ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ನಿವಾಸಿ ಕರ್ನಾಟಕದ ಪ್ರಸಿದ್ಧ ಹಿರಿಯ ಕ್ರೀಡಾ ಪತ್ರಕರ್ತ ಸೋಮಶೇಖರ ಪಡುಕೆರೆಯವರಿಗೆ ಹಾಗೂ ರಾಷ್ಟç, ಅಂತಾರಾಷ್ಶ್ರೀಯ ಮಟ್ಟದಲ್ಲಿ ತನ್ನ ಕಾರ್ಟೂನ್ ಚಿತ್ರಗಳ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಜನಪ್ರಿಯರಾಗಿರುವ ಸತೀಶ ಆಚಾರ್ಯ ಕುಂದಾಪುರ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಇಬ್ಬರು ಪ್ರಶಸ್ತಿಗೆ ಭಾಜನರಾಗಿರುವುದು ಇದು ಪ್ರಥಮ ಬಾರಿ.ಭಂಡಾರ್ಕರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಸೋಮಶೇಖರ ಪಡುಕೆರೆಯವರು ಪತ್ರಕರ್ತರಾಗಿ ಹಲವು ಪತ್ರಿಕೆಗಳಲ್ಲಿ ಸೇವೆ […]
ಹೊಸದಿಲ್ಲಿ: ಶೀತಗಾಳಿಯಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ತಾಪಮಾನ ಮತ್ತಷ್ಟು ಕುಸಿದಿದೆ. ಸಫ್ದರ್ಜಂಗ್ ನಲ್ಲಿ 3.2 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಮೂರು ವರ್ಷಗಳಲ್ಲೇ ಕನಿಷ್ಠ ಹಾಗೂ ವಾಡಿಕೆ ತಾಪಮಾನಕ್ಕಿಂತ ನಾಲ್ಕು ಡಿಗ್ರಿ ಕಡಿಮೆ ಎಂದು ಹವಾಮಾನ ಇಲಾಖೆ ಅಂಕಿ ಅಂಶಗಳಿಂದ ತಿಳಿದುಬಂದಿದೆ. ದೆಹಲಿಯ ಪ್ರಮುಖ ಚಳಿಮಾಪನಾ ಕೇಂದ್ರವಾಗಿರುವ ಸಫ್ದರ್ಜಂಗ್ ನಲ್ಲಿ 2023ರ ಜನವರಿ 18ರಂದು 2.6 ಡಿಗ್ರಿ ತಾಪಮಾನ ದಾಖಲಾಗಿತ್ತು. ಬುಧವಾರ ವರೆಗೂ ಇದೇ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. […]
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವವರು ಮುಂಗಡ ಬಸ್ ಟಿಕೆಟ್ಗಳನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಬುಕ್ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. ಕೆಎಸ್ಸಾರ್ಟಿಸಿ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್ಆರ್ಟಿಸಿ ವೆಬ್ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್ಗಳು ಹಾಗೂ ಫ್ರಾಂಚೈಸಿ ಕೌಂಟರ್ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ […]
ಬೆಂಗಳೂರು, ಜ.12: ಕಳೆದ ಕೆಲವು ದಿನಗಳ ಹಿಂದೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ […]
ಬೆಂಗಳೂರು : ಕೆಎಸ್ಆರ್ಟಿಸಿ ನಿಗಮದ ಸಿಬ್ಬಂದಿಗಳ ಮಕ್ಕಳು ಉನ್ನತ ವಿದ್ಯಾಭ್ಯಾಸದಲ್ಲಿ ಅಪೂರ್ವ ಸಾಧನೆ ಮಾಡಿ ಚಿನ್ನದ ಪದಕಗಳನ್ನು ಪಡೆದಿರುವುದು ತಿಳಿದ ತಕ್ಷಣ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನಿಗಮದ ಕೇಂದ್ರ ಕಚೇರಿಗೆ ಆಹ್ವಾನಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಈ ಮೂಲಕ ಮುಂದಿನ ಸಾಧನೆಗಳಿಗೆ ಆತ್ಮವಿಶ್ವಾಸ ಮತ್ತು ಹುರುಪು ತುಂಬಿದರು. ಇಂದು ನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿಗಮದ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಕ್ಕಳು ಉನ್ನತ […]
