ಕವಿತೆ :ಸಾವನ್ ಕೆ ಸಿಂಧನೂರು ಕನಸುಗಳಿಗೆ ಬಣ್ಣಗಳೇ ಇಲ್ಲ ಯಾರಿಗೋ ಇಲ್ಲಿ ಅತಿ ಜರೂರಿ ಕೆಲಸವಿದೆ ಮತ್ತೊಬ್ಬ ಜಾಗ ಖಾಲಿ ಮಾಡಬೇಕಿದೆ. ಥೇಟ್ ದ್ರವ್ಯವೊಂದು ಸ್ಥಳ ಅಕ್ರಮಿಸಿದಂತೆ.. ಭೂಮಿಗೆ ನಾನೇ ಬೇಲಿ ಹಾಕಬಹುದಿತ್ತು ಮೊದಲಿಗೆ ನಾನೇ ಹುಟ್ಟಿದ್ದರೆ ಎಂದುಕೊಳ್ಳುತ್ತಲೇ ಯುದ್ಧಕ್ಕೆ ಹೊರಟವರ ಬೆನ್ನ ಹಿಂದಿನ ಸ್ಮಶಾನ ನೆನಪಾಗುತ್ತದೆ. ಒಡೆದ ಬಳೆಗಳ ಚೂರು ಕಣ್ಣಿಗೆ ತಾಕಿ ನನ್ನ ಕತ್ತಿ, ಗುರಾಣಿ ತುಕ್ಕು ಹಿಡಿದಿವೆ. ಗಾಂಧಿ ನೋಟಿನ ಹಿಂದೆ ಬಿದ್ದ ನನಗೆ ಅದಕ್ಕಂಟಿದ ಬೆವರು, ರಕ್ತ, ವೀರ್ಯ ಮಿಶ್ರಣದ ಹೊಚ್ಚ […]