
JANANUDI.COM NETWORK ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿ ಶವ ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ. ಸಾಂಗ್ಲಿಯು ವಾಣಿಜ್ಯ ನಗರಿಯಿಂದ ಮುಂಬೈನಿಂದ 350 ಕಿಲೋ ಮೀಟರ್ ದೂರದಲ್ಲಿದ್ದು, ಸಾಂಗ್ಲಿ ಜಿಲ್ಲೆಯ ಮಾಯ್ಸಾಲ್ ಎಂಬ ಪ್ರದೇಶದಲ್ಲಿ ಈ ಭಯಾನಕ ಘಟನೆ ನಡೆದಿದೆ. ಮ್ರತ ಪಟ್ಟವರಲ್ಲಿ ವೈದ್ಯರಾಗಿದ್ದ ಪೋಷಟ್ ಯಲ್ಲಪ್ಪ ವನ್ಮೋರೆ (52), ಸಂಗೀತಾ ಪೋಪಟ್ ವನ್ಮೋರೆ (48), ಅರ್ಚನಾಪೋಷಟ್ ವನ್ಮೋರೆ (30), ಶುಭಂ ಪೋಪಟ್ ವನ್ಮೋರೆ (28), ಮಾಣಿಕ್ […]

JANANUDI.COM NETWORK ನವದೆಹಲಿ: ಬಿಹಾರ, ಗುಜರಾತ್, ಜಾರ್ಖಂಡ್, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಟಾಂ, ಮಹಾರಾಷ್ಟ್ರ, ಒಡಿಶಾ ಹಾಗೂ ಕರ್ನಾಟಕ ಸೇರಿದಂತೆ ಹಲವು. ರಾಜ್ಯಗಳಲ್ಲಿ ಮುಂದಿನ ನಾಲ್ಕು ದಿನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಾರುತಗಳು ಕರಾವಳಿಗೆ ಅಪ್ಪಳಿಸುತ್ತಿವೆ. ಜೊತೆಗೆ ಗಾಳಿ ಕೂಡ ಭಾರಿ ವೇಗದಲ್ಲಿ ಬೀಸುತ್ತಿರುವ ಕಾರಣದಿಂದ ಹವಮಾನದಲ್ಲಿ ಬದಲಾವಣೆ ಉಂಟಾಗಿ ಗುಡುಗು ಸಹಿತ ಮಳೆಯಾಗುತ್ತಿದೆ.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕು ಕಛೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮವಾಸ್ತವ್ಯ ದಂತಹ ಕಾರ್ಯಕ್ರಮಗಳನ್ನು ಸರ್ಕಾರವು ಜಾರಿಗೆ ತಂದಿದ್ದು ಸಾರ್ವಜನಿಕರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ ಎಂದು ತಹಶೀಲ್ದಾರ್ ಶರೀನಾತಾಜ್ ಹೇಳಿದರು.ತಾಲ್ಲೂಕಿನ ನೆಲವಂಕಿ ಹೋಬಳಿ ವ್ಯಾಪ್ತಿಯ ಜಿಂಕಲವಾರಿಪಲ್ಲಿ ಗ್ರಾಮದ ಪ್ರಾಥಮಿಕ ಶಾಲಾವರಣದಲ್ಲಿ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ವತಿಯಿಂದ ಶನಿವಾರ ನಡೆದ ಗ್ರಾಮವಾಸ್ತ್ಯ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು.ಸಾರ್ವಜನಿಕರು ನೀಡುವಂತಹ ಅರ್ಜಿಗಳನ್ನು ಇಲಾಖವಾರು ವಿಂಗಡಿಸಿ ಸ್ಥಳೀಯವಾಗಿ ಸಮಸ್ಯೆಗಳು ಪರಿಹಾರ ಸಿಗುವುದಾದರೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ಕುಳಿತಿದ್ದ 14740 ವಿದ್ಯಾರ್ಥಿಗಳ ಪೈಕಿ 8904 ಮಂದಿ ಉತ್ತಿರ್ಣರಾಗುವ ಮೂಲಕ ಶೇ.60.41 ಫಲಿತಾಂಶ ಬಂದಿದ್ದು, ವಿಜ್ಞಾನ ವಿಭಾಗದಲ್ಲಿ ಮುಳಬಾಗಿಲು ಎಸ್ಡಿಸಿ ಕಾಲೇಜಿನ ಫರ್ವೀನ್ ಫಾತೀಮಾ, ವಾಣಿಜ್ಯ ವಿಭಾಗದಲ್ಲಿ ಇದೇ ಕಾಲೇಜಿನ ಅಧಿತಿ ಕಲ್ಗಟಗಿ ಹಾಗೂ ಕಲಾ ವಿಭಾಗದಲ್ಲಿ ಕೋಲಾರದ ಬಾಲಕಿಯರ ಜೂನಿಯರ್ ಕಾಲೇಜಿನ ಬಿ.ಕೀರ್ತನಾ ಹಾಗೂ ಆರ್.ಇಂದು ಜಿಲ್ಲೆಗೆ ಮೊದಲಿಗರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.ಫಲಿತಾಂಶದ ಕುರಿತು […]

