ಶ್ರೀನಿವಾಸಪುರ : ಆರೋಗ್ಯ ಕಾಳಜಿ ನಿರ್ಲಕ್ಷ್ಯತೆ ಪರಿಣಾಮ ಹಲವಾರು ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಆದ್ದರಿಂದ ನಾಗರೀಕರು ಜಾಗೃತಿರಾಗಿ ತಮ್ಮ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ತ್ಯಾಗರಾಜ ಬಡವಾಣೆಯಲ್ಲಿನ ಸರ್ಕಾರಿ ಉನ್ನತೀಕೃತ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ಡೆಂಘ್ಯು, ಚಿಕನ್ಗುನ್ಯಾ ಹಾಗು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಳ್ಳಲಾದ ಜಾಗೃತಿ ಜಾಥ ಕಾರ್ಯಕ್ರಮಕ್ಕ ಚಾಲನೆ ನೀಡಿ ಮಾತನಾಡಿದರು.
ಡೆಂಘ್ಯು ಜ್ವರದ ಸೋಂಕಿನಿಂದ ಪಾರಾಗಲು ಹೆಚ್ಚಾಗಿ ಗಾಳಿ ಮತ್ತು ಬೆಳಕಿನ ವಾತಾವರಣ ತುಂಬಿರುವ ಪ್ರದೇಶದಲ್ಲಿ ವಾಸ ಮಾಡಬೇಕಾದ ಅವಶ್ಯಕತೆ ಇರುತ್ತದೆ. ಇರುವ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳುವದರ ಮುಖಾಂತರ ಡೆಂಘ್ಯು ಸೊಳ್ಳೆಗಳಿಗೆ ಕಡಿವಾಣ ಹಾಕಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ಸಮಯದಲ್ಲಿ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಡೆಂಘ್ಯು ., ಚಿಕನ್ಗುನ್ಯಾ ಅರಿವು ಮೂಡಿಸಲು ಬಿತ್ತಿಪತ್ರಗಳನ್ನು ವಿತರಿಸಲಾಯಿತು. ಟಿಎಚ್ಒ ಮಹಮ್ಮದ್ ಷರೀಪ್, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪುರಸಭೆ ಆರೋಗ್ಯಾಧಿಕಾರಿ ಕೆ.ಜೆ.ರಮೇಶ್, ಶಾಲೆಯ ಮುಖ್ಯ ಶಿಕ್ಷಕ ಎಂ.ಬೈರೇಗೌಡ, ಆರೋಗ್ಯ ಇಲಾಖೆ ಸಿಬ್ಬಂದಿ ಎಂ.ಆಂಜಲಮ್ಮ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗುಂಡಿದ್ದರು.