ಉದ್ಯಮಿಯನ್ನು ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾಳಿಂದ ಕೋಟಿ ಕೋಟಿ ಹಣ ಆಸ್ತಿ ಜಪ್ತಿ

ಕುಂದಾಪುರ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯನ್ನು ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಕುಂದಾಪುರ ಕೋಟಿ ಕೋಟಿ ಆಸ್ತಿಯ ಒಡತಿ ಎಂಬುದು ಪೊಲೀಸ್‌ ತನಿಖೆಯಿಂದ ಬಹಿರಂಗವಾಗಿದೆ.ಚೈತ್ರಾ ಕುಂದಾಪುರ ಮನೆಯಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸಂಬಂಧಿಕರ ಹೆಸರಿನಲ್ಲಿ ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.ಚೈತ್ರಾ ಕುಂದಾಪುರ ಮನೆಯಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸಂಬಂಧಿಕರ ಹೆಸರಿನಲ್ಲಿ ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ. ಎಲ್ಲಾ ಸೇರಿಸಿ ಸುಮಾರು 4 ಕೋಟಿ ರೂ. ನಗದು ಪತ್ತೆಯಾಗಿದ್ದು, ಚೈತ್ರಾ ಕುಂದಾಪುರ ಖಜಾನೆ ಕಂಡು ಸಿಸಿಬಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಇನ್ನು ಬಾಗಲಕೋಟೆಯಲ್ಲಿ ಚೈತ್ರಾ ಅವರ ಕಾರು ಪತ್ತೆಯಾಗಿದ್ದು, ಪೊಲೀಸರು ಈ ಕಾರನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಖರೀದಿಸಿದ್ದ ಕಿಯಾ ಕೇರೆನ್ಸ್‌ ಕಾರು, ಮನೆ,ಸೈಟು ಹಾಗೂ ಎರಡು ಕೋಟಿ ರೂಪಾಯಿ ಎಫ್‌.ಡಿ ಹಣದನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.ಸೊಲ್ಲಾಪುರದ ಬಾರ್‌ ಅ್ಯಂಡ್‌ ರೆಸ್ಟೊರೆಂಟ್‌ ಮುಂದೆ ನಿಲ್ಲಿಸಿದ್ದ ಚೈತ್ರಾ ಅವರ ಕಾರನ್ನು ಅವರ ಸ್ನೇಹಿತ ಎಂದು ಹೇಳಲಾಗುವ ಕಿರಣ್‌ ಎನ್ನುವವರು ಸೆಪ್ಟೆಂಬರ್‌ 9 ರಂದು ಮುಧೋಳಕ್ಕೆ ತಂದಿದ್ದರು. ಕಿರಣ್‌ ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರು ತಂದು ತನ್ನ ಡ್ರೈವಿಂಗ್‌ ಸ್ಕೂಲ್‌ನಲ್ಲಿಟ್ಟುಕೊಂಡಿದ್ದರು. ಚೈತ್ರಾ ಕುಂದಾಪುರ, ಪಿಎ ಶ್ರೀಕಾಂತ್‌, ಕಿರಣ್‌ ಕರೆಯನ್ನು ಸಿಸಿಬಿ ಪೊಲೀಸರು ಟ್ರೇಸ್‌ ಮಾಡಿದ್ದಾರೆ. ಈ ಆಧಾರದ ಮೇಲೆ ಕಿರಣ್‌ ಪಶಕ್ಕೆ ಪಡೆದು ಕಾರು ಜಕ್ತಿ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

ಚೈತ್ರಾ ಕುಂದಾಪುರ ಅವರಿಗೆ ಸೇರಿದ್ದ 3 ಕೋಟಿ ರೂ. ಮೌಲ್ಯದ ಸ್ವತ್ತನ್ನು ಸಹ ಪೊಲೀಸರು ಜಶ್ತಿ ಮಾಡಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ್‌ ಹೆಸರಲ್ಲಿ ಫಿಕ್ಸೆಡ್‌ ಡೆಪಾಸಿಟ್‌ ಇಟ್ಟಿದ್ದ 1.8 ಕೋಟಿ ರೂ. ಹಣವನ್ನು ಜಫ್ತಿ ಮಾಡಿಕೊಳ್ಳಲಾಗಿದೆ. ಸ್ಥಳೀಯ ಸೊಸೈಟಿಯಲ್ಲಿದ್ದ 40 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಂಚನೆಯ ಹಣದಲ್ಲಿ ಖರೀದಿ ಮಾಡಿದ್ದ 65 ಲಕ್ಷ ರೂ. ಮೊತ್ತದ
ಚಿನ್ನಾಭರಣವನ್ನೂ ಪಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.