
ಬೆಂಗಳೂರು: ಟಿವಿ, ಫ್ರಿಡ್ಜ್ ಬೈಕು, ಹೊಂದಿರುವ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎನ್ನುವ ಮಾಧ್ಯಮ ವರದಿಗಳಿಗೆ ಉತ್ತರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಇದೀಗ ಸ್ಪಷ್ಟನೆ ನೀಡಿದ್ದು, ಈ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಟಿವಿ ಫ್ರಿಡ್ಜ್ ಹಾಗೂ ಬೈಕ್, ಹೊಂದಿದವರು ಎಂಬ ಕಾರಣಕ್ಕೆ ಅಂತ್ಯೋದಯ ಅನ್ನ ಮತ್ತು ಬಿಪಿಎಲ್ ಕಾರ್ಡ್ ಪಡಿತರ ಚೀಟಿದಾರರ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ, ಟಿವಿ, ಫ್ರಿಡ್ಜ್, ಬೈಕ್ ಹೊಂದಿರುವ ಕುಟುಂಬಗಳು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ದರಖಾಸ್ತುದಾರರಿಗೆ ನಿಯಮಾನುಸಾರ ಜಮೀನು ಮಂಜೂರು ಮಾಡಲಾಗುವುದು. ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ದರಖಾಸ್ತು ಕಮಿಟಿ ಸಭೆಯಲ್ಲಿ ಮಾತನಾಡಿ, ಮೊದಲಿಗೆ ನಿಯಮ 53 ರ ಅಡಿಯಲ್ಲಿ ಹಾಕಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು. ನಿಯಮ 57 ಅಡಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಹೇಳಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು […]

JANANUDI.COM NETWORK ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ವಿನೂತನ ತಂತ್ರಜ್ಞಾನವನ್ನು ಮಂಗಳೂರಿನ ಬೋಟ್ ಗೆ ಅಳವಡಿಕೆ ಮಾಡಲಾಗಿದೆ. ಈ ಮೂಲಕ ವಾರಗಟ್ಟಲೆ ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸಲು ಹೋಗುವ ಮೀನುಗಾರರು ಇನ್ನು ಮುಂದೆ ತಮ್ಮ ನಿತ್ಯ ಬಳಕೆಯ ಅವಶ್ಯಕತೆಗೆ ಬೇಕಾದ ನೀರನ್ನು ಕೊಂಡೊಯ್ಯುವ ಪ್ರಮೇಯ ತಪ್ಪುತ್ತೆಆಳ ಸಮುದ್ರ ಮೀನುಗಾರಿಕೆ ನಡೆಸುವ ಮೀನುಗಾರರು ಸುಮಾರು ಹತ್ತಾರು ದಿನಗಳ ಕಾಲ ಸಮುದ್ರದ ನಡುವೆಯೇ ಮೀನುಗಾರಿಕೆ ನಡೆಸುತ್ತಿರುತ್ತಾರೆ. ಸಿಹಿ ನೀರು ಸಿಗುವುದಿಲ್ಲ. ಅದಕ್ಕಾಗಿ ಅವರು ಸಾವಿರ ಗಟ್ಟಲೆ […]

