
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಬಿಇಒ ಉಮಾದೇವಿ ಉದ್ಘಾಟಿಸಿದರು. ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಾಲಾ ಶೌಚಾಲಯವನ್ನು ಬಳಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುರಸಭೆ ವತಿಯಿಂದ ರೂ.10.70 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಮಕ್ಕಳು ಶಾಲಾ ಶೌಚಾಲಯ ಬಳಸಿಕೊಳ್ಳುವಂತೆ ಶಿಕ್ಷಕರು ಸೂಚಿಸಬೇಕು. ಶೌಚಾಲಯ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ:. ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಿ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಹಸು ಕಳೆದುಕೊಂಡಿದ್ದ ಫಲಾನುಭವಿಗಳಿಗೆ ಹಸು ವಿಮೆ ಚೆಕ್ ವಿತರಿಸಿ ಮಾತನಾಡಿ, ಬೇರೆ ಬೇರೆ ಕಾರಣಗಳಿಂದ ಹಾಲು ಉತ್ಪಾದನಾ ಪ್ರಮಾಣ ಕುಸಿಯುತ್ತಿದೆ. ತಾಲ್ಲೂಕಿನಲ್ಲಿ ಈ ಹಿಂದೆ ದಿನವೊಂದಕ್ಕೆ 74 ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಈಗ ಅದು 54 ಸಾವಿರ ಲೀಟರ್ಗೆ ಇಳಿದಿದೆ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿದರು. ಶ್ರೀನಿವಾಸಪುರ: ಸರ್ಕಾರ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಅಧಿಕಾರ ದುರುಪಯೋಗದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಆಗ್ರಹಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನ ಮಾತನಾಡುವ ಸ್ವಾತಂತ್ರ್ಯ ಕೊಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಇರುವವರು ಯಾವುದೇ ಆನ್ಯಾಯ ಸಹಿಸಲು ಸಾಧ್ಯವಿಲ್ಲ. ಹಾಗೇನಾದರೂ ಸುಮ್ಮನಿದ್ದರೆ ಅದು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಪ್ರವಾಸಿ ಮಂದಿರದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು. ಶ್ರೀನಿವಾಸಪುರ: ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ಘಟನೆಗೆ ಸಂಬಂಧಿಸಿದಂತೆ ನಕಲಿ ಸಿಡಿ ಬಿಡುಗಡೆ ಮಾಡುವುದರ ಮೂಲಕ ಸರ್ಕಾರ ಹಾಗೂ ಪೊಲೀಸ್ ವಿರುದ್ಧ ಮಿಥ್ಯಾರೋಪ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಆಪಾದಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯ ಮಂತ್ರಿಯಾಗಿದ್ದವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕಟ್ ಅಂಡ್ ಪೇಸ್ಟ್ ಸಿಡಿ ಬಿಡುಗಡೆ ಮಾಡಿ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ: ಅಪರಾಧಳನ್ನು ಬೇಧಿಸಲು ಹಾಗೂ ಕಡಿಮೆ ಮಾಡಲು ಬೈಕ್ಗಳ ಸೇವೆ ಅಗತ್ಯ ಹೋಂಡಾ ಕಂಪನಿ.ಎಸ್.