ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಆರೋಗ್ಯ ರಕ್ಷಣೆಗೆ ಶ್ರಮಿಸುವ ಪೌರ ಕಾರ್ಮಿಕರು ಹಾಗೂ ಪುರಸಭೆ ಸಿಬ್ಬಂದಿ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜಿಎಸ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ನಡುವೆ ನಾಗರಿಕ ಸೇವೆ ಮಾಡುವ ವ್ಯಕ್ತಿಗಳು ಆರೋಗ್ಯದಿಂದ ಇದ್ದರೆ ಮಾತ್ರ ಸಮರ್ಪಕವಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪುರಸಭೆ ಪೌರÀ ಸುರಕ್ಷತಾ ಸಾಧನಗಳನ್ನು ತಪ್ಪದೆ ಬಳಸಬೇಕು. ಎಲ್ಲರಂತೆ ಕೊವಿಡ್ ತಡೆ ನಿಯಮ ಪಾಲಿಸಬೇಕು. ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು. ಯಾವುದೇ ರೀತಿಯ ಆರೋಗ್ಯ ಸಮಿಸ್ಯೆ ಕಂಡು ಬಂದ ಕೂಡಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯ ಬಿ.ವೆಂಕಟರೆಡ್ಡಿ, ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪರಿಸರ ಅಭಿಯಂತರ ಡಿ.ಶೇಖರ್ ರೆಡ್ಡಿ, ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್, ಅ
ಧಿಕಾರಿಗಳಾದ ನಾಗರಾಜ್, ಶಂಕರ್, ರಾಜೇಶ್ವರಿ, ನಾಗೇಶ್, ಸಂತೋಷ್ ಇದ್ದರು.