ಬೆಂಗಳೂರು :ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಮಾಹಿತಿ ನೀಡಿದ್ದು, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿವೆ. ಮೇಲ್ನೋಟಕ್ಕೆ ಮಹಿಳೆಯರ ಮೇಲೆ ಹಾಸನ ಸಂಸದರು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.
ಇಂತಹ ವಿಡಿಯೋಗಳು ಮಾದ್ಯಮದ ಮೂಲಕ ಎಲ್ಲೆಡೆ ಹರಿದಾಡುತಿದ್ದು, ಯಾವ ರಾಜಕಾರಣಿಯ ವಿಡಿಯೋಗಳು ಎಂದು ಚಕಿತರಾಗಿ ಜನರು ಯೋಚಿಸುವಂತಾಗಿತ್ತು, ಆದರೆ ಈ ವಿಡಿಯೋಗಳು ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು ಎಂಸು ಹೇಳಲಾಗುತ್ತಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಸಾವಿರಾರು ವಿಡಿಯೋಗಳು ಎರಡು ಮೂರು ಪೆನ್ಡ್ರೈವ್ಗಳಲ್ಲಿ ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿವೆ ಎಂದು ಸಮಾಜಿಕ ಜಲತಾಣದಲ್ಲಿ ಚರ್ಚೆ ಆಗುತ್ತಿತ್ತು. ಒಂದಲ್ಲ, ಎರಡಲ್ಲ ಸಾವಿರಾರು ವಿಡಿಯೋಗಳಿವೆ ಎಂದು ಹೇಳಲಾಗಿದೆ. ಹಲವು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಟ್ವಿಟರ್, ಸೋಷಿಯಲ್ ಮಿಡಿಯಾಗಳ ಮೂಲಕವೂ ವಿಡಿಯೋ ವೈರಲ್ ಆಗುತ್ತಿವೆ. ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು. ಆದರೆ ಇನ್ನೊಂದೆಡೆ ಇದು ನೈಜ ವಿಡಿಯೋ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧುರಿ ಕೂಡ ಸಿಎಂ ಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು.
ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.