ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಬಳಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಗೋಡೆ ಕುಸಿದು ನಾಲ್ವರ ಸಾವನ್ನಪ್ಪಿರುವ ಕರಾಳ ಘಟನೆ ನಡೆದಿದೆ. ಮನೋಜ್ ಕುಮಾರ್ ಸದಯ್ (35), ರಾಮ್ ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದೆಯ (22) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಖಾಸಗಿ ಸಂಸ್ಥೆಯ ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕಾರ್ಮಿಕರ ಶೆಡ್ ಮೇಲೆ ಕುಸಿದು ಕಾರ್ಮಿಕರು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದುರ್ಘಟನೆ ನಡೆದ ಸಂದರ್ಭದಲ್ಲಿ ಒಟ್ಟು […]
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆಯಲ್ಲಿ, ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ ಕಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಉತ್ತರ ಒಳನಾಡಿನಲ್ಲಿ ಕೆಲವಡೆ ಮಳೆಯಾಗಿದ್ದು, ನಿನ್ನೆ ರಾತ್ರಿ ಬಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಗೋಡೆ ಕುಸಿದು ನಾಲ್ವರ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಬಳಿ ನಡೆದಿದೆ. ಇನ್ನು […]
ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ದ್ವಾರದಲ್ಲಿ ವೇಗದಿಂದ ಬರುತಿದ್ದಾಗ ಟೋಲ್ ಗೇಟ್ ಸಿಬಂದಿಯನ್ನು, ಚಾಲಕ ಉಳಿಸು ಪ್ರಯತ್ನದಿಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ನುಗ್ಗಿ ಅಪ್ಪಳಿಸಿದ ಪ್ರಕರಣದಲ್ಲಿ ಗಾಯಗೊಂಡಿದ್ದ ನಾಲ್ವರು ಸಾವನ್ನಪ್ಪಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆ, ಮೂವರು ಪುರುಷರು ಸೇರಿದ್ದು, ಮೃತರನ್ನು ಗಜಾನನ, ಗೀತಾ, ಲೋಕೇಶ್ ಹಾಗೂ ಮಂಜುನಾಥ ಎಂದು ಗುರುತಿಸಲಾಗಿದೆ. ಅಂಬುಲೆನ್ಸ್ ನಲ್ಲಿ ಒಟ್ಟು ಏಳು ಜನರು ಪ್ರಯಾಣಿಸುತ್ತಿದ್ದು, […]
ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಅನಾವಶ್ಯಕವಾಗಿ ತಡೆದು ನಿಲ್ಲಿಸಬಾರದು ಎಂದು ಪೊಲೀಸ್‌ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ಆದೇಶವು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುತ್ತೆ. . ಡ್ರಿಂಕ್ ಆಂಡ್ ಡ್ರೈವ್ ಮತ್ತು ಕಣ್ಣಿಗೆ ಕಾಣುವಂತಹ ಸಂಚಾರ ನಿಯಮ ಉಲ್ಲಂಘನೆ, ಅಪರಾಧ ಕಂಡುಬಂದ ಹೊರತಾಗಿ ಕೇವಲ ದಾಖಲೆಗಳ ಪರಿಶೀಲನೆಗಾಗಿ ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ತಪಾಸಣೆನಡೆಸುವಂತಿಲ್ಲ. ಈ ಸೂಚನೆಗಳನ್ನು ಕೆಳ ಹಂತಕ್ಕೆ ತಲುಪಿಸಿ ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿಎಂದು ಸೂದ್ ಎಚ್ಡರಿಸಿದ್ದಾರೆ.
