![](https://jananudi.com/wp-content/uploads/2024/02/WhatsApp-Image-2024-02-08-at-5.37.51-PM.jpg)
ಕೋಲಾರ : ಮುಖ್ಯಮಂತ್ರಿಗಳ ಮಹತ್ವದ ಜನತಾ ದರ್ಶನ ಕಾರ್ಯಕ್ರಮವು ಬೆಂಗಳೂರಿನಲ್ಲಿ ಫೆ.8ರಂದು ಯಶಸ್ವಿಯಾಗಿ ಆರಂಭವಾಯಿತು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸುವ ಮಹತ್ವದ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಸಿಇಓ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ವಿಡಿಯೋ ಕಾನ್ಸರೆನ್ಸ್ನಲ್ಲಿ ಹಾಜರಾಗಿದ್ದರು.
ಕೋಲಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಸರೆನ್ಸ್ಲ್ಲಿ ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಅವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಜಿಲ್ಲಾ ಉಪವಿಭಾಗಧಿಕಾರಿ ವೆಂಕಟಲಕ್ಷ್ಮೀ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
![](https://jananudi.com/wp-content/uploads/2024/02/WhatsApp-Image-2024-02-08-at-5.37.51-PM-2.jpg)
![](https://jananudi.com/wp-content/uploads/2024/02/WhatsApp-Image-2024-02-08-at-5.37.51-PM-1.jpg)