ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ನ ಗ್ರಾಮದಲ್ಲಿ ಮತದಾನ ಮಾಡುವ ವಿಚಾರಕ್ಕೆಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಗಲಾಚೆಯಾಗಿದೆ ಮತಗಟ್ಟೆಯೇ ಧ್ವಂಸಗೊಂಡ ಅಹಿತಕರ ಘಟನೆ ಸಂಭವಿಸಿದೆ.ಮೂಲಸೌಕರ್ಯ ಒದಗಿಸುವವರೆಗೆ ಮತದಾನ ಮಾಡುವುದಿಲ್ಲ ಎಂದಿದ್ದರೂ ಕೆಲ ಗ್ರಾಮಸ್ಥರನ್ನು ಮತದಾನಕ್ಕೆ ಕರೆತಂದಿದ್ದು ಇದರಿಂದರೊಚ್ಚಿಗೆದ್ದ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದಾರೆ. ಹಾಡಿಯ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದರು.ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟಿಯನ್ನು ಸುತ್ತುವರಿದು ಮೂಲಸೌಕರ್ಯ ಕಲ್ಪಿಸುವವರಗೆ ಮತದಾನಮಾಡಬೇಡಿ ಎಂದು ಗ್ರಾಮಸ್ಸರು […]
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತ ಮಹಿಳೆ ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಎಂದು ತಿಳಿದು ಬಂದಿದೆ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು, ಆದರೆ ದಾರಿ ಮಧ್ಯದಲ್ಲೇ ಮೃತಪಟ್ಟರು.ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಕುಂದಾಪುರ, ಎ.26 ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕುಂದಾಪುರ ನಗರದಲ್ಲಿ ಬೆಳಿಗ್ಗೆ ಬೆಳಿಗ್ಗೆಯೆ ಮತದಾನ ಮಾಡಲು ಮತದಾರರು ಆಗಮಿಸಿ ಮತ ಚಲಾಯಿಸಲು ಆರಂಭಿಸಿದರು. ಕುಂದಾಪುರ ನಗರದ ಹ್ರದಯ ಭಾಗದಲ್ಲಿರುವ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಮತ ಕಟ್ಟೆಯಲ್ಲಿ ಬೆಳಿಗ್ಗೆಯೆ ಬಿರುಸಿನ ಮತದಾನ ನಡೆಯಿತು. ಅಲ್ಲಲ್ಲಿ ಸಾಂಪ್ರಾದಯಕ ಮತಕಟ್ಟೆಗಳನ್ನು ನಿರ್ಮಿಸಲಾಗಿದ್ದು, ಆಕರ್ಷಣೆಗೆ ಒಳಗಾಗಿದ್ದವು. ಕುಂದಾಪುರ ಸಂತ ಮೇರಿಸ್ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ, ಹಿಂದು ಶಾಲೆಯಲ್ಲಿ, ಇನ್ನಿತರ ಶಾಲೆಗಳಲ್ಲಿ ಸಾಂಪ್ರಾದಾಯಿಕ ಮತ ಕಟ್ಟೆಗಳನ್ನು ನಿರ್ಮಿಸಲಾಗಿದ್ದು ಜನಾಕರ್ಷಣೆಗೆ ಒಳಾಗಾದವು. […]
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಏಪ್ರಿಲ್ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. […]
ಕೋಲಾರ:- ರಾಹುಲ್ ಗಾಂಧಿಯವರನ್ನು 5 ಲಕ್ಷಗಳಿಗೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಪ್ರಧಾನ ಮಂತ್ರಿಯಾಗಿಸಲು ಸಹಕಾರ ನೀಡಬೇಕೆಂದು ರಾಜ್ಯ ಆಹಾರ ಮತ್ತು ನಾಗರೀಕ ಸಚಿವ ಕೆ.ಎಚ್. ಮುನಿಯಪ್ಪ ಕೇರಳ ರಾಜ್ಯದ ವಯನಾಡು ಮತದಾರರಿಗೆ ಮನವಿಮಾಡಿದ್ದಾರೆ.ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಕೇರಳ ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದ ಅವರು, ರಾಹುಲ್ ಗಾಂಧಿ ಪ್ರಧಾನಿಯಾಗಲು ಸಹಕಾರಿಯಾಗಲಿದೆ ಎಂದು ಭವಿಷ್ಯ ನುಡಿದರು.ಕರ್ನಾಟಕದಲ್ಲಿ ಐದು ಗ್ಯಾರೆಂಟಿ ಯೋಜನೆಗಳು ಸಂಪೂರ್ಣ ಯಶಸ್ಸಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಡೀ ದೇಶಕ್ಕೆ […]