ಕೋಲಾರ : ಮೇಕ್ ಇನ್ ಇಂಡಿಯಾ , ಡಿಜಿಟಲ್ ಇಂಡಿಯಾ , ಸ್ಟಾರ್ಟ್‌ಅಪ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಂಡು ಯುವಜನತೆ ಶ್ರೇಷ್ಠ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಗೌರವಾನ್ವಿತ ರಾಜ್ಯಪಾಲರು ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹೋಟ್ ಅವರು ತಿಳಿಸಿದರು . ಇಂದು ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2 ನೇ ವಾರ್ಷಿಕ […]
ಬೆಳವಾವಿ: ಯಮಕನಮರಡಿ ಮತಕ್ಷೇತ್ರದ ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲಕಾಂಬ ಗ್ರಾಮದ ನೂರಾರು ಬಿಜೆಪಿಯ ಕಾರ್ಯಕರ್ತರು ಇವತ್ತು ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ಕಾಂಗ್ರೇಸ ಸೇರ್ಪಡೆಯಾದರು ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಇಲಿಯಾಸಬೇಗ ಇನಾಮದಾರ ಶಾಸಕರ ಆಪ್ತ ಸಹಾಯಕರಾದ ಶ್ರೀ ಅರವಿಂದ ಕಾರ್ಚಿ ಹಾಗೂ ಪ್ರಮುಖ ನಾಯಕರು ಉಪಸ್ಥಿರಿದ್ದರು.
JANANUDI NEWS NETWORK ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಹಾಗೂ ಅದರೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆತ್ಮಹತ್ಯೆ ಡ್ರಾಮ ಮಾಡಲು ಮುಂದಾದ ವ್ಯಕ್ತಿಯೋರ್ವನ ಸಂಚಿಗೆ ಅಮಾಯಕ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ ಆನಂದ ದೇವಾಡಿಗ ಎಂದು ತಿಳಿಯಲಾಗಿದೆ. ಕಾರ್ಕಳ ಮೂಲದ ಆನಂದ ದೇವಾಡಿಗ (62) ಕೊಲೆಯಾದ ವ್ಯಕ್ತಿ. ಕಾರ್ಕಳದ ಮಾಳ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ ಶಿವನಗರದ […]
JANANUDI NEWS NETWORK (EDITOR : BERNARD D’COSTA) ಬೆಂಗಳೂರು: ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತವುಡಾಗಿದ್ದು, ರಾಜಧಾನಿ ಬೆಂಗಳೂರು ಹಾಗೂ ಮಂಗಳೂರು ಉಡುಪಿ ಕುಂದಾಪುರ ಈ ಮಾರ್ಗದ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟಿನ ದೋಣಿಗಲ್ ಸಮೀಷ ಭೂ ಕುಸಿತವುಂಟಾಗಿದೆ. ಧಾರಾಕಾ ಮಳೆಯಿಂದಾಗಿ ಇದೇ ಭಾಗದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಭೂಕುಸಿತ ಸಂಭವಿಸಿತ್ತು. ಮತ್ತಷ್ಟು ಭೂಕುಸಿತವಾಗದಂತೆ. ಮರಳು ಚೀಲಗಳನ್ನು ಹಾಕಲಾಗಿತ್ತು. ಆದರೆ ಇಂದು ದೋಣಿಗಲ್ ನಲ್ಲಿ ಮತ್ತೆ […]
JANANUDI NEWS NETWORK (EDITOR : BERNARD D’COSTA) ಕುಂದಾಪುರ: ಕಲ್ಯಾಣಪುರ ಸಮೀಪ ಉಪ್ಪುರಿನಲ್ಲಿ 5 ವರ್ಷದ ಬಾಲಕ ಕೆರೆಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುವೈಟ್ ನ ನಿವಾಸಿಗಳಾದ ನಾರ್ಮನ್ ಹಾಗೂ ಸಿಲ್ವಿಯಾ ಲುವೀಸ್ ದಂಪತಿಗಳ ಪುತ್ರ 5 ವರ್ಷದ ಲಾರೆನ್ ಲುವೀಸ್ ಮೃತಪಟ್ಟ ಬಾಲಕ. ನಿನ್ನೆ ಮನೆಯಲ್ಲಿ ಬಾಲಕ ಕಾಣದಿದ್ದ ಹಿನ್ನೆಲೆಯಲ್ಲಿ ಮನೆ ಮಂದಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಬಾಲಕನ ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಹಿಂಬದಿ ಇರುವ ತೋಟದ […]