ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ದೇಶ ಉತ್ತಮ ಆದಾಯಗಳಿಗೆಯಲ್ಲಿದ್ದು, ಇಸ್ರೇಲ್ ನಲ್ಲಿ ಯುದ್ಧದ ನಂತರ ಕೃಷಿ ಕ್ಷೇತ್ರಕ್ಕೆ ಬಹು ಮುಖ್ಯ ಬೇಡಿಕೆ ಬಂದಿದೆ, ಈಗಾಗಲೇ ಅನೇಕರು ಇಸ್ರೇಲ್ ನಲ್ಲಿ ಉದ್ಯೋಗ ಪಡೆದಿದ್ದು, ಕೃಷಿಗೆ ಸಂಬಂಧಿಸಿದಂತೆ ಅನೇಕ ಕೆಲಸಗಳಿಗೆ ನೇಮಕ ನಡೆಯುತ್ತಿದೆ,ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಜೊತೆಗೆ ಉತ್ತಮ ಸಂಬಳ ನೀಡಲಾಗುವುದು ವಿ ಸೂ :- ಪಾಸ್ಪೋರ್ಟ್ ಮೂರು ವರ್ಷ ಮುಂಚೆ ಮಾಡಿಸಿರಬೇಕು,ಇಂಗ್ಲೀಷ್ ಸಂವಾದ ಅರಿವಿರಬೇಕು ಸಂಪರ್ಕಿಸಿ :- ರಾಜು ಆರ್ ಶಿವಮೊಗ್ಗ 7892808814, ಅವಿವಾ ಕಾಂಚನ್ 8329800804
ನವದೆಹಲಿ: ಆನ್‌ಲೈನ್ ವಂಚನೆಯ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರ ಸುಮಾರು 100 ವೆಬ್‌ಸೈಟ್‌ಗಳನ್ನು ನಿಷೇಧಿಸಿದೆ. ಇವು ಆರ್ಥಿಕ ವಂಚನೆಗಳಲ್ಲಿ ಭಾಗಿಯಾಗಿದ್ದವು ಮತ್ತು ಈ ಆದಾಯವನ್ನು ಭಾರತದಿಂದ ಹೊರಗೆ ವರ್ಗಾಯಿಸುತ್ತಿದ್ದವು ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ತಿಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಸೈಬರ್ ಕ್ರೈಮ್ ಬೆದರಿಕೆ ವಿಶ್ಲೇಷಣಾ ಘಟಕದ (ಎನ್‌ಸಿಟಿಎಯು) ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಈ ವೆವ್‌ಸೈಟ್‌ಗಳನ್ನು ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. “ಎನ್‌ಸಿಟಿಎಯು ಕಳೆದ […]
ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಶನ್ ಮಂಗಳೂರು ಆಯೋಜಿಸಿದ್ದ 3ನೇ ಆವೃತ್ತಿಯ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ 3ನೇ ಡಿಸೆಂಬರ್ 2023. ಪಂದ್ಯಾವಳಿಯನ್ನು ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಕ್ರೈಸ್ತ ಸಮುದಾಯದ ಆಟಗಾರರಿಗಾಗಿ ವಿಶೇಷವಾಗಿ ಆಯೋಜಿಸಲಾಗಿತ್ತು.ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಮುದಾಯದ ಕ್ರೀಡಾ ಪ್ರೇಮಿಗಳಲ್ಲಿ ಕ್ರೀಡಾ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸ್ಪರ್ಧೆಗಳು ಮತ್ತು ಪಂದ್ಯಾವಳಿಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುವ ಸ್ಪಷ್ಟ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿತು. ಫುಟ್ಬಾಲ್, ವಾಲಿಬಾಲ್, […]
ಖಾಸಗಿ ಬಾಡಿಗೆ ವಾಹನಗಳಲ್ಲಿ (ಖಾಸಗಿ ಸೇವೆಯ ವಾಹನಗಳಲ್ಲಿ) ಒಬ್ಬೊಬ್ಬರೇ ಪ್ರಯಾಣಿಸುವುದೆಂದರೆ ಇತ್ತೀಚಿನ ದಿನಗಳಲ್ಲಿಭಯವಾಗಿದೆ. ಮಹಿಳೆ, ಮಕ್ಕಳು, ಗಂಡಸರೆನ್ನದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳು ಸಂಭವಿಸುತ್ತಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಾತ್ರಿ ವೇಳೆ ಇಲ್ಲವೇ ಅಪರಿಚಿತ ಸ್ಥಳಕ್ಕೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶಿಸಲಾಗಿದೆ. ವಿಎಲ್‌ಟಿ ಹಾಗೂ ಪ್ಯಾನಿಕ್ ಬಟನ್ […]