ಬೆಂಗಳೂರು: ಕಳೆದ ವರ್ಷ ನವೆಂಬರ್ ಮತ್ತು ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ, ಇನ್ನು ಮುಂದೆ ಅದನ್ನು ವಿಸ್ತರಿಸಲು ಯೋಜಿಸುತ್ತಿಲ್ಲ. ಮೇ 31ರ ಮೊದಲು ಎಚ್ಎಸ್ಆರ್ಪಿ ಅಳವಡಿಸಲು ಇಲಾಖೆ ಆದೇಶ ನೀಡಿದೆ. ಸಾರಿಗೆ ಇಲಾಖೆಯು ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆಯ ಮೂಲಕ ರಾಜ್ಯದಲ್ಲಿ ಏಪ್ರಿಲ್ 1, 2019 ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಅಳವಡಿಸುವುದನ್ನು ಕಡ್ಡಾಯಗೊಳಿಸಿತ್ತು. ಸಾರಿಗೆ ಅಧಿಕಾರಿಗಳ ಪ್ರಕಾರ, ಸುಮಾರು ಎರಡು ಕೋಟಿ […]
ಕುಂದಾಪುರ: ಬಸ್ರೂರಿನ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಶಾಲಾ ಸಂಚಾಲಕ ತನ್ನೊಂದಿಗೆ ಕೊಠಡಿಯಲ್ಲಿ ಶಿಕ್ಷಕಿಯನ್ನು ಅಸಭ್ಯವಾಗಿ ವರ್ತಿಸಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದ ಆ ಶಾಲೆಯ ಉಪ ಪ್ರಾಂಶುಪಾಲೆ ಪೊಲೀಸರಿಗೆ ಏ.1ರಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮದೇ ಶಿಕ್ಷಣ ಸಂಸ್ಥೆಯ ಉಪಪ್ರಾಂಶುಪಾಲೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಆರೋಪಿ ಬಸ್ರೂರಿನ ಆಂಗ್ಲ ಮಾಧ್ಯಮ ಖಾಸಗಿ ಶಿಕ್ಷಣ ಸಂಸ್ಥೆಯ ಸಂಚಾಲಕ ಸಂತೋಷ್ ಶೆಟ್ಟಿಗೆ ಕುಂದಾಪುರದ ಜಿಲ್ಲಾ ನ್ಯಾಯಾಲಯವು ಷರತ್ತು ಬದ್ಧ ನಿರೀಕ್ಷಣ […]
ಬೆಂಗಳೂರು: ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಎಂಪಿಗಳು ಜಿಎಸ್ವಿಯ ಕುರಿತು ಸಂಸತ್ನಲ್ಲಿ ಒಂದು ಮಾತನ್ನು ಎತ್ತದೆ ರಾಜ್ಯಕ್ಕೆ ಮೋಸ ಮಾಡಿದ್ದಾರೆ. ಆದ್ದರಿಂದ ಅವರನ್ನು ಬೆಂಗಳೂರಿನ ಜನ ಬೆಂಬಲಿಸಬಾರದು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಪ್ರಗತಿಪರ ಚಿಂತಕರು ಎಂದು ಮನವಿ ಮಾಡಿದ್ದಾರೆ ಪಕ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಮತ್ತು ಚಿಂತಕ ತಲಕಾಡು ಚಿಕ್ಕರಂಗೇಗೌಡ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕರ್ನಾಟಕದ ಜಿಎಸ್ಟಿ ಪಾಲನ್ನು ರಾಜ್ಯಕ್ಕೆ ಕೊಡದೆ ಬೇರೆ ರಾಜ್ಯಗಳಿಗೆ ಕೊಟ್ಟು ಅನ್ಯಾಯ ಮಾಡಿದೆ.ಇಲ್ಲಿ ಬಂದ ಆದಾಯವನ್ನು ಬೇರೆ […]
ಗದಗ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಮನೆ ಮಗನೇ ಕುಟುಂಬ ಮುಗಿಸಲು ಸುಪಾರಿ ನೀಡಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಸಂಬಂಧ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದ ಭೀಕರ ಪ್ರಕರಣದಲ್ಲಿ ನಾಲ್ವರ ಕೊಲೆಯಾಗಿತ್ತು. ಪ್ರಕಾಶ್ ಬಾಕಳೆ ಅವರ ಮೊದಲ ಪತ್ನಿಯ ಹಿರಿಯ ಮಗ ವಿನಾಯಕ್ ಬಾಕಳೆ ಅವರೇ ಕೊಲೆಗೆ ಸುಪಾರಿ ನೀಡಿದ್ದಾಗಿ ತಿಳಿದು ಬಂದಿದೆ. […]