ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ

JANANUDI.COM NETWORK

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದ ಬೆನ್ನಲ್ಲೆ, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟಿದ್ದು ಹೋಮ್ ಕ್ವಾರ0ಟೈನ್ ಆಗಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು “ನನಗೆ ಇ0ದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ. ಸ0ಪರ್ಕಕ್ಕೆ ಬ0ದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.” ಎ0ದು ಅವರು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರು ಇಂದು ಹಿರಿಯ ಸಾಹಿತಿ ಪೆÇ್ರೀ. ಚ0ದ್ರಶೇಖರ ಪಾಟೀಲ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಅಂತಿಮ ನಮನಗಳನ್ನು ಸಲ್ಲಿಸಿದ್ದರು ಮತ್ತು ಬೆಳಗ್ಗೆ ಬೂಸ್ಟರ್ ಡೋಸಳನ್ನು ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.