ಬೆಂಗಳೂರು: ರಾಜ್ಯದ ರಾಜಧಾನಿಯ ಹಲವು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿ ಗಳಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆ ಶಾಲೆಗಳಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಸಿದ್ದಾರೆ.ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಪೋಷಕರು ಶಾಲೆಯತ್ತ ಧಾವಿಸುತ್ತಿದ್ದು, ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. 15 ಶಾಲೆಗಳ ಪೈಕಿ 13 […]
ಹುಲಿ ದಾಳಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಸುಮಾರು 10 ವರ್ಷ […]
ಶ್ರೀನಿವಾಸಪುರ: ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ಜಗದ್ಗುರು ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.ಬ್ರಾಹ್ಮಣ ಸಮುದಾಯ ತಮ್ಮೊಳಗೆ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಹ ಬದಿಗೊತ್ತಿ ಒಗ್ಗೂಡಬೇಕು. ಸಮಾಜದ ಎಲ್ಲ ರಂಗಗಳಲ್ಲೂ ಮುಂದೆ ಬರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಸಾಂಸ್ಕøತಿಕ ಪರಂಪರೆಗೆ ಬೆಲೆ ನೀಡಬೇಕು. […]
ಚಿತ್ರದುರ್ಗ, ಹಿರಿಯೂರು, ನವೆಂಬರ್ 26, 2023: ಹಿರಿಯೂರಿನ ಅಸಂಪ್ಷನ್ ಶಾಲೆಗಳು, ಚಿತ್ರದುರ್ಗ ಜಿಲ್ಲೆ, ಶಿವಮೊಗ್ಗ ಧರ್ಮಪ್ರಾಂತ್ಯವು ತನ್ನ ವಾರ್ಷಿಕ ದಿನ 2023 ಅನ್ನು ನವೆಂಬರ್ 25 ರಂದು ಸಂಜೆ 5 ರಿಂದ 9:30 ರವರೆಗೆ ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಬೆಂಗಳೂರು ಆರ್ಚ್ ಡಯಾಸಿಸ್ ನ ವಿಕಾರ್ ಜನರಲ್ ಮಾನ್ಸಿಂಜರ್ ಸಿ ಫ್ರಾನ್ಸಿಸ್ ವಹಿಸಿದ್ದರು. ಮೌಂಟ್ ಕಾರ್ಮೆಲ್ ಎಜುಕೇಶನ್ ಸೊಸೈಟಿ(ಆರ್) ಕಾರ್ಯದರ್ಶಿ ರೆ.ಫಾ.ವೀರೇಶ್ ಮೊರಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯೂರಿನ ಪುರಸಭಾ ಸದಸ್ಯೆ ಶ್ರೀಮತಿ ಮಗ್ದಲಾ ಮರಿಯಾ, ಚಿತ್ರದುರ್ಗದ […]
ಹಾಸನ: ಎಸ್ ಡಿಎ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ.. 31 ವರ್ಷದ ಸುಚಿತ್ರಾ ಮೃತ ಮಹಿಳೆ ಅಧಿಕಾರಿ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ್ ಒನ್ ಕೇಂದ್ರದಲ್ಲಿ ಎಸ್ ಡಿಎ ಅಧಿಕಾರಿಯಾಗಿಕಾರ್ಯನಿರ್ವಹಿಸುತ್ತಿದ್ದರು. ಸುಚಿತ್ರಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಆದರೆ ಈಗ ಏಕಾಏಕಿರಕ್ಷಣಾಪುರಂ ಬಡಾವಣೆಯ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಎಸ್ ಡಿಎ ಅಧಿಕಾರಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ […]