ಶ್ರೀನಿವಾಸಪುರ : ಸೋಮವಾರದಿಂದ ರಾಜ್ಯಾದ್ಯಾಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಸಕಲ ಸಿದ್ದತೆಯೊಂದಿಗೆ ಸರ್ಕಾರದ ಸುತ್ತೋಲೆಯಂತೆ ಪ್ರತಿ ಕೊಠಡಿಗಳಿಗೆ ಸಿಸಿ ಕ್ಯಾಮರಗಳನ್ನು ಆಳವಡಿಸಲಾಗಿದೆ. ಇದರ ಮುಖ್ಯ ಉದ್ದೇಶ ಯಾವುದೇ ಕಾರಣಕ್ಕೂ ನಕಲು ಆಗಬಾರದು ಎನ್ನುವ ಉದ್ದೇಶದಿಂದ ಪ್ರತಿ ಕೊಠಡಿಗಳಿಗೂ ಸಿಸಿ ಕ್ಯಾಮರಗಳನ್ನು ಆಳವಡಿಸಲಾಗಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಹೇಳಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಲೂಕಿನಾದ್ಯಾಂತ ಒಟ್ಟು 2580 ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶವನ್ನು ಪಡೆದಿದ್ದು, 10 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ. ವಿದ್ಯಾರ್ಥಿಗಳು ನಿರ್ಭೀತಿಯಿಂದ , ಬರೆಯಲು ಸಕಲ ಸಿದ್ದತೆಗಳನ್ನು ಹಮ್ಮಿಕೊಳ್ಳಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಡೆಸ್ಕ್ , ಕುಡಿಯುವ ನೀರು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹಾಗೂ ಆಕಸ್ಮಿಕವಾಗಿ ಆರೋಗ್ಯದಲ್ಲಿ ಏರುಪೇರು ಆದಲ್ಲಿ ಪ್ರಥಮ ಚಿಕಿತ್ಸೆಯನ್ನು ಕೊಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆದ ನಂತರ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷೆ ಕೇಂದ್ರಗಳ ಸುತ್ತಮುತ್ತಾ 200 ನಿಷೇದಾಜ್ಞೆಯೊಂದಿಗೆ ಬಿಗಿ ಪೊಲೀಸ್ ಬಂದೋಬಸ್ತ್ನ್ನು ವ್ಯವಸ್ಥೆ ಮಾಡಲಾಗಿದೆ ಎಂದರು. ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾ.25 ರಿಂದ ಏ.6 ರ ತನಕ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.