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸುಮಾರು 25ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ಕೆ.ಮನೋಹರ ಪೈ ( 81 ವರ್ಷ) ಅವರು ಜನವರಿ 9ರಂದು ದೈವಾಧೀನರಾದರು. ಕಾಲೇಜಿನ ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯವರು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಶೃಂದ್ಧಾಂಜಲಿ ಸಭೆ ನಡೆಸಿ ಪುಷ್ಪ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶೃದ್ಧಾಂಜಲಿ ಕೋರಿದರು.ಕಾಲೇಜಿನಲ್ಲಿ 1973ರಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 2003ರಲ್ಲಿ ನಿವೃತ್ತರಾದ ಡಾ.ಕೆ. ಮನೋಹರ ಪೈ ಅವರಿಗೆ ಸಸ್ಯಶಾಸ್ತ್ರ ಕೇವಲ […]
ಮಂಗಳೂರು, ಜನವರಿ 09, 2026 – ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಮೌಲ್ಯಾಧಾರಿತ ಸಮಾಜವನ್ನು ಪೋಷಿಸುವ ದೃಢವಾದ ಬದ್ಧತೆಯಿಂದ ಹುಟ್ಟಿಕೊಂಡ ಸಂಸ್ಥೆ. 1989ರಲ್ಲಿ ಸ್ಥಾಪಿಸಲಾದ ಈ ಸಂಸ್ಥೆಯು 1991 ರಲ್ಲಿ ದತ್ತಿಸಂಸ್ಥೆಯಾಗಿ ನೋಂದಾಯಿತವಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಜಾನಪದಕ್ಕೆ ಸಕ್ರಿಯ ಬೆಂಬಲ ನೀಡುವ ಹಾಗೂ ರಾಜ್ಯದ ಜನರಲ್ಲಿ ಸಾಮರಸ್ಯ ಮತ್ತು ರ್ವಾಂಗೀಣ ಗುಣಮಟ್ಟವನ್ನು ಉತ್ತೇಜಿಸುವ ಸೇವೆಗೆ ಬದ್ಧವಾಗಿದೆ. ಇದೀಗ ಬಹುನಿರೀಕ್ಷಿತ 2026 ರ ಸಂದೇಶ ಪ್ರಶಸ್ತಿಗಳನ್ನು ಕೊಡಮಾಡುವ ಕೈಂರ್ಯದಲ್ಲಿ ತೊಡಗಿದೆ.ಸಂಗೀತ, ನೃತ್ಯ, ಕಲೆ, ಚಿತ್ರಕಲೆ, […]
ಬಿಕರ್ನಕಟ್ಟೆ, ಜನೆವರಿ 8, 2026: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು.ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ […]
ವರದಿ: ಫಾದರ್ ಅನಿಲ್ ಐವನ್ ಫರ್ನಾಂಡಿಸ್, ಚಿತ್ರಗಳು: ಸ್ಟ್ಯಾನಿ ಬಂಟ್ವಾಳ್ ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ, ಜನವರಿ 4, 2026 ರಂದು ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ನಡೆದ ಈ ಮೆರವಣಿಗೆಯು ಭಕ್ತಾದಿಗಳ ಆಧ್ಯಾತ್ಮಿಕ ಉತ್ಸಾಹ ಮತ್ತು ಪ್ರಾರ್ಥನಾ ಒಗ್ಗಟ್ಟನ್ನು ಪ್ರತಿಬಿಂಬಿಸಿತು. ಈ ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ […]