JANNUDI.COM NETWORK ನವದೆಹಲಿ, ಸೆ.1: ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಬಡ ಜನರಿಗೆ ಬರೆ ಎಳೆಯುವ ಬಿಸಿ ಸುದ್ದಿ ಪ್ರಕಟವಾಗಿದೆ.. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಜನರು ಹೆಚ್ಚುವರಿ 25 ರು ತೆರಬೇಕಾಗುತ್ತದೆ.ಪರಿಷ್ಕೃತ ದರ ಪಟ್ಟಿ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ […]
JANANUDI.COM NETWORK ಕುಂದಾಪುರ್, ಆ.30: 450 ವರ್ಷಾ ಚರಿತ್ರಾ ಆಸ್ಚ್ಯಾ ಭಾಗೆವೊಂತ್ ರೊಜಾರ್ ಮಾಯೆಚ್ಯಾ ಇಗರ್ಜೆ ಮೊಂತಿ ಸಾಯ್ಬಿಣಿಚ್ಯಾ ಫೆಸ್ತಾಚ್ಯಾ ತಯಾರಾಯೆಕ್ ಲಾಗೊನ್ ಆಗೋಸ್ತಾಚ್ಯಾ 30 ವೆರ್ ಸಕಾಳಿ ನೊವೆನ್ ಆರಂಭ್ ಜಾಲೆಂ. ಫಿರ್ಗಜೆಚೊ ಸಹಾಯಕ್ ವಿಗಾರ್ ಮಾ|ಬಾ|ವಿಜಯ್ ಡಿಸೋಜಾ ಪವಿತ್ರ್ ಬಲಿದಾನ್ ಭೆಟಯ್ಲೆ. ಪವಿತ್ರ್ ಬಲಿದಾನ್ ಭೆಟಯ್ಲೆ. ಪ್ರಧಾನ್ ಯಾಜಕ್ ವಿಗಾರ್ ಮಾ|ಬಾ|ಸ್ಟ್ಯಾನಿ ತಾವ್ರೊನ್ ಸಹಬಲಿದಾನ್ ಭೆಟಯ್ಲೆಂ ಇಗರ್ಜೆಚ್ಯಾ ಪಾಟ್ಲ್ಯಾ ಸಭಾ ಸಾಲಾಂತ್ ಭುರ್ಗ್ಯಾನಿಂ ಆನಿ ವ್ಹಡಾನಿ ಬಾಳೊಕ್ ಮರಿಯೆಕ್ ವಯಕ್ತಿಕ್ ಜಾವ್ನ್ ಫುಲಾಂ ಅರ್ಪಿಲಿ. ನೊವೆನಾಚೆ […]

JANANUDI.COM NETWORK ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿರುವ ಸಂದರ್ಭದಲ್ಲಿ. 6 ರಿಂದ 8 ನೇ ತರಗತಿ ವರೆಗಿನ ಶಾಲಾರಂಭದ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ನಡುವೆ ಸಪ್ಟೆಂಬರ್ 13ರಿಂದ ಶಾಲೆಗಳು ಆರಂಭ ಮಾಡುವಂತೆ ತಜ್ಞರ ಸಮಿತಿ ಸಲಹೆ ಕೊಟ್ಟಿದೆಕೋವಿಡ್19 ರ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ದೈಹಿಕ ಅಥವಾ ಆಫ್ಲೈನ್ ತರಗತಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. […]

JANANUDI.COM NETWORK ಬೆಂಗಳೂರು(29.08.2021) : ಬೆಂಗಳೂರಿನಲ್ಲಿ ನಾಯಂಡನ ಹಳ್ಳಿಯಿಂದ ಕೆಂಗೇರಿ ವರೆಗಿ ನವಿಸ್ತರಿತ ಮೆಟ್ರೋ ಮಾರ್ಗ 7.5 ಕಿ.ಮೀ. ದೂರ ಸಂಚಾರವನ್ನು ಸಿಎಂ ಇಂದು ಉದ್ಭಾಟಿಸಿದರು. ನಂತರ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಯಲ್ಲಿ ಮೆಟ್ರೋಮಾರ್ಗವನ್ನು ರಾಮನಗರ, ಮಾಗಡಿ ರಸ್ತೆ ಮತ್ತು ರಾಜನ ಕುಂಟೆ ವರೆಗೂ ವಿಸ್ತರಣೆ ಮಾಡಲು ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎರಡನೇ ಹಂತ ಪೂರ್ಣ ಗೊಂಡ ನಂತರರ 3ನೇಹಂತವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಬೆಂಗಳೂರಿನಿಂದ ಬರುತ್ತಿರುವ ಜಿಡಿಪಿ ಪ್ರಮಾಣದಲ್ಲೂ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ತುತ್ತಾಗುತ್ತೀರಿ ಎಂದು ಎಚ್ಚರಿಸಿದ ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಅಧಿಕಾರಿ ಮಹಮದ್ , ವಿದ್ಯಾರ್ಥಿಗಳು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು . ತಾಲ್ಲೂಕಿನ ತೊರದೇವಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ.ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ( ಕೋಟ್ಟಾರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು […]

JANANUDI.COM NETWORK ಇತ್ತೀಚೆಗೆ ಮೃತಪಟ್ಟ ಕುಂದಾಪುರ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ವಕ್ವಾಡಿ ರವಿಚಂದ್ರ ಕುಲಾಲ್ ರವರಿಗೆ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರಧ್ದಾಂಜಲಿ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಕಾಳಾವರ […]