
ವರದಿ:ಶಬ್ಬೀರ್ ಅಹ್ಮದ್ ಕೆ.ಸಿ. ವ್ಯಾಲಿ ನೀರು ಅಂತರ್ಜಲ ವೃದ್ಧಿಗಾಗಿ ಮಾತ್ರ: ಉಲ್ಲಂಘನೆಯಾದಲ್ಲಿ ನಿರ್ದಾಕ್ಷಿಣ್ಯ ಕ್ರಮ -ಶ್ರೀ ಕೃಷ್ಣ ಬೈರೇಗೌಡ ಕೋಲಾರ: ಜೂನ್ 01 ಕೆ.ಸಿವ್ಯಾಲಿಯ ಸಂಸ್ಕರಿಸಿದ ನೀರು ಜಿಲ್ಲೆಯ ಅಂತರ್ಜಲ ಮಟ್ಟವನ್ನು ವೃದ್ಧಿಸಲು ಮಾತ್ರ ಉದ್ದೇಶಿಸಿದ್ದು, ಸಾರ್ವಜನಿಕರು ಇದನ್ನು ನೇರವಾಗಿ ಕೃಷಿ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಸೂಚನೆ ನೀಡಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ […]

ವರದಿ:ಶಬ್ಬೀರ್ ಅಹ್ಮದ್ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಿಸಿ: ಡಾ.ಸಿ.ಜಿ.ರಮೇಶ್ ಕೋಲಾರ: ಜೂನ್ 01 ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮಡಿಯಲ್ಲಿ ಶಿಶು ಮರಣ ಪ್ರಮಾಣವನ್ನು ತಡೆಗಟ್ಟುವ ಸಲುವಾಗಿ 0 ಯಿಂದ 5 ವರ್ಷದೊಳಗಿನ ಮಕ್ಕಳ ಕುಟುಂಬಗಳಲ್ಲಿ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕವನ್ನು ಅಂಗನವಾಡಿಗಳಲ್ಲಿ ಜೂನ್. 3 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿಯಾದ ಡಾ.ಸಿ.ಜಿ.ರಮೇಶ್ ಅವರು ತಿಳಿಸಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಆರ್.ಬಿ.ಎಸ್.ಕೆ, ಆರ್.ಕೆ.ಎಸ್.ಕೆ, […]

ವರದಿ:ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ ನಡೆದ ಚುನಾವಣೆಯಲ್ಲಿ ಒಟ್ಟು 23 ಸ್ಥಾನಗಳ ಪೈಕಿ ಜೆಡಿಎಸ್ 11 ಸ್ಥಾನ ಗಳಿಸಿದೆ. ಉಳಿದಂತೆ ಕಾಂಗ್ರೆಸ್ 8 ಹಾಗೂ ಪಕ್ಷೇತರರು 4 ವಾರ್ಡ್ಗಳಲ್ಲಿ ಜಯಗಳಿಸಿದ್ದಾರೆ. ಪುರಸಭೆ ಆಡಳಿತ ಯಾರ ತೆಕ್ಕೆಗೆ ಬರುತ್ತದೆ ಎಂಬುದು ಪಕ್ಷೇತರರು ನೀಡುವ ಬೆಂಬಲದ ಮೇಲೆ ಆಧಾರಪಟ್ಟಿದೆ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಅವರ ಪ್ರತಿಸ್ಪರ್ಧಿಗಳು ಪಡೆದ ಮತಗಳ ವಿವರ: ಅಭ್ಯರ್ಥಿಗಳು: ವಾರ್ಡ್ ನಂ 1: ನಾಗೇಶ್ ಕುಮಾರ್, ಪಡೆದ ಮತಗಳು 498(ಕಾಂಗ್ರೆಸ್), ಪ್ರತಿಸ್ಪರ್ಧಿ ಜಿ.ವಿ.ಪ್ರಸನ್ನಕುಮಾರ್, […]

ವರದಿ: ಶಬ್ಬೀರ್ ಅಹ್ಮದ್ ಕೆ.ಜಿ.ಎಫ್. : ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ; ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮನವಿ ಕೋಲಾರ : ಕೆ.ಜಿ.ಎಫ್. ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸ್ತ್ರೀಗೆ ಚಿಕಿತ್ಸೆ ನೀಡದೆ ಮಗು ಸಾವಿಗೆ ಕಾರಣರಾದ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ರೈತನ ನಾಯಕ ಪ್ರೋ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕವು ಕೋಲಾರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಕೋಲಾರ ಜಿಲ್ಲೆ ಕೆ.ಜಿಎಫ್. […]

