
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ.ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ […]

ಸಕಲೇಶಪುರ : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇಂದು ಮತ್ತೆ ಭೂ ಕುಸಿತ ಉಂಟಾಗಿದೆ. ಎತ್ತಿನಹಳ್ಳ ಪೈಪ್ ಲೈನ್ ಹಾದು ಹೋಗುವ ಹೆಗ್ಗದೆ ಕಪ್ಪಳ್ಳಿ ಮಧ್ಯದಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ವಾಹನ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಸ್ಥಳಕ್ಕೆ ಆಗಮಿಸಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣನು ತೆರವುಗೊಳಿಸಿದ ನಂತರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಶಿವಮೊಗ್ಗ, ಜುಲೈ 26, 2024: ಶಿಕಾರಿಪುರದ ಸೇಂಟ್ ಥೆರೇಸಾ ಆಫ್ ಚೈಲ್ಡ್ ಜೀಸಸ್ ಚರ್ಚ್‌ನ ಪ್ಯಾರಿಷ್ ಧರ್ಮಗುರು ರೆ.ಫಾ.ಅಂಥೋನಿ ಪೀಟರ್ ಅವರ ಅಂತ್ಯಕ್ರಿಯೆಯು ಇಂದು ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು. ಆಂಟನಿ ಪೀಟರ್ ಅವರು ಮಂಗಳವಾರ ಜುಲೈ 23 ರಂದು ಮಧ್ಯಾಹ್ನ ತಮ್ಮ ಪ್ಯಾರಿಷ್ ಶಿಕಾರಿಪುರಕ್ಕೆ ಹೋಗುವ ಮಾರ್ಗದಲ್ಲಿ ಚಿನ್ನಿಕಟ್ಟೆಯಲ್ಲಿ ರಸ್ತೆ ಅಪಘಾತಕ್ಕೊಳಗಾದರು. ಅವರು ಶಿವಮೊಗ್ಗದಿಂದ ಪ್ರಯಾಣಿಸುತ್ತಿದ್ದರು. ಆವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ಗಂಟೆಗೆ […]

ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ ಶಿಕ್ಷಕಿ ಪದ್ಮಾವತಮ್ಮ ಅವರನ್ನು ಸನ್ಮಾನಿಸಲಾಯಿತು.

ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಳೆಂದು ಪ್ರಿಯತಮೆ ಮೇಲೆ ಹಲ್ಲೆ ನಡೆಸಿ ಪ್ರಿಯಕರ ಹತ್ಯೆಗೂ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಕೊಲೆ ಮಾಡಿದ ಆರೋಪಿ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಿಯಕರ ಕೊಲೆ ಮಾಡಿದ್ದಾನೆಂದು ತಿಳಿದುಬಂದಿದೆ. ತೀರ್ಥಹಳ್ಳಿಯಲ್ಲಿ ಫೈನಾನ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಯುವತಿ ನರ್ಸಿಂಗ್ ವ್ಯಾಸಂಗ […]

ಬೆಂಗಳೂರು: ಮಹಿಳಾ ಪೇಯಿಂಗ್ ಗೆಸ್ಟ್ ಒಂದಕ್ಕೆ ತಡರಾತ್ರಿ ಯುವಕನೊಬ್ಬ 11.10ರ ಸುಮಾರಿಗೆ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾದ ಯುವತಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ […]

ಕೋಟ, ಜು. 22: ಮಣೂರು-ಪಡುಕರೆ ಭಾಗದಲ್ಲಿ ಈ ಬಾರಿ ಕಡಲ್ಕೊರೆತ ತೀವ್ರಗೊಂಡಿದ್ದರಿಂದ ಮೀನುಗಾರಿಕೆ ಇಲಾಖೆ ಎಂಜಿನಿಯರ್ ಡಯಾಸ್ ಹಾಗೂ ಮಾಜಿ ಸಚಿವ. ಜಯಪ್ರಕಾಶ್ ಹೆಗ್ಡೆ ಸ್ಟಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದ್ದಾರೆ. ಇಲ್ಲಿನ. ಜಿ.ಎ. ಕಾಂಚನ್ ರಸ್ತೆ ಹಾಗೂ ಲಿಲ್ಲಿ ಫೆರ್ನಾಂಡಿಸ್ ರಸ್ತೆಯಲ್ಲಿ ಸುಮಾರು 300 ಮೀಟರ್‌ನಷ್ಟುಸ್ಥಳದಲ್ಲಿ ಶಾಸ್ವತ ತಡೆಗೋಡೆ ಇಲ್ಲ, ಹಾಗಾಗಿ ಪ್ರತಿ ವರ್ಷ ಇಲ್ಲೆ ಸಮಸ್ಯೆ ಎದುರಾಗುತ್ತದೆ. ಕಳೆದ ಮಳೆಗಾಲದಲ್ಲಿ ತೀವ್ರವಾದ ಕಡಲ್ಕೊರೆತ ಉಂಟಾಗಿತ್ತು. ಕಡಲ ಅಲೆಗಳ ಹೊಡೆತಕ್ಕೆ ಇಲ್ಲಿನ ಸಂಪರ್ಕ ರಸ್ತೆ ಕಡಿತವಾಗುವ […]

ಬೆಂಗಳೂರು, ಜು.23-ಕಾರ್ಕಳ ಥೀಮ್ ಪಾರ್ಕ್ ಹಗರಣ ನಕಲಿ ಪರಶುರಾಮ ಮೂರ್ತಿ ಪ್ರತಿಷ್ಠಾಪನೆ ಹಿಂದು ಧರ್ಮದೇವರನ್ನು ಅವಮಾನ ಮಾಡಿದ ಹಾಗೂ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಮಾಜಿ ಸಚಿವ ಹಾಗೂ ಶಾಸಕರಾದ ಪಿ ಸುನೀಲ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ನೇತ್ರತದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರ ಪ್ರತಿಭಟನೆಯಲ್ಲಿ ಪರಶುರಾಮ ಥೀಮ್ ಪಾರ್ಕ್ ಹಗರಣದ […]

ಶಿಕಾರಿಪುರ: ಭೀಕರ ಅಪಘಾತವೊಂದರಲ್ಲಿ ಫಾದರ್ ಆಂತೋನಿ ಪೀಟರ್ ಸಾವನ್ನಪ್ಪಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.ದಾವಣಗೆರೆ ಜಿಲ್ಲೆ ಸವಳಂಗ ಬಳಿಯ ಚಿನ್ನಿಕಟ್ಟೆಯ ಬಳಿ ಇಯೊನ್ ಕಾರು ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಕ್ರೈಸ್ತಧರ್ಮದ ಗುರುಗಳು ಸಾವನ್ನಪ್ಪಿದ್ದಾರೆ.ಇಂದು ಮೂರುವರೆ ಹೊತ್ತಿಗೆ ಗಂಟೆಗೆ ನಡೆದಿದೆ. ಹಾನಗಲ್ ನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ KSRTC ಬಸ್ ಮತ್ತು ಶಿವಮೊಗ್ಗದಿಂದ ಹೊರಟಿದ್ದ ಇಯೊನ್ ವಾಹನಗಳ ನಡುವೆ ಡಿಕ್ಕಿ ಯಾಗಿದೆ. ಶಿಕಾರಿಪುರದ ಸೇಂಟ್ ಥೆರೆಸಾ ಲಿಟ್ಲ್ […]