ಆರ್ ಅನುದಾನದಲ್ಲಿ 50 ಬೈಕ್ಗಳನ್ನು ನೀಡಿರುವುದು ಶ್ಲಾಘನೀಯ. ಕೇಂದ್ರ ವ. ಐಜಿಪಿ :ಶರತ್ ಚಂದ್ರ ಕೋಲಾರ: ಅಪರಾಧಳನ್ನು ಬೇಧಿಸಲು ಹಾಗೂ ಕಡಿಮೆ ಮಾಡಲು ಬೈಕ್ಗಳ ಸೇವೆ ಅಗತ್ಯ ಹೋಂಡಾ ಕಂಪನಿ.ಎಸ್.ಆರ್ ಅನುದಾನದಲ್ಲಿ 50 ಬೈಕ್ಗಳನ್ನು ನೀಡಿರುವುದು ಶ್ಲಾಘನೀಯಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ಅವರು ತಿಳಿಸಿದರು. ಇಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ, ಚಾಲನಾ ಸಮಾರಂಭವನ್ನು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಹೊರ ವಲಯದ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಹೊರ ವಲಯದ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಿಸಿ ರಸ್ತೆ, ಚರಂಡಿ ನಿರ್ಮಾಣದಂಥ ಕಾಮಗಾರಿಗಳನ್ನು ಎನ್ಆರ್ಇಜಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿಕೆ 60 ಸೊಸೈಟಿ ಆನ್ಲೈನ್ಗೆ ಮಾರ್ಚ್ ಗಡುವು ಸೊಸೈಟಿಗಳಿಗೆ 8 ಕೋಟಿ ರೂ. ಲಾಭಾಂಶ ಹಂಚಿಕೆಗೆ ಕ್ರಮ ಕೋಲಾರ: ಮಾರ್ಚ್ ಅಂತ್ಯಕ್ಕೆ ಅವಳಿ ಜಿಲ್ಲೆಯ ಸೊಸೈಟಿಗಳಿಗೆ ಸುಮಾರು 8 ಕೋಟಿ ರೂ. ಲಾಭಾಂಶವನ್ನು ಹಂಚಿಕೆ ಮಾಡಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು. ಡಿಸಿಸಿ ಬ್ಯಾಂಕಿನಿಂದ ಇಲ್ಲಿನ ಸಹಕಾರಿ ಯೂನಿಯನ್ನಲ್ಲಿ ನಡೆದ ಸೊಸೈಟಿ ಆನ್ಲೈನ್ ಯೋಜನೆಯ ಪೂರ್ವಭಾವಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸೈದಾನಿಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷೆಯಾಗಿದ್ದ ಮಂಗಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಪಡಿಸಲಾಗಿತ್ತು. ಆದರೆ ಜೆಡಿಎಸ್ ಬೆಂಬಲಿತ ಸೈದಾನಿಬಿ ಅವಿರೋಧ ಆಯ್ಕೆಯಾದರು. ಪಿಡಿಒ ವೆಂಕಟರಾಮರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಸದಸ್ಯರಾದ ಗಂಗಿರೆಡ್ಡಿ, ಈರಪ್ಪ, ನಾರೆಮ್ಮ, ಮಂಗಮ್ಮ, ನಿರ್ಮಲಮ್ಮ, ಚಿನ್ನಪ್ಪಯ್ಯ, ರಾಜ್ಕುಮಾರ್, ನಾಗರಾಜ್, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನ್ಯಾಯಾಲಯದಲ್ಲಿ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ವಿರುದ್ಧ ಮಾನಹಾನಿ ಮೊಕ್ದಮೆ ದಾಖಲಿಸಿದ ಬಳಿಕ, ನ್ಯಾಯಾಲಯದ ಹೊರಗೆ ಹೈಕೋರ್ಟ್ ವಕೀಲ ಎ.ಶಂಕರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಕೆ.ಆರ್.ರಮೇಶ್ ಕುಮಾರ್ ಇದ್ದರು. ಶ್ರೀನಿವಾಸಪುರ: ಇಲ್ಲಿನ ನ್ಯಾಯಾಲಯದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ವಿರುದ್ಧ ಮಾನ ಹಾನಿ ಮೊಕದ್ದಮೆ ದಾಖಲಿಸಿದರು. ಮೊಕದ್ದಮೆ ದಾಖಲಿಸಿದ ಬಳಿಕ ನ್ಯಾಯಾಲಯದ ಹೊರಗೆ ಹೈಕೋರ್ಟ್ ವಕೀಲ ಎ.ಶಂಕರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಹಾಗೂ ವಿಧಾನಸಭೆ ಮಾಜಿ […]