ವರದಿ:ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.79.99ರಷ್ಟು ಮತದಾನ ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.79.99ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ತಿಳಿಸಿದ್ದಾರೆ. ಬೆಳಿಗ್ಗೆ ಚುರುಕಾಗಿ ನಡೆದ ಮತದಾನ, ಮಧ್ಯಾಹ್ನ ಸುಡು ಬಿಸಿಲಿನ ಪರಿಣಾಮವಾಗಿ ಮಂದವಾಯಿತು. ಬಿಸಿಲು ಕಡಿಮೆ ಆಗುತ್ತಿದ್ದಂತೆ ಮತ್ತೆ ಮತದಾನ ಚುರುಕುಗೊಂಡಿತು. ಪಟ್ಟಣದಲ್ಲಿ ಸ್ಥಾಪಿಸಲಾಗಿದ್ದ 23 ಮತಗಟ್ಟೆಗಳಲ್ಲೂ ಪುರುಷ ಹಾಗೂ ಮಹಿಳಾ ಮತದಾರರು ಪ್ರತ್ಯೇಕ ಸರತಿ ಸಾಲುಗಳಲ್ಲಿ ನಿಂತು ಮತ ಚಲಾಯಿಸಿದರು. ಮತದಾನದ ಸಂದರ್ಭದಲ್ಲಿ ಭಾರಿ […]

ವರದಿ:ಶಬ್ಬೀರ್ ಅಹ್ಮದ್ ಡಿಸಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಪೀಕರ್ ಸೂಚನೆ ಸುಸ್ತಿ ಆಗದವರಿಗೆ ಮರು ಸಾಲ ವಿತರಣೆಗೆ ನಿರ್ಧಾರ ಸಾಲ ವಸೂಲಾತಿಗೆ ಅಡ್ಡಿಪಡಿಸಿದರೆ ಪೊಲೀಸರಿಗೆ ದೂರು ಕೋಲಾರ: ಡಿಸಿಸಿ ಬ್ಯಾಂಕ್ ಸಾಲ ವಸೂಲಾತಿಗೆ ಅಡ್ಡಿಯಾಗಿರುವ ಮುಖಂಡರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಬೇಕೆಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸೂಚಿಸಿದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ನಿಂದ ವಿತರಿಸಲಾಗಿರುವ ಸಾಲದ ಮರುಪಾವತಿ, ಸಾಲ ವಿತರಣೆ, ಸಾಲ ನವೀಕರಣದ ಕುರಿತು ನಡೆದ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿ, ಬ್ಯಾಂಕಿಂಗ್ ವ್ಯವಸ್ಥೆ […]

ವರದಿ:ಶಬ್ಭೀರ್ ಅಹ್ಮದ್ ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದೆ: ಕೋಲಾರ ರೈತ ಸಂಘ ಕೋಲಾರ:ಮೆ.18: ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದ್ದು ಇವೆರಡೂ ಇಲಾಖೆಯನ್ನು ಸರಿಪಡಿಸಿದರೆ ಮಾತ್ರ ಭ್ರಷ್ಟಾಚಾರ ಎನ್ನುವುದು 50% ಅತೋಟಿಗೆ ಬಂದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗುತ್ತದೆ, ಇಲ್ಲವಾದಲ್ಲಿ ಲಂಚ ಕೊಡಬೇಡಿ ಎನ್ನುವುದು ವೇದಿಕೆಗಳಿಗೆ ಸೀಮಿತವಾಗಿ ಜನರು ಪ್ರತಿನಿತ್ಯ ನರಕ ಅನುಭವಿಸಬೇಕಾಗುತ್ತದೆಂದು ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸಂಘದಿಂದ ಎಸಿಬಿ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ರಾಜ್ಯ […]

ವರದಿ:ಶಬ್ಬೀರ್ ಅಹ್ಮದ್ ಕೋಲಾರ : ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತೀವೆ ಕೋಲಾರ:ಮೆ.18: ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದ್ದು ಇವೆರಡೂ ಇಲಾಖೆಯನ್ನು ಸರಿಪಡಿಸಿದರೆ ಮಾತ್ರ ಭ್ರಷ್ಟಾಚಾರ ಎನ್ನುವುದು 50% ಹತೋಟಿಗೆ ಬಂದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗುತ್ತದೆ, ಇಲ್ಲವಾದಲ್ಲಿ ಲಂಚ ಕೊಡಬೇಡಿ ಎನ್ನುವುದು ವೇದಿಕೆಗಳಿಗೆ ಸೀಮಿತವಾಗಿ ಜನರು ಪ್ರತಿನಿತ್ಯ ನರಕ ಅನುಭವಿಸಬೇಕಾಗುತ್ತದೆಂದು ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸಂಘದಿಂದ ಎಸಿಬಿ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ರಾಜ್ಯ ಉಪಾಧ್ಯಕ್ಷ […]

ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ಸ್ಥಳೀಯ ಪುರಸಭೆಯ 23 ವಾರ್ಡುಗಳಿಗೆ ಒಟ್ಟು 108 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಶ್ರೀನಿವಾಸಪುರ: ಸ್ಥಳೀಯ ಪುರಸಭೆಯ 23 ವಾರ್ಡುಗಳಿಗೆ ಒಟ್ಟು 108 ಮಂದಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿರುತ್ತಾರೆ. ನಾಮಪತ್ರ ಸಲ್ಲಿಸಲುಕೊನೆಯದಿನವಾಗಿದ್ದರಿಂದ 89 ಮಂದಿ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷ, ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರಿವಿಗೂ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಸರದಿ ಸಾಲಿನಲ್ಲಿ ನಿಂತು ನಿಯಮಾನುಸಾರ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಾಮಪತ್ರವನ್ನು ಪಡೆಯಲು […]