JANANUDI.COM NETWORK ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. 61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.61.88 ಮಕ್ಕಳು ತೇರ್ಗಡೆಯಾಗಿದ್ದಾರೆ ಎಂದು. ತಿಳಿಸಿದರು. ವಿದ್ಯಾರ್ಥಿಗಳಿಗೆ ಫಲಿತಾಂಶದ ಬಗ್ಗೆ ಅನುಮಾನವಿದ್ದರೆ ಸ್ಕ್ಯಾನ್ ಕಾಪಿ ಪಡೆಯಬಹುದಾಗಿದ್ದು, ಇಂದಿನಿಂದ ಜೂನ್ 30ವರೆಗೆ ಅವಶಾಶಪಿದೆ. ಪ್ರತಿ ವಿಷಯದ ಸ್ಕ್ಯಾನ್ ಕಾಪಿಗೆ […]

JANANUDI.COM NETWORK ಉಡುಪಿ : ರಾಜ್ಯದ ಹಲಪು ಕಡೆ ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಎಸಿಬಿ ಯಿಂದ ಹಲವಾರು ದಾಳಿಗಳು ನಡೆದಿವೆ. , ಉಡುಪಿಯಲ್ಲಿ ನಡೆದ ದಾಳಿಯಲ್ಲಿ, ಸಹಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಹರೀಶ್ ಮನೆಗೂ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಸಣ್ಣ ನೀರಾಪರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಇಲಾಖೆಯ ಸಹಾಯಕ ಇಂಜಿನಿಯರ್ ಆಗಿ ಹರೀಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಅಧಿಕಾರಿಯ ಬಂಗಾರದ ಖಜಾನೆ ಕಂಡು […]

JANANUDI.COM NETWORK ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಟ್ರಸ್ಟ್ ವತಿಯಿಂದ ಜೂನ್ 19ರಂದು ವಿದ್ಯಾರ್ಥಿ ಸಹಾಯಧನ ವಿತರಣೆಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೂನ್ 19 ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಅರ್ಹ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿ ಮಾರ್ಗದರ್ಶನ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿನ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆಯುವ ಈ ಸಮಾರಂಭದಲ್ಲಿ ಹಿರಿಯ ಲೇಖಕ, ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು […]

JANANUDI.COM NETWORK ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮೂರನೇ ಅಧ್ಯಕ್ಷರಾಗಿದ್ದ ಎ.ಜಿ. ಕೊಡ್ಗಿ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎ.ಜಿ. ಕೊಡ್ಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದ ಚಿಕಿತ್ಸೆಗೆ […]

JANANUDI.COM NETWORK ಮಂಗಳೂರು : ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ಕೊಡದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ (14) ಎಂದು ಗುರುತಿಸಲಾಗಿದ್ದು, ಈತ ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿಧ್ಯಾನಿಕೇತನದಲ್ಲಿ 9ನೇ ತರಗತಿ ಕಲಿಯುತ್ತಿದ್ದ.. ಜೂನ್ 11 ರಂದು ಆತನ ತಾಯಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಯಿಗೆ ಶುಭಾಷಯ […]