಿಸಿ ಶಿರಸಿ ಹಾದಿ ಹಿಡಿದಾಗ ಪಡುವಣ ಸೂರ್ಯ ಜಾರಿದ್ದ. ಸೊರಬ ದಾಟಿ ಹೋಗುವಾಗ ಶಿರಸಿ ವಿ.ಪಿ.ಹೆಗಡೆ ಅವರಿಗೆ ಪೋನಾಯಿಸಿದೆ. ನಿಮ್ಮ ಬರವಿಕೆ […]

Read More

JANANUDI.COM NETWORK ಬೆಂಗಳೂರು,ಜು.೨೧: ರಾಜ್ಯ ಸರಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ, ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಈ ಕುರಿತು ಮಾಹಿತಿ ನೀಡಿದ್ದಾರೆ.    ಕೇಂದ್ರ ಸರಕಾರ ತನ್ನ ನೌಕರರಿಗೆ ಶೇ.11ರಷ್ಟು ಡಿಎ ನೀಡುತ್ತಿರುವ ಆದೇಶದ ಪ್ರತಿ ನಿನ್ನೆ ಬೆಳಗ್ಗೆ ಸಿಕ್ಕಿತ್ತು. ತಕ್ಷಣ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯ ಸರಕಾರಿ ನೌಕರರಿಗೂ ಶೇ.11ರಷ್ಟು ಡಿಎ ನೀಡಬೇಕೆಂದು ವಿನಂತಿಸಿದಾಗ ಒಂದೇ ನಿಮಿಷದಲ್ಲಿ ಸಹಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.     […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ನರ್ಸರಿ ಉತ್ಪಾದಕರಿಗೆ “ಆಲೂಗಡ್ಡೆ ಸಸಿಗಳಿಂದ ಬೀಜೋತ್ಪಾದನೆ” ಎಂಬ ತರಬೇತಿ ಕಾರ್ಯಕ್ರಮವನ್ನು ದಿನಾಂಕ 17.7.2021 ರಂದು ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಡಾ.ಜ್ಯೋತಿ ಕಟ್ಟೆಗೌಡರ, ವಿಜ್ಞಾನಿ (ತೋಟಗಾರಿಕೆ), ಕೃಷಿ ವಿಜ್ಞಾನ ಕೇಂದ್ರ ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ಅಂತರಾಷ್ಟ್ರೀಯ ಆಲೂಗಡ್ಡೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು . ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು . ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ […]

Read More