
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು.
ಸಮ್ಮೇಳನದ ಉದ್ಘಾಟನೆ ಪೆ.3ರಂದು ಬೆಳಿಗ್ಗೆ ನಡೆಯಲಿದ್ದು, ಅದರ ಉದ್ಘಾಟನೆಯನ್ನು ತಾವು ನೆರವೇರಿಸಿಕೊಡಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಹ್ವಾನಿಸಿದರು. ತಾವು ಸಮ್ಮೇಳನಕ್ಕೆ ಬರುವುದಾಗಿ ಸಮ್ಮತಿ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದರು.