ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ದುಡಿಯುವ ವರ್ಗ ಸಂಘಟಿತ ಹೋರಾಟ ನಡೆಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಬೃಹತ್ ಜನ ಗಣರಾಜ್ಯೋತ್ಸವ ಪೆರೇಡ್ ಪ್ರಚಾರಾಂದೋಲನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿದ್ದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿದೆ. ದುಡಿಯುವ ವರ್ಗ ಬೀದಿಗೆ ಬೀಳುವಂತೆ ಮಾಡಿದೆ ಎಂದು ಆರೋಪಿಸಿದರು.
ರೈತ, ಕಾರ್ಮಿಕ, ದಲಿv ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಜ.26 ರಂದು ಬೆಂಗಳೂರಿನಲ್ಲಿ ಪೆರೇಡ್ ನಡೆಸಲು ನಿರ್ಧರಿಸಲಾಗಿದೆ. ಅಂದು ಸಾವಿರಾರು ವಾಹನಗಳೊಂದಿಗೆ ಬೆಂಗಳೂರು ಪ್ರವೇಶಿಸಲಾಗುವುದು. ಸಂಯುಕ್ತ ಹೋರಾಟ ಸಂಘಟನೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯದ ಎಲ್ಲ ಕಡೆಗಳಿಂದ ಹರಿದು ಬರುವ ವಾಹನಗಳು ಪ್ರತಿಭಟನೆಯಲ್ಲಿ ಪಾಲ್ಗೊಲಿದ್ದು, ಸರ್ಕಾರದ ಕಣ್ಣು ತೆರೆಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಕನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪಾತಕೋಟ ನವೀನ್ ಕುಮಾರ್, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ, ಜಿಲ್ಲಾ ಘಟಕದ ಉಪಾಧ್ಯಕ್ಷ ವೀರಭದ್ರಸ್ವಾಮಿ, ಮುಖಂಡರಾದ ಬಷೀರ್, ಅಮರನಾರಾಯಣಪ್ಪ, ಈಶ್ವರ್, ಜಿ.ಈಶ್ವರಮ್ಮ, ನಾಗಭೂಷಣ್, ಎನ್.ವೀರಪ್ಪರೆಡ್ಡಿ, ಫಾರೂಕ್, ಎಸ್.ಎಂ.ನಾಗರಾಜ್, ವೆಂಕಟರಾಮರೆಡ್ಡಿ, ಮಂಜುನಾಥ್ ಇದ್ದರು.